ಬ್ರೇಕಿಂಗ್ ನ್ಯೂಸ್
11-11-21 09:55 pm Mangaluru Correspondent ಕರಾವಳಿ
ಉಳ್ಳಾಲ, ನ.11: ನ.13 ರಂದು ಕುತ್ತಾರು ಶ್ರೀ ರಾಜರಾಜೇಶ್ವರಿ ಮಹಾಗಣಪತಿ ದೇವಸ್ಥಾನದಲ್ಲಿ ಸಂಜೆ 5.30ರಿಂದ ತೊಕ್ಕೊಟ್ಟು ಭಗತ್ ಸಿಂಗ್ ಸೇವಾ ಪ್ರತಿಷ್ಠಾನದ ವತಿಯಿಂದ ಗೂಡುದೀಪ ಸಂಗಮ-ದೀಪಾವಳಿ ಸಂಭ್ರಮ 2021 ಗೂಡುದೀಪ ಸ್ಫರ್ಧೆ ನಡೆಯಲಿದೆ.
ತೊಕ್ಕೊಟ್ಟಿನ ಸುವರ್ಣ ಕಚೇರಿಯಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಭಗತ್ ಸಿಂಗ್ ಸೇವಾ ಪ್ರತಿಷ್ಠಾನದ ಅಧ್ಯಕ್ಷರಾದ ಜೀವನ್ ಕುಮಾರ್ ತೊಕ್ಕೊಟ್ಟು ಈ ಬಗ್ಗೆ ಮಾಹಿತಿ ನೀಡಿದರು. ಭಗತ್ ಸಿಂಗ್ ಸೇವಾ ಪ್ರತಿಷ್ಠಾನವು ಕಳೆದ ಹದಿನಾಲ್ಕು ವರ್ಷಗಳಿಂದ ನಿರಂತರ ಸಾಮಾಜಿಕ ಚಟುವಟಿಕೆಯಲ್ಲಿರುವ ಸಂಘಟನೆಯಾಗಿದೆ. ಗೂಡುದೀಪ ಸ್ಪರ್ಧೆಯಲ್ಲಿ ಸಾಂಪ್ರದಾಯಿಕ, ಆಧುನಿಕ ಮತ್ತು ಪ್ರತಿಕೃತಿ ಎಂಬ ಮೂರು ವಿಭಾಗದಲ್ಲಿ ಸ್ಪರ್ಧೆ ನಡೆಯಲಿದ್ದು ಪ್ರಥಮ, ದ್ವಿತೀಯ, ತೃತೀಯ ನಗದು ಹಾಗೂ ಸ್ಮರಣಿಕೆ ನೀಡಿ ಗೌರವಿಸಲಾಗುತ್ತಿದೆ ಎಂದರು.
ಕಾರ್ಯಕ್ರಮವನ್ನು ಸಂಸದ ನಳಿನ್ ಕುಮಾರ್ ಕಟೀಲು ಉದ್ಘಾಟಿಸಲಿದ್ದಾರೆ. ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿ ಅಧ್ಯಕ್ಷತೆ ವಹಿಸಲಿದ್ದು ಸಮಾಜ ಸೇವಕ, ಮಹಾನಗರಪಾಲಿಕೆ ಸದಸ್ಯ ಗಣೇಶ್ ಕುಲಾಲ್ ಅವರಿಗೆ ಭಗತ್ ಸಿಂಗ್ ಸಾಧಕ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದರು.
ಈಗಾಗಲೇ ಪ್ರತಿಷ್ಠಾನದ ವತಿಯಿಂದ ಭಗತ್ ಸಿಂಗ್ ಜನ್ಮದಿನಾಚರಣೆ, ಭಗತ್ ಸಿಂಗ್ ಹುತಾತ್ಮ ದಿನಾಚರಣೆ, ಬಣ್ಣದ ಅಂಗಳ ಡ್ರಾಯಿಂಗ್ ಕಾಂಪಿಟೇಷನ್, ಗಾನಂ ವೇಷಂ, ಗುರುವಂದನೆ, ವೃಕ್ಷಾಂಕುರ, ಮನೆಗೊಂದು ಗಿಡ ಕೊಡುವ ಕಾರ್ಯಕ್ರಮ ನಡೆಸಲಾಗುತ್ತಿದ್ದು ಯಶಸ್ವಿಯಾಗಿ ನಡೆದಿದೆ ಎಂದು ಹೇಳಿದರು.
ಪ್ರತಿಷ್ಠಾನದ ಗೌರವ ಸಲಹೆಗಾರರಾದ ಆನಂದ ಕೆ. ಅಸೈಗೋಳಿ, ಪ್ರಮುಖರಾದ ಹರೀಶ್ ಅಂಬ್ಲಮೊಗರು, ಪ್ರಧಾನ ಕಾರ್ಯದರ್ಶಿ ಗಣೇಶ್ ಕಾಪಿಕಾಡ್, ಸಂಚಾಲಕ ಮೋಹನ್ ಸಾಲಿಯಾನ್ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
Thokottu Bhagat Singh program to be held on Nov 13th with Deepavali celebrations.
07-09-26 01:33 pm
HK News Staffer
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
07-09-26 09:57 pm
HK News Staffer
ಬಿಜೆಪಿಯವರೇ ಭ್ರಷ್ಟಾಚಾರದಲ್ಲಿ ಕಂಠಪೂರ್ತಿ ಮುಳುಗಿದ್...
07-09-26 01:22 pm
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
07-09-26 08:56 pm
HK News Staffer
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm
ಮಂಜೇಶ್ವರ ; ಹೊಸಂಗಡಿ ಬಳಿ ಕೂಲಿ ಕಾರ್ಮಿಕನ ಹತ್ಯೆಗೈದ...
07-09-26 04:09 pm
ಹೂ ಕಟಾವಿಗೆ ಹೊರಟಿದ್ದ ಕೂಲಿ ಕಾರ್ಮಿಕರ ದುರಂತ ಅಂತ್ಯ...
07-09-26 03:42 pm
ತಿರುಪತಿ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ಕುಟುಂಬ...
07-09-26 02:06 pm