ಬ್ರೇಕಿಂಗ್ ನ್ಯೂಸ್
06-10-21 10:57 am Mangaluru Correspondent ಕರಾವಳಿ
ಮಂಗಳೂರು, ಅ.6: ಕೇರಳ ಮೂಲದ ನರ್ಸಿಂಗ್ ವಿದ್ಯಾರ್ಥಿನಿಯೊಬ್ಬಳು ನಗರದ ಕಾಲೇಜು ಹಾಸ್ಟೆಲ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಕಣ್ಣೂರು ಜಿಲ್ಲೆಯ ಚೆರುಪ್ಪುಳ ನಿವಾಸಿ ನೀನಾ (21) ಮೃತ ವಿದ್ಯಾರ್ಥಿನಿ. ಕೊಲಾಸೋ ನರ್ಸಿಂಗ್ ಕಾಲೇಜಿನ ಮೊದಲ ವರ್ಷದ ವಿದ್ಯಾರ್ಥಿನಿಯಾಗಿದ್ದ ನೀನಾ ಹಾಸ್ಟೆಲ್ ನಲ್ಲಿ ಉಳಿದುಕೊಂಡಿದ್ದಳು. ಮಂಗಳವಾರ ಸಂಜೆ ಹಾಸ್ಟೆಲ್ ಕೊಠಡಿಯ ಬಾತ್ ರೂಮಿನಲ್ಲಿ ಈಕೆ ನೇಣು ಬಿಗಿದುಕೊಂಡಿದ್ದಾಳೆ. ನೇಣು ಹಾಕಿದ್ದನ್ನು ನೋಡಿದ ಜೊತೆಗಿದ್ದ ಇನ್ನೊಬ್ಬ ಹುಡುಗಿ ಆಘಾತಗೊಂಡು ಪ್ರಜ್ಞೆ ತಪ್ಪಿ ಬಿದ್ದಿದ್ದಳು. ಕೂಡಲೇ ಅಲ್ಲಿನ ಸಿಬಂದಿ ನೇಣು ಕುಣಿಕೆಯಿಂದ ತೆಗೆದು ನೀನಾ ಮತ್ತು ಪ್ರಜ್ಞೆ ಕಳಕೊಂಡಿದ್ದ ಇನ್ನೊಬ್ಬ ಹುಡುಗಿಯನ್ನು ಆಸ್ಪತ್ರೆಗೆ ದಾಖಲಿಸಿದ್ದರು. ನೀನಾ ಇಂದು ಬೆಳಗ್ಗೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಆತ್ಮಹತ್ಯೆಗೆ ಹಾಸ್ಟೆಲ್ ನಲ್ಲಿ ನೀಡುತ್ತಿದ್ದ ಮಾನಸಿಕ ಕಿರುಕುಳವೇ ಕಾರಣ ಎಂದು ಇತರ ವಿದ್ಯಾರ್ಥಿಗಳು ದೂರಿದ್ದಾರೆ. ಮನೆಯವರ ಜೊತೆ ಮಾತನಾಡುವುದಕ್ಕೆ, ಮೊಬೈಲ್ ಬಳಕೆ ಮಾಡುವುದಕ್ಕೆ ನಿರ್ಬಂಧ ವಿಧಿಸಲಾಗಿತ್ತು. ಕಾಲೇಜು ಆಡಳಿತಕ್ಕೆ ಕೇರಳದಿಂದ ವಿದ್ಯಾರ್ಥಿಗಳನ್ನು ಪೂರೈಸುವ ಏಜಂಟ್ ಒಬ್ಬ ಹಾಸ್ಟೆಲ್ ನಡೆಸುತ್ತಿದ್ದ ಎನ್ನಲಾಗುತ್ತಿದೆ. ಆತ ಕೂಡ ಕೇರಳ ಮೂಲದ ವ್ಯಕ್ತಿಯೇ ಆಗಿದ್ದು ವಿದ್ಯಾರ್ಥಿಗಳಿಗೆ ನಿರ್ಬಂಧ ನೆಪದಲ್ಲಿ ಮಾನಸಿಕ ಕಿರುಕುಳ ನೀಡುತ್ತಿದ್ದ ಎಂದು ದೂರಿದ್ದಾರೆ.
ವಿದ್ಯಾರ್ಥಿನಿ ನೀನಾ ಡೈರಿ ಬರೆಯುವ ಅಭ್ಯಾಸ ಹೊಂದಿದ್ದು ಈ ಬಗ್ಗೆ ಡೈರಿಯಲ್ಲಿ ಬರೆದುಕೊಂಡಿದ್ದಾಳೆ ಎನ್ನಲಾಗಿದೆ. ಆತ್ಮಹತ್ಯೆ ಬಗ್ಗೆ ಡೆತ್ ನೋಟ್ ರೂಪದಲ್ಲಿ ಅದರಲ್ಲಿ ಬರೆದಿದ್ದಾಳೆಯೇ ಎಂಬುದು ತಿಳಿದುಬಂದಿಲ್ಲ.
Mangalore Colaco nursing college student commits suicide in hostel Mental torture by officials suspected. The deceased has been identified as Neena (21) resident of Kannur.
07-09-26 01:33 pm
HK News Staffer
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
07-09-26 09:57 pm
HK News Staffer
ಬಿಜೆಪಿಯವರೇ ಭ್ರಷ್ಟಾಚಾರದಲ್ಲಿ ಕಂಠಪೂರ್ತಿ ಮುಳುಗಿದ್...
07-09-26 01:22 pm
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
07-09-26 08:56 pm
HK News Staffer
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm
ಮಂಜೇಶ್ವರ ; ಹೊಸಂಗಡಿ ಬಳಿ ಕೂಲಿ ಕಾರ್ಮಿಕನ ಹತ್ಯೆಗೈದ...
07-09-26 04:09 pm
ಹೂ ಕಟಾವಿಗೆ ಹೊರಟಿದ್ದ ಕೂಲಿ ಕಾರ್ಮಿಕರ ದುರಂತ ಅಂತ್ಯ...
07-09-26 03:42 pm
ತಿರುಪತಿ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ಕುಟುಂಬ...
07-09-26 02:06 pm