ಬ್ರೇಕಿಂಗ್ ನ್ಯೂಸ್
19-10-21 01:01 pm Mangaluru Correspondent ಕರಾವಳಿ
ಮಂಗಳೂರು, ಅ.19: ಲೇಡಿಗೋಶನ್ ಆಸ್ಪತ್ರೆಯಲ್ಲಿ ಮಗು ಅದಲು ಬದಲಾಗಿದೆ ಎನ್ನಲಾಗಿದ್ದ ಪ್ರಕರಣದಲ್ಲಿ ಮಂಗಳೂರಿನ ನ್ಯಾಯಾಲಯ ಮಗು ಮತ್ತು ಪೋಷಕರ ಡಿಎನ್‌ಎ ಪರೀಕ್ಷೆ ನಡೆಸಲು ಅನುಮತಿ ನೀಡಿದೆ.
ತಮ್ಮ ಮಗು ಆರಂಭದಲ್ಲಿ ಹೆರಿಗೆಯ ವೇಳೆ ಹೆಣ್ಣಾಗಿತ್ತು. ಬಳಿಕ ಲೇಡಿಗೋಷನ್ ಆಸ್ಪತ್ರೆ ಸಿಬಂದಿ ಬದಲಿಸಿ ಕೊಟ್ಟಿದ್ದಾರೆ ಎಂದು ಆರೋಪಿಸಿ ಕುಂದಾಪುರ ನಿವಾಸಿ ಮುಸ್ತಫಾ ಎಂಬವರು ಬಂದರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಆನಂತರ, ನ್ಯಾಯಾಲಯಕ್ಕೆ ಖಾಸಗಿ ದೂರು ನೀಡಿದ್ದ ಕುಟುಂಬ ಡಿಎನ್ಎ ಪರೀಕ್ಷೆಗೆ ಅನುಮತಿ ಕೋರಿತ್ತು.
ಮಂಗಳೂರಿನ ಆಸ್ಪತ್ರೆಯಲ್ಲಿ ಡಿಎನ್ಎ ಪರೀಕ್ಷೆ ನಡೆದು, ಬಳಿಕ ಇದರ ಸ್ಯಾಂಪಲ್ ಅನ್ನು ಹೈದರಾಬಾದ್ ಅಥವಾ ಬೆಂಗಳೂರಿನ ಪ್ರಯೋಗಾಲಯಕ್ಕೆ ಕಳುಹಿಸಿ ಕೊಡಲಾಗುವುದು. ಮೂರು ತಿಂಗಳ ಒಳಗೆ ಇದರ ವರದಿ ಬರಲಿದೆ. ವರದಿ ಆಧಾರದಲ್ಲಿ ಮುಂದಿನ ತನಿಖೆ ನಡೆಯಲಿದೆ ಎಂದು ಬಂದರು ಪೊಲೀಸರು ತಿಳಿಸಿದ್ದಾರೆ.
ನಗರದ ಲೇಡಿಗೋಷನ್ ಆಸ್ಪತ್ರೆಯಲ್ಲಿ ಹೆರಿಗೆಯ ವೇಳೆ ತಮಗೆ ಹುಟ್ಟಿರುವುದು ಹೆಣ್ಣು ಮಗು ಎಂದಿದ್ದರು. ಅಲ್ಲದೆ ದಾಖಲೆಯಲ್ಲಿ ಹೆಣ್ಣು ಮಗುವೆಂದೇ ನಮೂದಿಸಿ ಬಳಿಕ ಗಂಡು ಮಗುವನ್ನು ನೀಡಲಾಗಿದೆ ಎಂದು ಪೋಷಕರು ದೂರಿದ್ದರು. 18 ದಿನಗಳ ಬಳಿಕ ಮಗು ಬದಲಾಗಿರುವ ಬಗ್ಗೆ ಪೋಷಕರು, ನಗರದ ಬಂದರು ಪೊಲೀಸ್ ಠಾಣೆಗೆ ದೂರು ನೀಡಿ ತನಿಖೆಗೆ ಒತ್ತಾಯಿಸಿದ್ದರು. ಸದ್ಯ ಮಗು ಲೇಡಿಗೋಷನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದೆ.
Relating to the charge that the baby born in the Lady Goschen Hospital here was exchanged, the district court has permitted to conduct DNA test.The baby had been kept in the intensive care unit of the hospital because of health complications. The parents had accused the hospital authorities of exchanging the baby, as they pointed out that the doctors, who had told them that their baby was female, later said it was male.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
09-09-25 11:09 pm
HK News Desk
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
09-09-25 10:47 pm
Mangalore Correspondent
Mangalore Accident, Kulur, NHAI: ಕುಳೂರು ರಸ್ತೆ...
09-09-25 08:01 pm
YouTuber Munaf, SIT, Dharmasthala Case: ಎಸ್ಐಟ...
09-09-25 05:59 pm
Mangalore, NHAI, Padmaraj: ಇನ್ನೆಷ್ಟು ಜೀವ ಬಲಿಯ...
09-09-25 05:14 pm
MLA Vedavyas Kamath, Mangalore, Yakshangana:...
09-09-25 04:47 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm