ಬ್ರೇಕಿಂಗ್ ನ್ಯೂಸ್
06-10-21 05:28 pm Mangaluru Correspondent ಕರಾವಳಿ
ಉಳ್ಳಾಲ, ಅ.6: ಇಷ್ಟಾರ್ಥ ಈಡೇರಿಸಿದ್ದಕ್ಕಾಗಿ ಕನ್ನಡ ಚಿತ್ರರಂಗದ ಖ್ಯಾತ ನಟಿ ರಕ್ಷಿತಾ ಪ್ರೇಮ್ ಅವರು ಇಲ್ಲಿನ ಕಾರಣಿಕ ಸ್ಥಳ ಕುತ್ತಾರು ಕೊರಗಜ್ಜ ದೈವದ ಆದಿಕ್ಷೇತ್ರಕ್ಕೆ ಆಗಮಿಸಿದ್ದು ಬೆಳ್ಳಿ ದೀಪ ಮತ್ತು ಬೆಳ್ಳಿಯ ಘಂಟೆಯನ್ನ ಹರಕೆಯಾಗಿ ಸಲ್ಲಿಸಿದ್ದಾರೆ.
ಸುಂಟರಗಾಳಿ, ಕಲಾಸಿಪಾಳ್ಯ ಚಿತ್ರದ ಖ್ಯಾತಿಯ ನಟಿ ರಕ್ಷಿತಾ ಪ್ರೇಮ್ ಈಗ ಝೀ ಕನ್ನಡ ವಾಹಿನಿಯಲ್ಲಿ ಕಾಮಿಡಿ ಕಿಲಾಡಿ, ಡಾನ್ಸ್ ಕರ್ನಾಟಕ ರಿಯಾಲಿಟಿ ಶೋ ನಡೆಸುತ್ತಿದ್ದಾರೆ. ಇಂದು ಮಧ್ಯಾಹ್ನ ಮಂಗಳೂರು ಹೊರವಲಯದ ಕುತ್ತಾರು ಸ್ವಾಮಿ ಕೊರಗಜ್ಜ ದೈವದ ಆದಿ ಕ್ಷೇತ್ರಕ್ಕೆ ಭೇಟಿ ನೀಡಿ ಹರಕೆ ಸಲ್ಲಿಸಿದ್ದಾರೆ. ನಂಬಿದವರ ಇಷ್ಟಾರ್ಥಗಳನ್ನ ಈಡೇರಿಸುವ ಕಾರಣೀಕ ಶಕ್ತಿ ಸ್ವಾಮಿ ಕೊರಗಜ್ಜ ದೈವಕ್ಕೆ ದೇಶ, ವಿದೇಶಗಳಲ್ಲಿ ಅಪಾರ ಭಕ್ತರಿದ್ದಾರೆ.



ಸದ್ಯ ಝೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ಕಾಮಿಡಿ ಕಿಲಾಡಿಗಳು ರಿಯಾಲಿಟಿ ಶೋನಲ್ಲಿ ಚಾರ್ಮಿಂಗ್ ಜಡ್ಜ್ ಆಗಿ ಮಿಂಚುತ್ತಿರುವ ರಕ್ಷಿತಾ, ತನ್ನ ಮನದಾಸೆಯೊಂದು ಈಡೇರಿದ್ದಕ್ಕಾಗಿ ಕೊರಗಜ್ಜನ ಕ್ಷೇತ್ರಕ್ಕೆ ಬಂದಿದ್ದಾರೆ. ಆಸೆ ಈಡೇರಿದರೆ ಬೆಳ್ಳಿಯ ದೀಪ, ಘಂಟೆಯನ್ನ ಹರಕೆ ನೀಡುವುದಾಗಿ ರಕ್ಷಿತಾ ಪ್ರಾರ್ಥಿಸಿದ್ದರು ಎನ್ನಲಾಗಿದೆ. ಆಶಯ ಈಡೇರುತ್ತಿದ್ದಂತೆ ರಕ್ಷಿತಾ ಅವರು ಕುತ್ತಾರಿನ ಕೊರಗಜ್ಜನ ಆದಿ ಕ್ಷೇತ್ರಕ್ಕೆ ಬಂದು ಹರಕೆ ಸಲ್ಲಿಸಿದ್ದಾರೆ.
ನಿನ್ನೆ ರಕ್ಷಿತಾ ಪ್ರೇಮ್ ಅವರು ಪೊಳಲಿ ಶ್ರೀ ರಾಜರಾಜೇಶ್ವರಿ ಮತ್ತು ಕಟೀಲು ದುರ್ಗಾಪರಮೇಶ್ವರಿ ಕ್ಷೇತ್ರ ದರ್ಶನ ನಡೆಸಿ ಇಂದು ಕುತ್ತಾರು ಕೊರಗಜ್ಜನ ಆದಿ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ನೆಚ್ಚಿನ ನಟಿಯ ಜೊತೆ ಕುತ್ತಾರಿನ ಸ್ಥಳೀಯ ಅಭಿಮಾನಿಗಳು ಸೆಲ್ಫಿ ಕ್ಲಿಕ್ಕಿಸಿದ್ದಾರೆ.
ಕೋಸ್ಟಲ್ ವುಡ್ ಖಳ ನಟ ಕಿಶೋರ್ ಡಿ.ಕೆ, ಕಾಮಿಡಿ ಕಿಲಾಡಿಗಳು ರಿಯಾಲಿಟಿ ಶೋನಲ್ಲಿ ಮಿಂಚಿದ್ದ ಕಲಾವಿದರಾದ ಧೀರಜ್ ನೀರುಮಾರ್ಗ, ಸೂರಜ್ ಪಾಂಡೇಶ್ವರ, ಬೆಂಗಳೂರಿನ ಖ್ಯಾತ ಕೊರಿಯೋಗ್ರಾಫರ್ ರಾಹುಲ್ ಮತ್ತು ಪ್ರಜ್ವಲ್ ಮೊದಲಾದವರು ಜೊತೆಗಿದ್ದರು.
Kannada Actress and Reality show Judge of Zee Kannada Rakshitha visits Kuttar Koragajja Temple in Mangalore.
07-09-26 01:33 pm
HK News Staffer
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
07-09-26 09:57 pm
HK News Staffer
ಬಿಜೆಪಿಯವರೇ ಭ್ರಷ್ಟಾಚಾರದಲ್ಲಿ ಕಂಠಪೂರ್ತಿ ಮುಳುಗಿದ್...
07-09-26 01:22 pm
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
07-09-26 08:56 pm
HK News Staffer
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm
ಮಂಜೇಶ್ವರ ; ಹೊಸಂಗಡಿ ಬಳಿ ಕೂಲಿ ಕಾರ್ಮಿಕನ ಹತ್ಯೆಗೈದ...
07-09-26 04:09 pm
ಹೂ ಕಟಾವಿಗೆ ಹೊರಟಿದ್ದ ಕೂಲಿ ಕಾರ್ಮಿಕರ ದುರಂತ ಅಂತ್ಯ...
07-09-26 03:42 pm
ತಿರುಪತಿ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ಕುಟುಂಬ...
07-09-26 02:06 pm