ಬ್ರೇಕಿಂಗ್ ನ್ಯೂಸ್
16-11-21 10:03 pm Mangaluru Correspondent ಕರಾವಳಿ
ಉಳ್ಳಾಲ, ನ.16: ಕುಂಪಲ, ಪಿಲಾರು ಪ್ರದೇಶದಲ್ಲಿ ಮರಿ ಚಿರತೆಯನ್ನು ಮೂವರು ಪ್ರತ್ಯಕ್ಷವಾಗಿ ಕಂಡಿದ್ದ ಹಿನ್ನೆಲೆಯಲ್ಲಿ ಕಾರ್ಯಪೃವೃತ್ತರಾದ ಅರಣ್ಯ ಇಲಾಖಾಧಿಕಾರಿಗಳು ಇಂದು ಸರಳಾಯ ಕಾಲನಿಯಲ್ಲಿ ಬೋನು ಇಟ್ಟು ಆಪರೇಷನ್ ಚೀತಾ ಕಾರ್ಯಾಚರಣೆಗೆ ಇಳಿದಿದ್ದಾರೆ.
ಕಳೆದ ಶನಿವಾರ ಸಂಜೆ ಗುತ್ತಿಗೆದಾರ ಜಯಂತ್ ಕೊಂಡಾಣ ಎಂಬವರು ಸ್ಕೂಟರಲ್ಲಿ ಸರಳಾಯ ಕಾಲನಿ ರಸ್ತೆಯಲ್ಲಿ ತೆರಳುತ್ತಿದ್ದಾಗ ಮರಿ ಚಿರತೆಯೊಂದು ಪೊದೆಯಿಂದ ನೆಗೆದು ರಸ್ತೆ ದಾಟಿತ್ತೆನ್ನಲಾಗಿದೆ. ಇದಕ್ಕೂ ಹತ್ತು ದಿವಸಗಳ ಹಿಂದೆ ಪಿಲಾರು ಪಳ್ಳ ನಿವಾಸಿ ಶಿವರಾಜ್ ಪೊಣ್ಣು ಸ್ವಾಮಿ ಮತ್ತು ಸರಳಾಯ ಕಾಲನಿ ನಿವಾಸಿ ಮೌರಿಷ್ ಡಿಸೋಜ ಅವರು ಮರಿ ಚಿರತೆಯನ್ನ ಕಣ್ಣಾರೆ ಕಂಡಿದ್ದಾಗಿ ಹೇಳಿದ್ದರು. ಮೌರಿಷ್ ಡಿಸೋಜ ಅವರು ಬೆಳಗ್ಗೆ ತೋಟದ ಕೆಲಸಕ್ಕೆಂದು ತೆರಳುತ್ತಿದ್ದ ವೇಳೆ ಚಿರತೆ ಮರಿಯು ಡಿಸೋಜರನ್ನ ದಿಟ್ಟಿಸಿ ಬುಸುಗುಟ್ಟಿ ಓಡಿತ್ತೆನ್ನಲಾಗಿದೆ. ಪ್ರತ್ಯಕ್ಷದರ್ಶಿ ಹೇಳಿಕೆಗಳನ್ನ ಗಂಭೀರವಾಗಿ ಪರಿಗಣಿಸಿದ್ದ ಕೋಟೆಕಾರು ಶಾಖೆ ಉಪವಲಯ ಅರಣ್ಯಾಧಿಕಾರಿ ಮಹಾಬಲ ನೇತೃತ್ವದ ತಂಡ ಚಿರತೆ ಕಾಣಿಸಿಕೊಂಡ ಪ್ರದೇಶಗಳಿಗೆ ಎರಡು ಬಾರಿ ಭೇಟಿ ನೀಡಿ ಪರಿಶೀಲನೆ ನಡೆಸಿತ್ತು. ಇಂದು ಅರಣ್ಯಾಧಿಕಾರಿಗಳು ಮರಿ ಚಿರತೆಯನ್ನು ಸೆರೆ ಹಿಡಿಯಲು ಸರಳಾಯ ಕಾಲನಿಯ ಪೊದೆಗಳ ಪ್ರದೇಶದಲ್ಲಿ ಬೋನನ್ನು ಇಟ್ಟಿದ್ದಾರೆ.
ಪ್ರದೇಶದಲ್ಲಿ ಚಿರತೆ ಇರುವಿಕೆಯ ಬಗ್ಗೆ ಪ್ರತ್ಯಕ್ಷ ದರ್ಶಿಗಳು ಹೇಳಿರುವುದರ ಹಿನ್ನೆಲೆಯಲ್ಲಿ ಬೋನನ್ನು ಇಟ್ಟು ಕಾರ್ಯಾಚರಣೆ ಶುರು ಮಾಡಿದ್ದೇವೆ. ಸ್ಥಳೀಯರು ಆದಷ್ಟು ಜಾಗರೂಕರಾಗಿರುವಂತೆ ಅರಣ್ಯಾಧಿಕಾರಿ ಮಹಾಬಲ ಅವರು ಜನರಿಗೆ ಸೂಚನೆ ನೀಡಿದ್ದಾರೆ.
ಸ್ಥಳೀಯ ಬಿಜೆಪಿ ಮುಖಂಡರಾದ ಸತೀಶ್ ಕುಂಪಲ, ಕಾಂಗ್ರೆಸ್ ಮುಖಂಡ ದಿನೇಶ್ ಕುಂಪಲ ಅವರು ಅಧಿಕಾರಿಗಳಿಗೆ ಅಗತ್ಯ ಸಹಕಾರ ನೀಡಿದ್ದಾರೆ. ಬೋನನ್ನ ತರುವಲ್ಲಿ ಸ್ಥಳೀಯರಾದ ಕಿಶೋರ್ ಕುಂಪಲ, ನಾಗೇಶ್ ಕುಂಪಲ, ಅಭಿಜಿನ್, ತರುಣ್ ಅವರು ಇಲಾಖಾಧಿಕಾರಿಗಳಿಗೆ ಸಹಕರಿಸಿದ್ದಾರೆ. ಅರಣ್ಯ ರಕ್ಷಕಿ ಸೌಮ್ಯ ಕೆ. ಜೊತೆಗಿದ್ದರು.
ಕುಂಪಲ, ಪಿಲಾರು ಪ್ರದೇಶದಲ್ಲಿ ಚಿರತೆ ಗುಮ್ಮ ; ಸ್ಥಳಕ್ಕೆ ಅರಣ್ಯ ಅಧಿಕಾರಿಗಳ ಭೇಟಿ, ಚಿರತೆ ಬಗ್ಗೆ ಸಿಗದ ಸುಳಿವು
ಕುಂಪಲದಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ ! ಅರಣ್ಯ ಅಧಿಕಾರಿಗಳ ದೌಡು, ಆಪರೇಷನ್ ಚೀತಾ ಕಾರ್ಯಾಚರಣೆಗೆ ಸಿದ್ಧತೆ
Mangalore Cheetah in Kumpala near Pillar Forest officials wait for catch with bone.
10-05-25 10:40 pm
HK News Desk
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
U T Khader, Dinesh Gundurao, Suhas Shetty Mur...
08-05-25 07:50 pm
10-05-25 11:05 pm
HK News Desk
ಎಸ್-400 ಏರ್ ಡಿಫೆನ್ಸ್ ಸಿಸ್ಟಮ್ ಮತ್ತು ಬ್ರಹ್ಮೋಸ್...
10-05-25 09:24 pm
India and Pakistan, Ceasefire: ಮೂರೇ ದಿನದಲ್ಲಿ...
10-05-25 08:28 pm
India-Pakistan war: ಭಾರತ - ಪಾಕಿಸ್ತಾನ ತಕ್ಷಣದಿಂ...
10-05-25 07:25 pm
Indian Military, Pakistan : ತನ್ನ ಮೂರು ವಾಯುನೆಲ...
10-05-25 01:58 pm
10-05-25 07:10 pm
Mangalore Correspondent
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm