ಬ್ರೇಕಿಂಗ್ ನ್ಯೂಸ್
11-11-21 11:44 am Mangaluru Correspondent ಕರಾವಳಿ
ಉಡುಪಿ, ನ.11: ಸ್ಥಳೀಯಾಡಳಿತ ಸಂಸ್ಥೆಗಳಿಂದ ನಡೆಯುವ ವಿಧಾನ ಪರಿಷತ್ ಚುನಾವಣಾ ಕಣಕ್ಕೆ ಈ ಬಾರಿ ಪಕ್ಷೇತರ ಅಭ್ಯರ್ಥಿಯಾಗಿ ಸಹಕಾರಿ ಧುರೀಣ, ಎಸ್ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಂ.ಎನ್. ರಾಜೇಂದ್ರ ಕುಮಾರ್ ಸ್ಪರ್ಧಿಸಲು ಮುಂದಾಗಿದ್ದಾರೆ.
ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ಅಧ್ಯಕ್ಷರೂ ಆಗಿರುವ ರಾಜೇಂದ್ರ ಕುಮಾರ್, ಪರಿಷತ್ ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ. ಆದರೆ ಯಾವುದೇ ಒಂದು ಪಕ್ಷದಿಂದ ಸ್ಪರ್ಧಿಸಲ್ಲ. ಸ್ಪರ್ಧಿಸಿದರೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತ್ತೇನೆ ಎಂದಿದ್ದಾರೆ.
ಆಪ್ತರು, ಅಭಿಮಾನಿಗಳು ಎಲ್ಲರೂ ನನಗೆ ಪರಿಷತ್ ಚುನಾವಣೆಗೆ ಸ್ಪರ್ಧಿಸಲು ಒತ್ತಡ ಹಾಕುತ್ತಿದ್ದಾರೆ. ಎರಡು- ಮೂರು ದಿನಗಳಲ್ಲಿ ಚುನಾವಣೆಗೆ ನಿಲ್ಲುವ ಬಗ್ಗೆ ತೀರ್ಮಾನ ಮಾಡುತ್ತೇನೆ. ಸೋಲು- ಗೆಲುವು ನನಗೆ ಮುಖ್ಯವಲ್ಲ. ಯಾವುದೇ ಕಾರಣಕ್ಕೂ ಪಕ್ಷದಿಂದ ಸ್ಪರ್ಧಿಸುವುದಿಲ್ಲ. ಪಕ್ಷೇತರನಾಗಿ ಮಾತ್ರ ಸ್ಪರ್ಧಿಸುತ್ತೇನೆ ಎಂದು ಹೇಳಿದ್ದಾರೆ.
ನವೋದಯ ಸದಸ್ಯರು, ಪಂಚಾಯತ್ ಸದಸ್ಯರು, ಸಹಕಾರಿಗಳಿಂದ ಒತ್ತಡ ಇದೆ. ಶೇಕಡ 50ರಷ್ಟು ಸಹಕಾರಿಗಳೇ ಪಂಚಾಯತ್ ಸದಸ್ಯರಾಗಿದ್ದಾರೆ. ಸ್ವಸಹಾಯ ಸಂಘಗಳ ಮಹಿಳೆಯರು ಶೇಕಡಾ 30ರಷ್ಟು ಪಂಚಾಯತ್ ಸದಸ್ಯರಿದ್ದಾರೆ. ಹೀಗಾಗಿ ಪರಿಷತ್ ಕ್ಷೇತ್ರವನ್ನು ಸಹಕಾರ ಕ್ಷೇತ್ರಕ್ಕೂ ಮೀಸಲಿಡಬೇಕು ಎಂದು ಒತ್ತಾಯ ಮಾಡುತ್ತೇನೆ. ನ.17ರಂದು ನನ್ನ ಸ್ಪರ್ಧೆಯ ಬಗ್ಗೆ ತೀರ್ಮಾನ ಪ್ರಕಟಿಸುತ್ತೇನೆ. ಸಾಧ್ಯವಾದರೆ ಅದೇ ದಿನ ನಾಮಪತ್ರವನ್ನೂ ಸಲ್ಲಿಸುತ್ತೇನೆ ಎಂದು ಹೇಳಿದರು.
ಸ್ಥಳೀಯಾಡಳಿತ ಕ್ಷೇತ್ರದಿಂದ ಪ್ರತಿನಿಧಿಸುತ್ತಿರುವ ಕೋಟ ಶ್ರೀನಿವಾಸ ಪೂಜಾರಿ ಮತ್ತು ಪ್ರತಾಪಚಂದ್ರ ಶೆಟ್ಟಿ ಸ್ಥಾನಗಳು ಇದೇ ಡಿಸೆಂಬರ್ ವೇಳೆಗೆ ತೆರವಾಗಲಿದ್ದು ಆ ಸ್ಥಾನಗಳಿಗೆ ಡಿ.10 ರಂದು ಚುನಾವಣೆ ಘೋಷಣೆಯಾಗಿದೆ. ಈಗಾಗಲೇ ಚುನಾವಣೆಗೆ ಅಧಿಸೂಚನೆ ಪ್ರಕಟವಾಗಿದ್ದು ಬಿಜೆಪಿ ಮತ್ತು ಕಾಂಗ್ರೆಸ್ ತಮ್ಮ ಅಭ್ಯರ್ಥಿಗಳ ಘೋಷಣೆಗೆ ಮೊದಲೇ ಸಹಕಾರಿ ಧುರೀಣ ರಾಜೇಂದ್ರ ಕುಮಾರ್ ತಮ್ಮ ಸ್ಪರ್ಧೆಯ ಬಗ್ಗೆ ಮಾಹಿತಿ ಹೊರಬಿಟ್ಟು ಕಣದಲ್ಲಿ ಸಂಚಲನ ಮೂಡಿಸಿದ್ದಾರೆ.
ರಾಜೇಂದ್ರ ಕುಮಾರ್ ಕಳೆದ ಬಾರಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಕಾಂಗ್ರೆಸ್ ಸೀಟು ಗಿಟ್ಟಿಸಲು ಪ್ರಯತ್ನ ನಡೆಸಿದ್ದರು. ಆದರೆ ಸೀಟು ಸಿಕ್ಕಿರಲಿಲ್ಲ. ಹಿಂದೆ ಕಾಂಗ್ರೆಸ್ ಪಕ್ಷದಲ್ಲೇ ಇದ್ದ ಪಕ್ಷದ ಚಟುವಟಿಕೆಯಿಂದ ದೂರವಿದ್ದರು. ಬಿಜೆಪಿ ನಾಯಕರ ಜೊತೆಗೂ ಹತ್ತಿರದ ಸಂಬಂಧ ಇಟ್ಟುಕೊಂಡಿದ್ದಾರೆ. ರಾಜೇಂದ್ರ ಕುಮಾರ್ ಕಣಕ್ಕಿಳಿದರೆ ಬಿಜೆಪಿ ಮತ್ತು ಕಾಂಗ್ರೆಸ್ ಏನು ಮಾಡಲಿದೆ, ತಮ್ಮ ಪಕ್ಷದಿಂದಲೇ ಸ್ಪರ್ಧಿಸಲು ಅವಕಾಶ ನೀಡಲಿದ್ದಾರೆಯೇ ಎನ್ನುವ ಕುತೂಹಲ ಎದ್ದಿದೆ.
ಈಗಾಗಲೇ ಕಾಂಗ್ರೆಸ್ ಪಕ್ಷದಿಂದ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜು ಮುಖ್ಯಸ್ಥ ಮಂಜುನಾಥ ಭಂಡಾರಿ ಸೇರಿದಂತೆ ಹಲವರು ಚುನಾವಣೆ ಸ್ಪರ್ಧೆಗೆ ಕಸರತ್ತು ನಡೆಸಿದ್ದಾರೆ.
Cooperative sector expert M.N. Rajendra Kumar on Wednesday hinted at contesting the elections to the State Legislative Council from the local authorities constituencies scheduled for December 10. Chairman of South Canara District Cooperative Central (SCDCC) Bank, Mr. Kumar, however, said that his contest will be apolitical. Speaking to reporters in Udupi, he said that there is pressure on him from cooperatives and self-help group members to contest the Council polls.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm