ಬ್ರೇಕಿಂಗ್ ನ್ಯೂಸ್
19-11-21 07:19 pm Mangaluru correspondent ಕರಾವಳಿ
ಮಂಗಳೂರು, ನ.19: ವಿಧಾನ ಪರಿಷತ್ ಚುನಾವಣೆಗೆ ಸಹಕಾರಿ ಧುರೀಣ ರಾಜೇಂದ್ರ ಕುಮಾರ್ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಲಿದ್ದಾರೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರು ರಾಜೇಂದ್ರ ಕುಮಾರ್ ವಿರುದ್ಧ ಮೊದಲ ಬಾರಿಗೆ ದನಿ ಎತ್ತಿದ್ದಾರೆ.
ಮಂಗಳೂರು ಹೊರವಲಯದ ಅಡ್ಯಾರ್ ಗಾರ್ಡನ್ ನಲ್ಲಿ ನಡೆದ ಜನಸ್ವರಾಜ್ ಸಮಾವೇಶದಲ್ಲಿ ಎಸ್ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಂ.ಎನ್ ರಾಜೇಂದ್ರ ಕುಮಾರ್ ವಿರುದ್ಧ ಸಹಕಾರಿ ಸಚಿವ ಎಸ್.ಟಿ.ಸೋಮಶೇಖರ್ ನೇರ ವಾಗ್ದಾಳಿ ನಡೆಸಿದ್ದಾರೆ.
ಎಸ್ ಸಿ ಡಿ ಸಿ ಸಿ ಬ್ಯಾಂಕ್ ಆಸ್ತಿಯನ್ನು ದುರುಪಯೋಗ ಮಾಡಲಾಗುತ್ತಿದೆ. ಸಹಕಾರಿ ಬ್ಯಾಂಕುಗಳ ಹಣವನ್ನು ದುರುಪಯೋಗ ಪಡಿಸಲಾಗುತ್ತಿದೆ. ಅಕ್ರಮ ಎಸಗಲಾಗುತ್ತಿದೆ ಎಂದು ಆರೋಪಿಸಿದ ಸಚಿವ ಸೋಮಶೇಖರ್, ರಾಜೇಂದ್ರ ಕುಮಾರ್ ಹೆಸರೆತ್ತದೆ ವಾಗ್ದಾಳಿ ನಡೆಸಿದ್ದಾರೆ.
ನವೋದಯ ಟ್ರಸ್ಟ್ ಸ್ಥಾಪನೆ ಮಾಡಿರುವುದಕ್ಕೆ ಆಕ್ಷೇಪ ಇಲ್ಲ. ಆದರೆ ನವೋದಯ ಟ್ರಸ್ಟ್ ಹೆಸರಲ್ಲಿ ಎಸ್ ಸಿ ಡಿ ಸಿ ಸಿ ಬ್ಯಾಂಕಿನಿಂದ ಹಣ ರವಾನೆ ಮಾಡುತ್ತಿರುವುದು ಕಾನೂನು ಬಾಹಿರ. ಈ ರೀತಿಯ ಕಾನೂನು ಬಾಹಿರ ಚಟುವಟಿಕೆಗೆ ಡಿಸಿಸಿ ಬ್ಯಾಂಕನ್ನು ಬಳಸುತ್ತಿರುವುದು ಅಕ್ಷಮ್ಯ. ಎಸ್ ಸಿ ಡಿ ಸಿ ಸಿ ಬ್ಯಾಂಕಿನಿಂದ 19 ಲಕ್ಷ ರೂಪಾಯಿ ಹಣವನ್ನು ಪ್ರತಿ ತಿಂಗಳು ನವೋದಯ ಟ್ರಸ್ಟ್ ಗೆ ಕಾನೂನು ಬಾಹಿರವಾಗಿ ನೀಡಲಾಗುತ್ತಿದೆ. ಬ್ಯಾಂಕ್ ಅಧ್ಯಕ್ಷರ ಅಕ್ರಮಕ್ಕೆ ಸಹಕಾರಿ ಇಲಾಖೆಯ ಅಧಿಕಾರಿಗಳು ಸಹಕರಿಸುತ್ತಿದ್ದಾರೆ. ಅಕ್ರಮ ಆಗುತ್ತಿದ್ದರೂ ಅಧಿಕಾರಿಗಳು ಸಹಕರಿಸುತ್ತಿರುವುದನ್ನು ಸಹಿಸಲು ಸಾಧ್ಯವಿಲ್ಲ.
ಈ ರೀತಿ ಅಕ್ರಮಕ್ಕೆ ಸಹಕಾರ ನೀಡುತ್ತಿರುವ ಅಧಿಕಾರಿಗಳನ್ನು ಸಸ್ಪೆಂಡ್ ಮಾಡುತ್ತೇನೆ. ಅಕ್ರಮವನ್ನು ಮಟ್ಟ ಹಾಕುತ್ತೇವೆ ಎಂದು ಸಚಿವ ಎಸ್.ಟಿ ಸೋಮಶೇಖರ್ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ.
ಉಡುಪಿಯಲ್ಲಿ ನಡೆದ ಜನಸ್ವರಾಜ್ ಕಾರ್ಯಕ್ರಮದಲ್ಲಿಯೂ ಇದೇ ಮಾತು ಆಡಿರುವ ಸಚಿವರು, ದಕ್ಷಿಣ ಕನ್ನಡ - ಉಡುಪಿ ಜಿಲ್ಲಾ ಸಹಕಾರಿ ಬ್ಯಾಂಕಿನ ಅಧ್ಯಕ್ಷರನ್ನು ತೆಗೆದುಹಾಕುವ ಅಧಿಕಾರ ಸರಕಾರಕ್ಕೆ ಇದೆ ಎಂದು ಗುಡುಗಿದ್ದಾರೆ.
