ಕೊರೊನಾ ವಾರಿಯರ್ ಆಗಿದ್ದ ವೈದ್ಯಕೀಯ ವಿದ್ಯಾರ್ಥಿ ಕೊರೊನಾಗೆ ಬಲಿ

11-09-20 11:14 pm       Mangaluru Correspondant   ಕರಾವಳಿ

ಕೊರೊನಾ ವಾರಿಯರ್ ಆಗಿ ಸೇವೆ ಸಲ್ಲಿಸುತ್ತಿದ್ದ ವೈದ್ಯಕೀಯ ವಿದ್ಯಾರ್ಥಿಯೊಬ್ಬರು ಕೊರೊನಾದಿಂದಾಗಿ ಮೃತಪಟ್ಟಿರುವ ಘಟನೆ ಮಂಗಳೂರಿನಲ್ಲಿ ಬೆಳಕಿಗೆ ಬಂದಿದೆ.

ಮಂಗಳೂರು, ಸಪ್ಟೆಂಬರ್ 11: ಕೊರೊನಾ ವಾರಿಯರ್ ಆಗಿ ಸೇವೆ ಸಲ್ಲಿಸುತ್ತಿದ್ದ ವೈದ್ಯಕೀಯ ವಿದ್ಯಾರ್ಥಿಯೊಬ್ಬರು ಕೊರೊನಾದಿಂದಾಗಿ ಮೃತಪಟ್ಟ ಘಟನೆ ಮಂಗಳೂರಿನಲ್ಲಿ ಬೆಳಕಿಗೆ ಬಂದಿದೆ.

ಮಂಗಳೂರು ಹೊರವಲಯದ ಮುಕ್ಕಾದಲ್ಲಿರುವ ಶ್ರೀನಿವಾಸ್ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಆ್ಯಂಡ್ ರಿಸರ್ಚ್ ಸೆಂಟರ್ ನ ಪ್ರಥಮ ವರ್ಷದ ವೈದ್ಯಕೀಯ ಸ್ನಾತಕೋತ್ತರ ಪದವಿ ವಿದ್ಯಾರ್ಥಿ ಕೊರೊನಾಗೆ ಬಲಿಯಾಗಿದ್ದಾರೆ.

ಕುಂದಾಪುರ ಮೂಲದ 26 ವರ್ಷ ಪ್ರಾಯದ ಯುವಕ ಹತ್ತು ದಿನಗಳ ಹಿಂದಷ್ಟೇ ಸ್ನಾತಕೋತ್ತರ (ಎಂ.ಎಸ್) ಪದವಿಗೆ ಸೇರ್ಪಡೆಗೊಂಡಿದ್ದರು. ಆಸ್ಪತ್ರೆಯಲ್ಲಿ ತನಗೆ ವಹಿಸಿದ್ದ ಕೊರೊನಾ ವಾರಿಯರ್ ಕರ್ತವ್ಯವನ್ನು ನಿಷ್ಠೆಯಿಂದ ನಿಭಾಯಿಸುತ್ತಿದ್ದ, ಅವರಿಗೆ 3 ದಿನಗಳ ಹಿಂದೆ ಕೊರೊನಾ ದೃಢ ಪಟ್ಟಿತ್ತು. ಈ ಹಿನ್ನೆಲೆಯಲ್ಲಿ ಅವರಿಗೆ ಶ್ರೀನಿವಾಸ್ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಆ್ಯಂಡ್ ರಿಸರ್ಚ್ ಸೆಂಟರ್ ನ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.

Join our WhatsApp group for latest news updates