ಬ್ರೇಕಿಂಗ್ ನ್ಯೂಸ್
02-10-21 10:31 pm Mangaluru Correspondent ಕರಾವಳಿ
ಮಂಗಳೂರು, ಅ.2: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಈ ವರ್ಷದ ಮಂಗಳೂರು ದಸರಾ ಮಹೋತ್ಸವ ಅ.7 ರಿಂದ 16ರ ವರೆಗೆ ನಡೆಯಲಿದ್ದು ಕೇಂದ್ರದ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ಅವರ ಮಾರ್ಗದರ್ಶನದಲ್ಲಿ ಈ ಬಾರಿಯೂ ‘ನಮ್ಮ ದಸರಾ- ನಮ್ಮ ಸುರಕ್ಷೆ’ ಘೋಷ ವಾಕ್ಯದಡಿ ಎಂದಿನಂತೆ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನೂ ಏರ್ಪಡಿಸಲಾಗಿದೆ.
ಕುದ್ರೋಳಿ ಕ್ಷೇತ್ರದಲ್ಲಿ ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ಎಚ್.ಎಸ್. ಸಾಯಿರಾಂ ಅವರು ಶನಿವಾರ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ವಿವರ ನೀಡಿದರು. ದಸರಾವನ್ನು ಸರಕಾರದ ಮಾರ್ಗಸೂಚಿಯಡಿ ನಡೆಸಲು ಜಿಲ್ಲಾಧಿಕಾರಿಗಳು ಸಲಹೆ ನೀಡಿದ್ದು, ಅದರಂತೆ ಈ ಬಾರಿಯ ಎಲ್ಲ ಉತ್ಸವಗಳು ನಡೆಯಲಿದೆ. ಶಾರದಾ ಮೂರ್ತಿಯ ವಿಸರ್ಜನೆಯಂದು ದಸರಾ ಮೆರವಣಿಗೆ ಇರುವುದಿಲ್ಲ. ಬದಲಿಗೆ, ಕ್ಷೇತ್ರದ ಆವರಣದಲ್ಲಿ ಮಾತ್ರ ಮೆರವಣಿಗೆ ನಡೆಸಿ, ಪುಷ್ಕರಣಿಯಲ್ಲಿ ವಿಸರ್ಜನೆ ನಡೆಯಲಿದೆ. ಉಳಿದಂತೆ ಧಾರ್ಮಿಕ ಕಾರ್ಯಕ್ರಮಗಳು ಯಥಾವತ್ತಾಗಿ ನೆರವೇರಲಿದೆ ಎಂದರು.
ವರ್ಚುವಲ್ ಸಾಂಸ್ಕೃತಿಕ ವೈಭವ
ದಸರಾ ಸಂದರ್ಭದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ವರ್ಚುವಲ್ ಮಾದರಿಯಲ್ಲಿ ನಡೆಸಲಿದ್ದು, ಕ್ಷೇತ್ರದಲ್ಲಿ ಎಲ್ ಇಡಿ ಸ್ಕ್ರೀನ್ ಮತ್ತು ಸ್ಥಳೀಯ ಟಿವಿ ಚಾನೆಲ್ ಮೂಲಕ ನೇರ ಪ್ರಸಾರವಾಗಲಿದೆ ಎಂದು ಕ್ಷೇತ್ರ ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ತಿಳಿಸಿದರು. ಅಲ್ಲದೆ, ದೇವಸ್ಥಾನಕ್ಕೆ ಆಗಮಿಸುವ ಭಕ್ತರಿಗೆ ಕ್ಷೇತ್ರದಲ್ಲಿ ಅನ್ನಸಂತರ್ಪಣೆಯ ಬದಲಿಗೆ ಅನ್ನ ಪ್ರಸಾದವನ್ನು ಪ್ಯಾಕೆಟ್ ಮೂಲಕ ವಿತರಿಸಲಾಗುವುದು ಎಂದು ತಿಳಿಸಿದರು.

ದಸರಾ ಮಹೋತ್ಸವ ಕಾರ್ಯಕ್ರಮ
ಅ.7ರಂದು ಮಹಾನವಮಿಯಂದು ಉತ್ಸವ ಆರಂಭ. ಬೆಳಗ್ಗೆ 9 ಕ್ಕೆ ಗುರುಪ್ರಾರ್ಥನೆ 11.30ಕ್ಕೆ ಕಲಶ ಪ್ರತಿಷ್ಠೆ ಹಾಗೂ 11.40ಕ್ಕೆ ನವದುರ್ಗೆಯರ ಮತ್ತು ಶಾರದಾ ಪ್ರತಿಷ್ಠೆ. 12.30ಕ್ಕೆ ಪುಷ್ಪಾಲಂಕಾರ, ಮಹಾಪೂಜೆ ನಡೆಯಲಿದೆ. ಸಂಜೆ 7ಕ್ಕೆ ಭಜನೆ, ರಾತ್ರಿ 8.30ರಿಂದ ಶ್ರೀದೇವಿ ಪುಷ್ಪಾಲಂಕಾರ ಮಹಾಪೂಜೆ ಮತ್ತು ಉತ್ಸವ ನಡೆಯಲಿದೆ.
ಅ.8 ರಂದು ಬೆಳಗ್ಗೆ 10ಕ್ಕೆ ದುರ್ಗಾಹೋಮ, ಅ. 9 ರಂದು ಆರ್ಯ ದುರ್ಗಾ ಹೋಮ, ಅ. 10 ರಂದು ಭಗವತೀ ದುರ್ಗಾ ಹೋಮ, ಅ. 11ರಂದು ಕುಮಾರಿ ದುರ್ಗಾ ಹೋಮ, ಅ.12 ರಂದು ಮಹಿಷ ಮರ್ದಿನಿ ದುರ್ಗಾ ಹೋಮ, ಅ. 13ರಂದು ಚಂಡಿಕಾ ಹೋಮ, ಅ.14 ರಂದು ಸರಸ್ವತಿ ದುರ್ಗಾ ಹೋಮ, 11.30ಕ್ಕೆ ಶತ ಸೀಯಾಳಾಭಿಷೇಕ ನಡೆಯಲಿದೆ.
15ರಂದು ಶಾರದಾ ವಿಸರ್ಜನೆ
ಅ.15 ರಂದು ವಾಗೀಶ್ವರಿ ದುರ್ಗಾ ಹೋಮ, 12.30 ಕ್ಕೆ ಶಿವ ಪೂಜೆ, 7 ರಿಂದ ಶ್ರೀದೇವಿ ಪುಷ್ಪಾಲಂಕಾರ, ಮಹಾಪೂಜೆ, ಉತ್ಸವ, ರಾತ್ರಿ 8ಕ್ಕೆ ಪುಷ್ಕರಿಣಿಯಲ್ಲಿ ಪೂಜೆ ಬಲಿ, ಮಂಟಪ ಬಲಿ, ಮಂಟಪ ಪೂಜೆ ಬಳಿಕ ಶಾರದಾ ವಿಸರ್ಜನೆ, ಅವಭೃತ ಸ್ನಾನ. ಅ. 16 ರಂದು ರಾತ್ರಿ 7 ಕ್ಕೆ ಭಜನೆ, 7.30 ರಿಂದ ಗುರುಪೂಜೆ ನಡೆಯಲಿದೆ.
ದೇವಳ ದರ್ಶನಕ್ಕೆ ನಿಬಂಧನೆಗಳು
ಕ್ಷೇತ್ರಕ್ಕೆ ಆಗಮಿಸುವ ಪ್ರತಿಯೊಬ್ಬರೂ ಮಾಸ್ಕ್ ಧರಿಸುವುದು ಕಡ್ಡಾಯ. ಮಾಸ್ಕ್ ಇಲ್ಲದವರಿಗೆ ಪ್ರವೇಶ ನಿಷೇಧಿಸಲಾಗುತ್ತದೆ. ದೇವಸ್ಥಾನದ ಪ್ರಾಂಗಣ ಪ್ರವೇಶಿಸುವ ಮೊದಲು ಥರ್ಮಲ್ ಸ್ಕ್ಯಾನಿಂಗ್‌ಗೆ ಒಳ ಪಡಬೇಕು. ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ದೇಗುಲದ ವಠಾರ ಮತ್ತು ಒಳಗೆ, ದರ್ಬಾರು ಮಂಟಪದಲ್ಲಿ ಮೊಬೈಲ್ ಬಳಕೆ, ಫೋಟೊ, ಸೆಲ್ಫಿ ನಿಷೇಧಿಸಲಾಗಿದೆ.