ರಾಜೇಂದ್ರಗೆ ಎಚ್ಚರಿಕೆ ರವಾನಿಸಿದ ಬಿಜೆಪಿ ನಾಯಕರು !
ರಾಜೇಂದ್ರ ಕುಮಾರ್ ಪರವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ನಾಯಕರು ಇದ್ದರೂ, ಇದೀಗ ರಾಜೇಂದ್ರ ಕುಮಾರ್ ಕಾಂಗ್ರೆಸ್ ಪಕ್ಷದಿಂದ ಕಣಕ್ಕಿಳಿಯಲಿದ್ದಾರೆ ಎಂಬ ಮಾಹಿತಿ ಬೆನ್ನಲ್ಲೇ ಬಿಜೆಪಿ ಸರಕಾರದ ಸಚಿವರು ತಿರುಗಿ ಬಿದ್ದಿದ್ದಾರೆ. ಪರೋಕ್ಷವಾಗಿ ಕಾಂಗ್ರೆಸ್ ಪಕ್ಷದಿಂದ ಕಣಕ್ಕಿಳಿದರೆ ಪರಿಣಾಮ ನೆಟ್ಟಗಿರಲ್ಲ ಎನ್ನುವ ಸುಳಿವನ್ನು ಬಿಜೆಪಿ ನಾಯಕರು ನೀಡಿದ್ದಾರೆ. ಬಿಜೆಪಿ ಪ್ರಭಾವಿ ನಾಯಕರ ಸಹಕಾರದಲ್ಲಿ ಪಕ್ಷೇತರ ಸ್ಪರ್ಧೆಗೆ ಮುಂದಾಗಿದ್ದ ರಾಜೇಂದ್ರ ಕುಮಾರ್, ಪಕ್ಷೇತರನಾಗಿ ಸ್ಪರ್ಧಿಸಿದರೆ ಗೆಲುವು ಸುಲಭ ಇಲ್ಲ ಎನ್ನುವುದು ಮನದಟ್ಟಾಗುತ್ತಲೇ ಕಾಂಗ್ರೆಸ್ ಟಿಕೆಟ್ ಪಡೆಯಲು ಕಸರತ್ತು ನಡೆಸಿದ್ದಾರೆ.
Mangalore Minister T Somashekhar Slams SCDCC Bank Chairman Rajendra Kumar over election. In the election meant to elect two representatives of local bodies in Dakshina Kannada constituency being held for the council next month, the Congress and the BJP were expecting to bag one seat each till a couple of days back. But the entry of veteran leader of the cooperative sector, Dr M N Rajendra Kumar, is likely to change the game altogether.
19-05-25 04:00 pm
HK News Desk
Bjp, Radha Mohan Das Agarwal: 1971ರ ಯುದ್ಧ ಗೆಲ...
17-05-25 01:44 pm
Santosh Lad, Modi, Pak, War: ಮೋದಿ ತಾವೇ ಸುಪ್ರೀ...
16-05-25 10:04 am
Davanagere Sp, Constable Accident: ದಾವಣಗೆರೆಯಲ...
15-05-25 10:16 pm
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
19-05-25 02:25 pm
HK News Desk
ಚಾರ್ಮಿನಾರ್ ಬಳಿಯ ಗುಲ್ಜಾರ್ ಹೌಸ್ನಲ್ಲಿ ಬೆಂಕಿ ಅವ...
19-05-25 01:46 pm
Brijesh Chowta, Tejaswi Surya: ಪಾಕ್ ಪ್ರೇರಿತ ಭ...
18-05-25 08:23 pm
ಪಾಕ್ ಪರವಾಗಿ ಬೇಹುಗಾರಿಕೆ ; ಭಾರತೀಯ ಸೇನಾ ಮಾಹಿತಿ ಸ...
17-05-25 10:51 pm
Donald Trump, Asim Munir: ಡೊನಾಲ್ಡ್ ಟ್ರಂಪ್ ಕುಟ...
17-05-25 03:42 pm
19-05-25 11:07 pm
Mangalore Correspondent
Jail Attack, Suhas Shetty, Mangalore, Chotte...
19-05-25 10:14 pm
Konaje Suicide, Mangalore, Hair loss: ಕೂದಲು ಉ...
19-05-25 09:41 pm
Mangalore Job Scam, Police, Lawrence Dsouza,...
19-05-25 05:22 pm
Akanksha Suicide, Dharmasthala, Mangalore: ಏರ...
19-05-25 12:31 pm
19-05-25 09:38 pm
Mangalore Correspondent
Belagavi Murder, Mother in law: ಸೊಸೆಗೆ ಮಕ್ಕಳಾ...
19-05-25 03:35 pm
Reshma Bariga, FIR, Mangalore; ಆಪರೇಶನ್ ಸಿಂಧೂರ...
18-05-25 07:45 pm
Suhas Shetty, BJP Corporator Shweta Poojary,...
18-05-25 07:35 pm
Bangalore Cigarette Murder, Video Viral: ಕಾರಿ...
17-05-25 05:00 pm