ಬ್ರೇಕಿಂಗ್ ನ್ಯೂಸ್
06-10-21 10:32 pm Mangaluru Correspondent ಕರಾವಳಿ
ಮಂಗಳೂರು, ಅ.6: ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮೂರು ದಿನಗಳ ಕರ್ನಾಟಕ ಪ್ರವಾಸಕ್ಕೆ ಆಗಮಿಸಿದ್ದಾರೆ. ಇಂದು ಸಂಜೆ ವಾಯುಪಡೆ ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ಆಗಮಿಸಿರುವ ಕೋವಿಂದ್ ನಾಳೆ (ಅ.7) ಮೈಸೂರಿಗೆ ತೆರಳಲಿದ್ದಾರೆ.
ಮಧ್ಯಾಹ್ನ 12.30ಕ್ಕೆ ಮೈಸೂರಿನಲ್ಲಿ ಬಿಳಿಗಿರಿ ರಂಗನಸ್ವಾಮಿ ದೇವಸ್ಥಾನಕ್ಕೆ ತೆರಳಿ, ವಿಶೇಷ ಪೂಜೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಆಬಳಿಕ ಚಾಮರಾಜನಗರಕ್ಕೆ ಹೆಲಿಕಾಪ್ಟರ್ ನಲ್ಲಿ ತೆರಳಲಿದ್ದು 3.30 ಕ್ಕೆ 450 ಬೆಡ್ ಸಾಮರ್ಥ್ಯದ ಸರಕಾರಿ ಆಸ್ಪತ್ರೆ ಕಟ್ಟಡವನ್ನು ಉದ್ಘಾಟನೆ ನೆರವೇರಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸೇರಿದಂತೆ ಹಲವು ಸಚಿವರು ಭಾಗಿಯಾಗಲಿದ್ದಾರೆ.
ಸಂಜೆ 5.15 ಕ್ಕೆ ವಾಯುಪಡೆ ವಿಮಾನದಲ್ಲಿ ಮೈಸೂರಿನಿಂದ ಮಂಗಳೂರಿಗೆ ಆಗಮಿಸಲಿದ್ದು 6.30 ಕ್ಕೆ ಮಂಗಳೂರು ನಗರ ತಲುಪಲಿದ್ದಾರೆ. ಕದ್ರಿಯ ಸರ್ಕಿಟ್ ಹೌಸ್ ಅಥವಾ ಓಶ್ಯನ್ ಪರ್ಲ್ ಹೊಟೇಲ್ ನಲ್ಲಿ ವಾಸ್ತವ್ಯ ನಡೆಸುವುದಕ್ಕೆ ಎರಡೂ ಕಡೆಗಳಲ್ಲಿ ಬಂದೋಬಸ್ತ್ ನಡೆಸಲಾಗಿದೆ. ರಾತ್ರಿ ವೇಳೆ ಯಾವುದೇ ಕಾರ್ಯಕ್ರಮ ಇರುವುದಿಲ್ಲ.
ಅ.8ರಂದು ಬೆಳಗ್ಗೆ 10.30 ಕ್ಕೆ ವಾಯುಪಡೆ ಹೆಲಿಕಾಪ್ಟರ್ ನಲ್ಲಿ ಮಂಗಳೂರು ವಿಮಾನ ನಿಲ್ದಾಣದಿಂದ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತೆರಳಲಿದ್ದಾರೆ. 12 ಗಂಟೆಗೆ ಶೃಂಗೇರಿಗೆ ತಲುಪಲಿದ್ದು ಅಲ್ಲಿ ಶೃಂಗೇರಿ ಶಾರದಾ ಪೀಠ ಮತ್ತು ಶಂಕರ ಅದ್ವೈತ ಶೋಧ ಕೇಂದ್ರಕ್ಕೆ ಭೇಟಿ ನೀಡಲಿದ್ದಾರೆ. ದೇವರ ದರ್ಶನ ನಡೆಸಿ, ವಿಶೇಷ ಪೂಜೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಇದೇ ವೇಳೆ, ಶೃಂಗೇರಿ ಶಾರದಾ ಪೀಠದ ಭಾರತೀ ತೀರ್ಥ ಸ್ವಾಮೀಜಿ ಅವರನ್ನು ರಾಷ್ಟ್ರಪತಿ ಭೇಟಿಯಾಗಲಿದ್ದಾರೆ.
ಸಂಜೆ ನಾಲ್ಕು ಗಂಟೆಗೆ ಶೃಂಗೇರಿಯಿಂದ ಹೆಲಿಕಾಪ್ಟರ್ ಮೂಲಕ ಮರಳಿ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದು 5.10ಕ್ಕೆ ವಾಯುಪಡೆ ವಿಶೇಷ ವಿಮಾನದಲ್ಲಿ ರಾಜಧಾನಿ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ಈ ಮೊದಲು 7 ಮತ್ತು 8 ರಂದು ರಾಷ್ಟ್ರಪತಿ ಮಂಗಳೂರು ನಗರದಲ್ಲಿ ಉಳಿಯಲಿದ್ದಾರೆಂದು ಹೇಳಲಾಗಿತ್ತು. ಆದರೆ ಕೊನೆಕ್ಷಣದಲ್ಲಿ 8 ರಂದು ಮಂಗಳೂರು ನಗರದಲ್ಲಿ ಉಳಿಯುವುದನ್ನು ರದ್ದುಪಡಿಸಿ ಒಂದು ದಿನಕ್ಕೆ ಸೀಮಿತಗೊಳಿಸಲಾಗಿದೆ.
ಅಂದಹಾಗೆ, ರಾಮನಾಥ ಕೋವಿಂದ್ ಅತ್ಯುನ್ನತ ಹುದ್ದೆಗೇರಿದ ಬಳಿಕ ಮೊದಲ ಬಾರಿಗೆ ಮೈಸೂರು ಮತ್ತು ಮಂಗಳೂರಿಗೆ ಭೇಟಿ ನೀಡುತ್ತಿದ್ದಾರೆ. ಶೃಂಗೇರಿ ಭೇಟಿ ನೀಡುವ ಕಾರಣಕ್ಕೆ ಮಂಗಳೂರು ಭೇಟಿ ನೀಡುತ್ತಿದ್ದಾರೆ. ವಿಶೇಷ ಅಂದ್ರೆ, ಪರಿಶಿಷ್ಟ ವರ್ಗಕ್ಕೆ ಸೇರಿದ ಉನ್ನತ ಹುದ್ದೆಯ ವ್ಯಕ್ತಿಯೊಬ್ಬರು ಮೊದಲ ಬಾರಿಗೆ ಶೃಂಗೇರಿ ದೇವಸ್ಥಾನಕ್ಕೆ ಭೇಟಿ ನೀಡುತ್ತಿದ್ದಾರೆ.
ಮಂಗಳೂರಿನಲ್ಲಿ ಫುಲ್ ಅಲರ್ಟ್
ರಾಷ್ಟ್ರಪತಿ ಭೇಟಿ ಹಿನ್ನೆಲೆಯಲ್ಲಿ ಮಂಗಳೂರು ನಗರದಲ್ಲಿ ಪೊಲೀಸ್ ಮತ್ತು ಭದ್ರತಾ ಪಡೆಗಳನ್ನು ಫುಲ್ ಅಲರ್ಟ್ ಮಾಡಲಾಗಿದೆ. ಕದ್ರಿ ಸರ್ಕಿಟ್ ಹೌಸ್ ಆವರಣಕ್ಕೆ ಯಾವುದೇ ವ್ಯಕ್ತಿಯನ್ನು ಒಳಬಿಡದೆ ತಪಾಸಣೆ ಬಿಗಿಗೊಳಿಸಲಾಗಿದೆ. ಅತ್ಯುನ್ನತ ಹುದ್ದೆಯ ವ್ಯಕ್ತಿ ಭೇಟಿ ಹಿನ್ನೆಲೆ 15 ದಿನಗಳ ಮೊದಲೇ ದೆಹಲಿಯ ಎಸ್ ಪಿಜಿ ತಂಡ ಮಂಗಳೂರಿಗೆ ಬಂದು ಭದ್ರತೆಯನ್ನು ಅವಲೋಕಿಸಿದೆ. ಇತ್ತೀಚೆಗೆ ಸ್ಯಾಟಲೈಟ್ ಫೋನ್ ಸಂಪರ್ಕ ಪತ್ತೆ ಇನ್ನಿತರ ಉಗ್ರ ಚಟುವಟಿಕೆ ಕಾರಣದಿಂದಲೂ ಕರಾವಳಿ ನಗರಿಗೆ ರಾಷ್ಟ್ರಪತಿ ಭೇಟಿ ನೀಡುವುದು ಭಾರೀ ಮಹತ್ವ ಪಡೆದಿದೆ.
President Ram Nath Kovind arrived on a 3-day visit to Karnataka at the HAL airport on Wednesday. The President was received at the HAL airport by Governor Thaawar Chand Ghehlot and Chief Minister Basavaraj Bommai. Kovind will be inaugurating the 450-bed hospital in the Chamarajanagara district in the presence of Bommai on Thursday.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
11-05-25 11:02 pm
HK News Desk
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
ಜಮ್ಮು ಗಡಿಯಲ್ಲಿ ಪಾಕ್ ಶೆಲ್ ದಾಳಿ ; ಬಿಎಸ್ಎಫ್ ಯೋಧ,...
11-05-25 01:43 pm
India Pak War: ಪೆಟ್ಟು ತಿಂದರೂ ಬಿಡದ ಪಾಕ್ ನರಿಬುದ...
10-05-25 11:05 pm
11-05-25 05:01 pm
Mangalore Correspondent
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm