ಬ್ರೇಕಿಂಗ್ ನ್ಯೂಸ್
13-10-21 11:37 am Mangaluru Correspondent ಕರಾವಳಿ
ಮಂಗಳೂರು, ಅ.13: ಮೋರಲ್ ಪೊಲೀಸಿಂಗ್ ಅನ್ನೋದು ಬಹಳ ಸೂಕ್ಷ್ಮ ವಿಚಾರ. ಸಮಾಜದಲ್ಲಿ ನಾವೆಲ್ಲರು ಜವಾಬ್ದಾರಿ ಹೊಂದಿರ ಬೇಕಾಗುತ್ತದೆ. ಸಮಾಜದಲ್ಲಿ ಹಲವಾರು ಭಾವನೆಗಳಿವೆ. ಇವುಗಳಿಗೆ ಧಕ್ಕೆ ಆಗದ ಹಾಗೆ ನಾವು ನಡೆದುಕೊಳ್ಳಬೇಕಾಗುತ್ತದೆ. ಈ ರೀತಿಯ ಭಾವನೆಗಳಿಗೆ ಧಕ್ಕೆ ಬಂದಾಗ ಸಹಜವಾಗಿ ಆಕ್ಷನ್ ಅಂಡ್ ರಿಯಾಕ್ಷನ್ ಆಗುತ್ತೆ.. ಹೀಗೆಂದು ಕರಾವಳಿಯಲ್ಲಿ ನಡೆಯುತ್ತಿರುವ ನೈತಿಕ ಪೊಲೀಸ್ ಗಿರಿ ಘಟನೆಗಳ ಬಗ್ಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ವ್ಯಾಖ್ಯಾನಿಸಿದ್ದಾರೆ. ಆಮೂಲಕ ಪರೋಕ್ಷವಾಗಿ ಹಿಂದು ಸಂಘಟನೆ ಕಾರ್ಯಕರ್ತರ ನೈತಿಕ ಪೊಲೀಸ್ ಕೆಲಸವನ್ನು ಸಮರ್ಥಿಸಿಕೊಂಡಿದ್ದಾರೆ.
ಉಡುಪಿ ಜಿಲ್ಲಾ ಪ್ರವಾಸ ಹಿನ್ನೆಲೆಯಲ್ಲಿ ಮಂಗಳೂರಿನ ಬಜ್ಪೆ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸಿಎಂ ಬೊಮ್ಮಾಯಿ ಬಳಿ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಈ ಉತ್ತರ ನೀಡಿದ್ದಾರೆ. ಕಾನೂನು ಪಾಲನೆ ಜೊತೆಗೆ ಸಾಮಾಜಿಕ ಸಾಮರಸ್ಯ ಕಾಪಾಡೋದು ಸರ್ಕಾರದ ಕರ್ತವ್ಯ. ಯುವಕರು ಕೂಡ ಸಾಮಾಜಿಕವಾಗಿ ಧಕ್ಕೆ ಆಗದಂತೆ ನಡೆದುಕೊಳ್ಳಬೇಕು. ಮೊರಾಲಿಟಿ ಅನ್ನೋದು ಸಮಾಜದಲ್ಲಿ ಬೇಕಲ್ವಾ ?ನೈತಿಕತೆ ಇಲ್ಲದೆ ಸಮಾಜದಲ್ಲಿ ಬದುಕೋಕೆ ಆಗುತ್ತಾ.. ಇವತ್ತು ನಾವು ನೈತಿಕತೆ ಇಲ್ಲದೆ ಬದುಕೋಕೆ ಆಗಲ್ಲ. ನಮ್ಮೆಲ್ಲ ಸಂಬಂಧಗಳು ಮತ್ತು ಶಾಂತಿ ಸುವ್ಯವಸ್ಥೆ ನಿಂತಿರೋದು ನಮ್ಮ ನೈತಿಕತೆ ಮೇಲೆ. ಇದು ಇಲ್ಲದಾಗ ಆಕ್ಷನ್ಸ್, ರಿಯಾಕ್ಷನ್ಸ್ ಆಗುತ್ತದೆ ಎಂದು ಬಸವರಾಜ್ ಬೊಮ್ಮಾಯಿ ಹೇಳಿದರು.
ರಾಜ್ಯದಲ್ಲಿ ಕಲ್ಲಿದ್ದಲು ಅಭಾವ ಎದುರಾದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಬೊಮ್ಮಾಯಿ, ಕಳೆದ ವಾರ ಎಂಟು ರೇಖ್ ಕಲ್ಲಿದ್ದಲು ರಾಜ್ಯಕ್ಕೆ ಬರ್ತಿತ್ತು. ಆದರೆ ಇದು ಸಾಲದು ಎನ್ನುವ ಬಗ್ಗೆ ಕೇಂದ್ರ ಕಲ್ಲಿದ್ದಲು ಸಚಿವರ ಗಮನಕ್ಕೆ ತಂದಿದ್ದೇವೆ. ಇನ್ನೂ ಮೂರು ರೇಖ್ ಕಲ್ಲಿದ್ದಲು ಬಂದ್ರೆ ಹೆಚ್ಚು ಅನುಕೂಲ ಆಗುತ್ತೆ. ಅದಕ್ಕೆ ವ್ಯವಸ್ಥೆಗಳನ್ನು ಮಾಡ್ತಾ ಇದ್ದೇವೆ. ಅಧಿಕಾರಿಗಳ ಮಟ್ಟದಲ್ಲಿ ಈ ಬಗ್ಗೆ ಮಾತುಕತೆ ನಡೆಯುತ್ತಿದೆ. ಅದು ಬಂದಲ್ಲಿ ನಮಗೆ ಕಲ್ಲಿದ್ದಲಿನ ಸಮಸ್ಯೆ ಯಾಗೋದಿಲ್ಲ ಎಂದು ಹೇಳಿದರು.
ಕರ್ನಾಟಕ - ಕೇರಳ ಗಡಿಭಾಗದಲ್ಲಿ ಕೋವಿಡ್ ಮಾರ್ಗಸೂಚಿ ಸಡಿಲಿಕೆ ಬಗ್ಗೆ ಕೇಳಿದ ಪ್ರಶ್ನೆಗೆ, ದಸರಾ ಕಳೆದ ಬಳಿಕ ಈ ಬಗ್ಗೆ ತಜ್ಞರ ಸಭೆ ಕರೆಯುತ್ತೇವೆ. ಗಡಿ ಜಿಲ್ಲೆಗಳ ಕೋವಿಡ್ ಸ್ಥಿತಿಗತಿಗಳ ಬಗ್ಗೆ ಚರ್ಚಿಸುತ್ತೇವೆ. ಗಡಿಭಾಗದ ವ್ಯಾಕ್ಸಿನೇಷನ್ ಪ್ರಗತಿ ಬಗ್ಗೆ ಮಾಹಿತಿ ಪಡೆದು ಈ ಬಗ್ಗೆ ನಿರ್ಧರಿಸುತ್ತೇವೆ. ಇದೇ ವೇಳೆ, ಪ್ರಾಥಮಿಕ ಶಾಲೆ ತೆರೆಯುವ ಬಗ್ಗೆಯೂ ಸಭೆಯಲ್ಲಿ ಚರ್ಚಿಸುತ್ತೇವೆ ಎಂದು ಬೊಮ್ಮಾಯಿ ತಿಳಿಸಿದರು.
2 ರಿಂದ 18 ವರ್ಷದ ಮಕ್ಕಳಿಗೆ ಕೊರೊನಾ ವ್ಯಾಕ್ಸಿನ್ ನೀಡುವ ಕುರಿತು ಕೇಂದ್ರ ತಜ್ಞರ ಕಮಿಟಿ ಸಮ್ಮತಿ ನೀಡಿದ್ದಾರೆ. ನಮಗೆ ರಾಜ್ಯದಲ್ಲಿ ಮಕ್ಕಳಿಗೂ ವ್ಯಾಕ್ಸಿನ್ ನೀಡಲು ಫೈನಲ್ ಕ್ಲಿಯರೆನ್ಸ್ ಬೇಕಾಗಿದೆ. ವ್ಯಾಕ್ಸಿನೇಷನ್ ನೀಡಲು ಕೆಲವು ಮಾನದಂಡ ಇದೆ, ಆ ಪ್ರಕಾರ ನಾವು ವ್ಯಾಕ್ಸಿನ್ ನೀಡಬೇಕಾಗುತ್ತದೆ. ಲಸಿಕೆ ವಿಚಾರದಲ್ಲಿ ಕರ್ನಾಟಕ ಇತರ ರಾಜ್ಯಗಳಿಗಿಂತ ಮುಂದಿದೆ. ಮಕ್ಕಳಿಗೆ ಲಸಿಕೆ ನೀಡುವ ವಿಚಾರದಲ್ಲಿ ತ್ವರಿತ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬೊಮ್ಮಾಯಿ ಹೇಳಿದರು.
Cm Bommai in who reached Mangalore airport to visit Kudroli temple for Dasara spoke of supporting Moral Policing incidents in Mangalore. He spoke as whatever the Hindu Activists have done is right, we need to react when someone hurts our moral sentiments.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
11-05-25 11:02 pm
HK News Desk
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
ಜಮ್ಮು ಗಡಿಯಲ್ಲಿ ಪಾಕ್ ಶೆಲ್ ದಾಳಿ ; ಬಿಎಸ್ಎಫ್ ಯೋಧ,...
11-05-25 01:43 pm
India Pak War: ಪೆಟ್ಟು ತಿಂದರೂ ಬಿಡದ ಪಾಕ್ ನರಿಬುದ...
10-05-25 11:05 pm
11-05-25 05:01 pm
Mangalore Correspondent
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm