ಬ್ರೇಕಿಂಗ್ ನ್ಯೂಸ್
20-10-21 03:06 pm Udupi Correspondent ಕರಾವಳಿ
ಉಡುಪಿ, ಅ.20: ಬ್ರಹ್ಮಾವರ ಠಾಣೆ ವ್ಯಾಪ್ತಿಯಲ್ಲಿ ನದಿಗೆ ಬಿದ್ದು ಕಾಣೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳ ಶವ ಇಂದು ಬೆಳಗ್ಗೆ ನದಿಯಲ್ಲಿ ಪತ್ತೆಯಾಗಿದೆ.
ಅನಾಸ್(16) ಮತ್ತು ಶ್ರೇಯಸ್ (18) ಮೃತ ವಿದ್ಯಾರ್ಥಿಗಳು. ಮಂಗಳವಾರ ಉಗ್ಗೇಲುಬೆಟ್ಟು ಮಡಿಸಾಲು ಎಂಬಲ್ಲಿ ಈಜಲೆಂದು ಸ್ವರ್ಣಾ ನದಿ ನೀರಿಗೆ ಇಳಿದಿದ್ದ ಮೂವರು ಯುವಕರು ನೀರಿನಲ್ಲಿ ಮುಳುಗಿದ್ದರು. ಈ ಪೈಕಿ ಇಬ್ಬರು ಯುವಕರು ನೀರುಪಾಲಾಗಿದ್ದರೆ, ಓರ್ವ ಬಾಲಕ ಪಾರಾಗಿ ಬಂದಿದ್ದ.


ಆದರೆ, ನದಿಯಿಂದ ಪಾರಾಗಿ ಬಂದರೂ ಭಯದಿಂದಾಗಿ ಉಳಿದಿಬ್ಬರು ನೀರುಪಾಲಾದ ಬಗ್ಗೆ ಮಾಹಿತಿ ನೀಡಿರಲಿಲ್ಲ. ಇದರಿಂದ ಮಕ್ಕಳು ಮನೆಗೆ ಬಾರದೇ ಗಾಬರಿಗೊಂಡ ಮನೆಯವರು ಪೊಲೀಸರಿಗೆ ದೂರು ನೀಡಿದ್ದರು. ಈಜಾಟಕ್ಕೆ ಹೋಗಿ ಮರಳಿದ್ದ ಬಾಲಕನ ವಿಚಾರಣೆ ವೇಳೆ ಜೊತೆಗೆ ತೆರಳಿದ್ದ ಇಬ್ಬರು ನೀರುಪಾಲಾದ ಬಗ್ಗೆ ತಿಳಿದುಬಂದಿದೆ. ಹೀಗಾಗಿ ನಿನ್ನೆ ಸಂಜೆಯಿಂದ ಸ್ವರ್ಣಾ ನದಿಯಲ್ಲಿ ಹುಡುಕಾಟ ನಡೆಸಲಾಗಿತ್ತು.
ಈಜು ಪಟು ಈಶ್ವರ್ ಸೇರಿದಂತೆ ಅಗ್ನಿಶಾಮಕ ದಳವನ್ನು ಕರೆಸಿಕೊಂಡು ಕಾರ್ಯಾಚರಣೆ ನಡೆಸಲಾಗಿತ್ತು. ಆದರೆ, ಮಕ್ಕಳು ಪತ್ತೆ ಆಗಿರಲಿಲ್ಲ. ಇಂದು ಬೆಳಗ್ಗೆ ಹರಿಯುವ ನದಿಯಲ್ಲಿ ಇಬ್ಬರ ಶವ ತೇಲುತ್ತಿರುವುದು ಕಂಡುಬಂದಿದ್ದು ದಡಕ್ಕೆ ತಂದಿದ್ದಾರೆ. ಬ್ರಹ್ಮಾವರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Two students, Shreyas and Anas, reportedly drowned in Madisalu rivulet when swimming on Tuesday October 19. Their bodies were recovered on Wednesday October 20 morning.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
07-11-25 11:33 am
HK News Desk
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
07-11-25 02:18 pm
Mangalore Correspondent
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
ತಯಾರಿಕಾ ನ್ಯೂನತೆಯುಳ್ಳ ಇನೋವಾ ಕಾರು ಮಾರಾಟ ; ಬಲ ಬದ...
07-11-25 11:41 am
ನ.9ರಂದು ಕೊಟ್ಟಾರದಲ್ಲಿ ಎಸ್.ಕೆ ಗೋಲ್ಡ್ ಸ್ಮಿತ್ ಸೊಸ...
06-11-25 10:50 pm
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm