ಬ್ರೇಕಿಂಗ್ ನ್ಯೂಸ್
06-11-21 08:21 pm Mangaluru Correspondent ಕರಾವಳಿ
ಪುತ್ತೂರು, ನ.6: ಅಡಿಕೆ ಕದ್ದ ನೆಪದಲ್ಲಿ ಗುತ್ತಿಗಾರಿನ 16 ವರ್ಷದ ಬಾಲಕನಿಗೆ ಹಿಗ್ಗಾಮುಗ್ಗಾ ಥಳಿಸಿದ ವಿಡಿಯೋ ಇತ್ತೀಚೆಗೆ ವೈರಲ್ ಆಗಿತ್ತು. ವಿಡಿಯೋ ವೈರಲ್ ಆಗುತ್ತಲೇ ಸಾರ್ವಜನಿಕ ಆಕ್ರೋಶ ಕೇಳಿಬಂದಿದ್ದರಿಂದ ಸುಬ್ರಹ್ಮಣ್ಯ ಠಾಣೆಯ ಪೊಲೀಸರು ಮೊದಲಿಗೆ ಸುಮೊಟೊ ಕೇಸು ದಾಖಲಿಸಿದ್ದರು. ಆನಂತರ, ಸ್ವತಃ ಬಾಲಕನೇ ಹೆತ್ತವರ ಜೊತೆಗೆ ಬಂದು ಠಾಣೆಯಲ್ಲಿ ದೂರು ದಾಖಲಿಸಿದ್ದ.
ಗುತ್ತಿಗಾರಿನ ಕಡ್ತಲ್ ಕಜೆ ಎಂಬಲ್ಲಿ ಅ.27ರಂದು ಸಂಜೆ 7 ಗಂಟೆ ಸುಮಾರಿಗೆ ಘಟನೆ ನಡೆದಿತ್ತು. ಹಣ್ಣಡಿಕೆಯನ್ನು ಗೋಣಿಯಲ್ಲಿ ತುಂಬಿಸಿ ಒಯ್ಯುತ್ತಿದ್ದ ಬಾಲಕನನ್ನು, ಆತ ಕದ್ದು ತಂದ ನೆಪದಲ್ಲಿ ಅಡ್ಡಗಟ್ಟಿದ ಯುವಕರು ಹಲ್ಲೆ ನಡೆಸಿದ್ದರು. ಅಲ್ಲದೆ, ದೊಣ್ಣೆಯಲ್ಲಿ ಹಲ್ಲೆ ನಡೆಸಿದ ವಿಡಿಯೋವನ್ನು ಅವರೇ ಮಾಡಿಕೊಂಡು ಜಾಲತಾಣದಲ್ಲಿ ಹರಿಯಬಿಟ್ಟಿದ್ದರು. ಹಲ್ಲೆ ನಡೆಸಿದವರು ಸ್ಥಳೀಯವಾಗಿ ಬಜರಂಗದಳ ಸಂಘಟನೆಯಲ್ಲಿ ಗುರುತಿಸಿಕೊಂಡವರಾಗಿದ್ದು, ಅಡಿಕೆ ಕದ್ದ ಬಾಲಕನಿಗೆ ಗೂಸಾ ನೀಡಿದ್ದಾಗಿ ವಿಡಿಯೋ ಹಂಚಿದ್ದರು.

ಆದರೆ, ಯುವಕರು ಬಾಲಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಸಾರ್ವಜನಿಕ ವಲಯದಲ್ಲಿ ಆಕ್ರೋಶಕ್ಕೆ ಕಾರಣವಾಗಿತ್ತು. ಈ ಬಗ್ಗೆ ಸುಬ್ರಹ್ಮಣ್ಯ ಠಾಣೆಯಲ್ಲಿ ಕೇಸು ದಾಖಲಾಗಿದ್ದರೂ, ಪೊಲೀಸರು ಎರಡು- ಮೂರು ದಿನಗಳ ಕಾಲ ಆರೋಪಿಗಳನ್ನು ಬಂಧಿಸಿರಲಿಲ್ಲ. ಜೀವನ್, ವರ್ಷಿತ್, ಸಚಿನ್, ಮೋಕ್ಷಿತ್, ಸನತ್, ಮುರಳಿ, ಎಂ.ಪಿ.ದಿನೇಶ್, ಈಶ್ವರ, ಚಂದ್ರ, ಚೇತನ್ ಎಂಬವರ ವಿರುದ್ಧ ಪ್ರಕರಣ ದಾಖಲಾಗಿತ್ತು. ಎಲ್ಲರೂ ಬಜರಂಗದಳ ಕಾರ್ಯಕರ್ತರಾಗಿದ್ದು, ಗುತ್ತಿಗಾರು ಪೇಟೆಯಲ್ಲಿ ತಿರುಗಾಡಿಕೊಂಡಿದ್ದರೂ, ವಶಕ್ಕೆ ಪಡೆದು ವಿಚಾರಣೆ ನಡೆಸುವುದಕ್ಕೂ ಪೊಲೀಸರು ಮುಂದಾಗಿಲ್ಲ ಎಂದು ಸ್ಥಳೀಯರು ಹೇಳುತ್ತಿದ್ದರು.
ಆದರೆ, ಆರೋಪಿಗಳು ಇಂದು ಸುಳ್ಯ ಕೋರ್ಟಿಗೆ ರಾಜೋರೋಷದಿಂದ ಹಾಜರಾಗಿ ಜಾಮೀನು ಪಡೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸ್ಟೇಶನ್ ಜಾಮೀನು ಆಗಬಲ್ಲ ಸೆಕ್ಷನ್ ಗಳನ್ನೇ ಎಫ್ಐಆರ್ ನಲ್ಲಿ ವಿಧಿಸಿದ್ದರಿಂದ ಸಹಜವಾಗೇ ಜಾಮೀನು ಆಗಿದೆ ಎನ್ನಲಾಗುತ್ತಿದೆ. ನೈತಿಕ ಪೊಲೀಸ್ ಗಿರಿ ನಡೆಸಿರುವ ರೀತಿಯಲ್ಲೇ ಕೃತ್ಯ ನಡೆದಿದ್ದಲ್ಲದೆ, ಘಟನೆ ಬಗ್ಗೆ ವಿಡಿಯೋ ಸಾಕ್ಷ್ಯ ಇದ್ದರೂ, ಸಾರ್ವಜನಿಕ ವಲಯದಲ್ಲಿ ಚರ್ಚೆಗೀಡಾಗಿದ್ದ ಪ್ರಕರಣದಲ್ಲಿ ಪೊಲೀಸರು ನಿರ್ಲಕ್ಷ್ಯ ತಾಳಿದ್ದು ಎಷ್ಟರ ಮಟ್ಟಿಗೆ ಸರಿ ಎನ್ನುವ ಪ್ರಶ್ನೆಗಳು ಜನರಲ್ಲಿ ಉಂಟಾಗಿದೆ.
Sullia Boy thrashed by 10 men for allegedly stealing arecanut acuused get bail within hours. In a shocking incident that came to light with some delay, a boy was beaten up mercilessly for allegedly stealing arecanut at Purlumakki near Guthigar here last week. A video of the assault has become viral on social media. The boy has filed a complaint with the child welfare department. A first information report against ten persons who assaulted him has been registered.
05-03-26 11:42 pm
HK News Desk
ಸಂಘರ್ಷದಿಂದ ಸಮಸ್ಯೆ ಪರಿಹರಿಸಲಾಗದು, ಪಶ್ಚಿಮ ಏಷ್ಯಾ,...
05-03-26 09:40 pm
Lokayukta Raid: 8 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳ...
05-03-26 08:41 pm
ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ ; ಮಕ್ಕಳೆದುರೇ ಹಾಸ...
04-03-26 06:47 pm
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
05-03-26 08:51 pm
HK News Staffer
ಭಾರತ ಗಡಿಯಿಂದ ಸುಮಾರು 300 ಕಿ.ಮೀ. ದೂರದಲ್ಲೇ ಇರಾನ್...
05-03-26 05:02 pm
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
05-03-26 07:38 pm
HK News Staffer
Dr Nagalakshmi Choudhary, Mangalore: ಸಾಕ್ಷಿಗಳ...
05-03-26 04:36 pm
ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ...
05-03-26 02:34 pm
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
ತುಳು ಎರಡನೇ ಅಧಿಕೃತ ಭಾಷೆ; ಆಂಧ್ರಪ್ರದೇಶದಲ್ಲಿ ಕೈಗೊ...
04-03-26 09:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm