ಕರಾವಳಿಯಲ್ಲಿ ರೆಡ್ ಅಲರ್ಟ್ ; ಭಾರೀ ಮಳೆಯ ಮುನ್ಸೂಚನೆ

10-09-20 03:21 pm       Mangalore Correspondent   ಕರಾವಳಿ

ಭಾರಿ ಮಳೆಯ ಮೂನ್ಸೂಚನೆಯ ಹಿನ್ನಲೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಸೆ.12ರ ವರೆಗೆ ರೆಡ್ ಅಲರ್ಟ್ ಘೋಷಣೆ.

ಮಂಗಳೂರು, ಸೆಪ್ಟೆಂಬರ್ 10: ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಬೆಳಗ್ಗಿನಿಂದ ನಿರಂತರವಾಗಿ ಮಳೆ ಸುರಿಯುತ್ತಿದೆ. ಇದೇ ವೇಳೆ, ಹವಾಮಾನ ಇಲಾಖೆ ಎರಡೂ ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ. 

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಸೆ.12ರ ವರೆಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದ್ದು ಸಾರ್ವಜನಿಕರು ನದಿ ಮತ್ತು ಸಮುದ್ರ ದಡಕ್ಕೆ ತೆರಳದಂತೆ ಸೂಚನೆ ನೀಡಲಾಗಿದೆ. ಅಲ್ಲದೆ, ತಾಲೂಕು ಮತ್ತು ಪಂಚಾಯತ್ ಮಟ್ಟದ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿದ್ದು ಯಾವುದೇ ಪರಿಸ್ಥಿತಿ ಎದುರಿಸಲು ಸಜ್ಜಾಗಿರಬೇಕು ಎಂದು ಸೂಚಿಸಲಾಗಿದೆ. ಈ ಬಗ್ಗೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾಡಳಿತಗಳು ಆಯಾ ಸ್ಥಳೀಯಾಡಳಿತದ ಅಧಿಕಾರಿಗಳಿಗೆ ಎಚ್ಚರಿಕೆ ರವಾನಿಸಿದೆ. 

ಇದೇ ವೇಳೆ, ಕೊಡಗಿನಲ್ಲಿಯೂ ಭಾರೀ ಮಳೆಯಾಗುತ್ತಿದ್ದು ಇನ್ನೆರಡು ದಿನ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ.

Join our WhatsApp group for latest news updates