ಪಾಲಿಕೆಯಿಂದ ನಗರದಲ್ಲಿ ಬೀದಿ ಅಲಂಕಾರ
ಮಂಗಳೂರು ದಸರಾ ಉತ್ಸವ ಸಂದರ್ಭ ರಾಜಬೀದಿ ಅಲಂಕಾರದ ಸಂಪೂರ್ಣ ಜವಾಬ್ದಾರಿಯನ್ನು ಈ ಬಾರಿ ಮಂಗಳೂರು ಮಹಾನಗರ ಪಾಲಿಕೆ ವಹಿಸಿಕೊಂಡಿದೆ. ಇದು ದಸರಾ ಉತ್ಸವಕ್ಕೆ ಸಿಕ್ಕಿದ ಮತ್ತೊಂದು ಹಿರಿಮೆಯಾಗಿದೆ. ಇದಕ್ಕೆ ಕಾರಣಕರ್ತರಾದ ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕರಾದ ವೇದವ್ಯಾಸ ಕಾಮತ್, ಡಾ. ವೈ. ಭರತ್ ಶೆಟ್ಟಿ, ಮೇಯರ್ ಪ್ರೇಮಾನಂದ ಶೆಟ್ಟಿ, ಮನಪಾ ಕಮಿಷನರ್ ಅಕ್ಷಯ್ ಶ್ರೀಧರ್ ಮತ್ತು ಜಿಲ್ಲೆಯ ಎಲ್ಲ ಶಾಸಕರು, ಎಲ್ಲ ಕಾರ್ಪೊರೇಟರ್‌ಗಳಿಗೆ ಕೃತಜ್ಞತೆಗಳನ್ನು ಸಲ್ಲಿಸುವುದಾಗಿ ಕ್ಷೇತ್ರದ ಅಭಿವೃದ್ಧಿ ಸಮಿತಿ ಸದಸ್ಯ ಹರಿಕೃಷ್ಣ ಬಂಟ್ವಾಳ್ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಕ್ಷೇತ್ರಾಡಳಿತ ಸಮಿತಿಯ ಉಪಾಧ್ಯಕ್ಷೆ ಉರ್ಮಿಳಾ ರಮೇಶ್, ಕಾರ್ಯದರ್ಶಿ ಮಾಧವ ಸುವರ್ಣ, ಟ್ರಸ್ಟಿಗಳಾದ ಕೆ. ಮಹೇಶ್ಚಂದ್ರ, ಎಂ. ಶೇಖರ್ ಪೂಜಾರಿ, ಜಗದೀಪ್ ಡಿ. ಸುವರ್ಣ, ದೇವಸ್ಥಾನ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ದೇವೇಂದ್ರ ಪೂಜಾರಿ, ಉಪಾಧ್ಯಕ್ಷ ಡಾ. ಬಿ.ಜಿ. ಸುವರ್ಣ, ಸದಸ್ಯರಾದ ರಾಧಾಕೃಷ್ಣ, ಜತಿನ್ ಅತ್ತಾವರ, ಲೀಲಾಕ್ಷ ಕರ್ಕೇರ, ಚಂದನ್‌ದಾಸ್, ಗೌರವಿ ಪಿ.ಕೆ., ಕಿಶೋರ್ ದಂಡಕೇರಿ ಮತ್ತಿತರರು ಉಪಸ್ಥಿತರಿದ್ದರು.
“Mangaluru Dasara will commence from October 7 to 16 at Kurdoli Gokarnanatheswara temple,” said temple committee president H S Sairam. Addressing media here on Saturday October 2, H S Sairam said, “The installation of Navadurga and Sharada goddess will be held on October 7. Through the 10 days of Dasara, rituals will be carried out in the temple. The festival will be conducted adhering to the Covid protocols. Public should compulsorily wear masks and maintain social distance.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm