ಬ್ರೇಕಿಂಗ್ ನ್ಯೂಸ್
21-10-21 02:15 pm Mangalore Reporter ಕರಾವಳಿ
ಉಡುಪಿ, ಅ.21 : ಅವಿಭಜಿತ ಜಿಲ್ಲೆಯಲ್ಲಿ ಆಸ್ಕರ್ ಫೆರ್ನಾಂಡಿಸ್ ಮಾಡಿದ ಅಭಿವೃದ್ಧಿ ಕೆಲಸಗಳು ಅವಿಸ್ಮರಣೀಯ. ರಾಜಕೀಯ ಎದುರಾಳಿಗಳನ್ನು ವೈರಿಗಳಂತೆ ಕಾಣದೆ, ಅವರೆಲ್ಲರನ್ನು ಪ್ರೀತಿಸಿದ ಆಸ್ಕರಣ್ಣ, ದೇಶದಲ್ಲಿ ಹಲವಾರು ನಾಯಕರನ್ನು ಸಾರ್ವಜನಿಕ ಜೀವನದಲ್ಲಿ ಬೆಳೆಸಿದವರು. ನಮ್ಮೆಲ್ಲರ ಸಾರ್ವಜನಿಕ ಬದುಕಿನಲ್ಲಿ ಆಸ್ಕರ್ ಫೆರ್ನಾಂಡಿಸ್ ತಾಯಿಗೆ ಸಮಾನರು ಎಂದು ಮಾಜಿ ಸಚಿವ ರಮಾನಾಥ ರೈ ಸ್ಮರಿಸಿದ್ದಾರೆ.
ದಿ. ಆಸ್ಕರ್ ಫೆರ್ನಾಂಡಿಸ್ ಅಭಿಮಾನಿ ಬಳಗದ ನೇತೃತ್ವದಲ್ಲಿ ಉದ್ಯಾವರ ಸಂತ ಫ್ರಾನ್ಸಿಸ್ ಝೇವಿಯರ್ ದೇವಾಲಯದ ವಠಾರದಲ್ಲಿ ನಡೆದ 'ನುಡಿ ನಮನ' ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಉಡುಪಿ ಶಾಸಕ ರಘುಪತಿ ಭಟ್ ಮಾತನಾಡಿ, ಜಿಲ್ಲೆಯಲ್ಲಿ ದೀರ್ಘಾವಧಿ ರಾಜಕೀಯ ನಾಯಕನಾಗಿ ಪ್ರಜ್ವಲಿಸಿದವರು ಆಸ್ಕರ್. ದೆಹಲಿಯ ತನ್ನ ಕಚೇರಿಯಲ್ಲಿ ತಡರಾತ್ರಿ ವರೆಗೂ ಜನರ ಸಂಪರ್ಕಕ್ಕೆ ಸಿಗುತ್ತಿದ್ದ ಆಸ್ಕರ್ ಸಮಸ್ತ ಜನಪ್ರತಿನಿಧಿಗಳಿಗೆ ಪ್ರೇರಣೆ. ಎಲ್ಲರನ್ನೂ ಸಮಾನವಾಗಿ ಕಾಣುವ ಅವರ ಮಾನವೀಯ ಗುಣಗಳೇ ನನಗೆ ಪ್ರೇರಣೆ. ನನ್ನ ವೈಯಕ್ತಿಕ ಜೀವನದಲ್ಲಿ ತೀರಾ ಕಷ್ಟದಲ್ಲಿದ್ದಾಗ ಆಸ್ಕರ್ ಫೆರ್ನಾಂಡಿಸ್ ಸಾಂತ್ವನ ಹೇಳಿದ್ದು ಮರೆಯಲಾಗದ್ದು ಎಂದರು.
ಆಸ್ಕರ್ ಫೆರ್ನಾಂಡಿಸ್ ಅಭಿಮಾನಿ ಬಳಗದ ಅಧ್ಯಕ್ಷ ಮತ್ತು ಉದ್ಯಮಿ ರೊನಾಲ್ಡ್ ಮನೋಹರ್ ಕರ್ಕಡ ಮಾತನಾಡಿ, ಸರಳ ಸಜ್ಜನಿಕೆಯ ರಾಜಕಾರಣಿಯಾಗಿದ್ದ ಆಸ್ಕರ್ ಧರ್ಮ ಮತ್ತು ಪಕ್ಷವನ್ನು ಮೀರಿ ಬೆಳೆದವರು. ತನ್ನ ಪಕ್ಷದವರನ್ನು ಮಾತ್ರವಲ್ಲದೆ ಇತರ ಪಕ್ಷದವರನ್ನು ಗೌರವಿಸುತ್ತಿದ್ದ ಆಸ್ಕರ್ ಪ್ರಸಕ್ತ ಕಾಲದ ರಾಜಕಾರಣಿಗಳಿಗೆ ಮಾದರಿ. ಉದ್ಯಾವರದಂತಹ ಸಣ್ಣ ಗ್ರಾಮದಲ್ಲಿ ಬೆಳೆದು ದೆಹಲಿಯ ವರೆಗೂ ಪ್ರಭಾವ ಬೆಳೆಸಿಕೊಂಡಿದ್ದು ಅವಿಸ್ಮರಣೀಯ. ಹಲವು ಯುವಕರಿಗೆ ಉದ್ಯೋಗದ ವ್ಯವಸ್ಥೆ, ಸಂಕಷ್ಟದಲ್ಲಿದ್ದ ಹಲವಾರು ಕುಟುಂಬಗಳಿಗೆ ಆಸ್ಕರ್ ಆಸರೆಯಾಗಿದ್ದರು ಎಂದರು.
ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಅಭಯಚಂದ್ರ ಜೈನ್, ಪ್ರಮೋದ್ ಮಧ್ವರಾಜ್, ಉದ್ಯಾವರ ಗ್ರಾಮ ಪಂಚಾಯತ್ ಅಧ್ಯಕ್ಷ ರಾಧಾಕೃಷ್ಣ ಶ್ರೀಯಾನ್, ಉಡುಪಿ ಧರ್ಮಪ್ರಾಂತ್ಯದ ಕುಲಪತಿ ಅ.ವಂ. ಫಾ. ಸ್ಟ್ಯಾನಿ ಬಿ ಲೋಬೊ, ಆದರ್ಶ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ. ಚಂದ್ರಶೇಖರ್, ನಾಗೇಶ್ ಕುಮಾರ್ ಉದ್ಯಾವರ, ಎಂ.ಎ ಗಪೂರ್, ಬಿಪಿನ್ ರಾವ್, ಆಸ್ಕರ್ ಫೆರ್ನಾಂಡಿಸ್ ಅವರ ಸೊಸೆ ಫ್ರೆಜಿಲ್ ಫೆರ್ನಾಂಡಿಸ್ ಮತ್ತಿತರರು ನುಡಿನಮನ ಸಲ್ಲಿಸಿದರು.
ವಿಧಾನಪರಿಷತ್ ಮಾಜಿ ಸಭಾಪತಿ ಪ್ರತಾಪ್ ಚಂದ್ರ ಶೆಟ್ಟಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು, ಯುವ ಕಾಂಗ್ರೆಸ್ ಅಧ್ಯಕ್ಷ ದೀಪಕ್ ಕೋಟ್ಯಾನ್, ಕಾರ್ಪೊರೇಟರ್ ನವೀನ್ ಡಿಸೋಜಾ, ವಂ. ಫಾ. ವಿಲಿಯಂ ಮಾರ್ಟಿಸ್, ಪ್ರಮುಖರಾದ ದಿನೇಶ್ ಪುತ್ರನ್, ಡೆರಿಕ್ ಡಿಸೋಜ, ನವೀನ್ ಚಂದ್ರ ಶೆಟ್ಟಿ, ಪ್ರಖ್ಯಾತ್ ಶೆಟ್ಟಿ, ಮೇರಿ ಡಿಸೋಜ, ಹರೀಶ್ ಶೆಟ್ಟಿ, ರೋಶನಿ ಒಲಿವೇರಾ, ಅನಿತಾ ಡಿಸೋಜ, ದೀಪಕ್ ಹೆಗ್ಡೆ, ಮೇರಿ ಡಿಸೋಜಾ, ನೇರಿ ಕರ್ನೇಲಿಯೊ, ಅರ್ವಿಂದ್ ಫೆರ್ನಾಂಡಿಸ್, ರೋಯ್ಡನ್ ರೊಡ್ರಿಗಸ್ ಮತ್ತಿತರರು ಉಪಸ್ಥಿತರಿದ್ದರು.
ನುಡಿನಮನ ಕಾರ್ಯಕ್ರಮಕ್ಕೂ ಮೊದಲು ಪವಿತ್ರ ಬಲಿಪೂಜೆ ಮತ್ತು ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿತ್ತು. ಬಲಿಪೂಜೆಯ ನೇತೃತ್ವವನ್ನು ನಿವೃತ್ತ ಧರ್ಮಗುರು ವಂ. ಫಾ. ಝೇವಿಯರ್ ಪಿಂಟೊ ನೆರವೇರಿಸಿದರೆ, ಮಂಗಳೂರು ದಕ್ಷಿಣದ ಮಾಜಿ ಶಾಸಕ ಜೆ ಆರ್ ಲೋಬೊ ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿದರು.
ದಿವಂಗತ ಆಸ್ಕರ್ ಫೆರ್ನಾಂಡಿಸ್ ಅಭಿಮಾನಿ ಬಳಗದ ಸಂಘಟಕ ಮೊಹಮ್ಮದ್ ಶ್ರೀಶ್ ಸ್ವಾಗತಿಸಿದರೆ, ಸಂಚಾಲಕ ಸ್ಟೀವನ್ ಕುಲಾಸೊ ಪ್ರಾಸ್ತಾವಿಕ ಮಾತನಾಡಿದರು. ಶಿಕ್ಷಕ ಆಲ್ವಿನ್ ದಾಂತಿ ಕಾರ್ಯಕ್ರಮ ನಿರೂಪಿಸಿದರು.
oscar fernandese was loved by all of them, who raised many leaders in the country says ramanath rai
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 07:56 pm
Mangalore Correspondent
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm