ಬ್ರೇಕಿಂಗ್ ನ್ಯೂಸ್
22-11-21 03:05 pm Mangaluru correspondent ಕರಾವಳಿ
ಮಂಗಳೂರು, ನ.22: ಕನ್ನಡ ಸಾಹಿತ್ಯ ಪರಿಷತ್ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾಗಿ ಉಜಿರೆ ಎಸ್ ಡಿಎಂ ಕಾಲೇಜಿನ ಕನ್ನಡ ಪ್ರಾಧ್ಯಾಪಕ ಡಾ.ಎಂ.ಪಿ. ಶ್ರೀನಾಥ್ ಆಯ್ಕೆಯಾಗಿದ್ದಾರೆ.
ರಾಜ್ಯಾದ್ಯಂತ ಕನ್ನಡ ಸಾಹಿತ್ಯ ಪರಿಷತ್ ಘಟಕಕ್ಕೆ ಭಾನುವಾರ ಚುನಾವಣೆ ನಡೆದಿದ್ದು, ಆಯಾ ಜಿಲ್ಲಾ ಘಟಕಗಳಿಗೆ ಅಧ್ಯಕ್ಷರ ಆಯ್ಕೆ ಆಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 44.8 ಶೇಕಡಾ ಮತದಾನ ಆಗಿತ್ತು. ಶ್ರೀನಾಥ್ ಪರವಾಗಿ 1488 ಮತಗಳು ಬಿದ್ದರೆ, ಪ್ರತಿಸ್ಪರ್ಧಿ ಮಂಗಳೂರು ಏರ್ಪೋರ್ಟ್ ಮಾಜಿ ನಿರ್ದೇಶಕ ಎಂ.ಆರ್. ವಾಸುದೇವ ಪರವಾಗಿ 534 ಮತಗಳು ಬಿದ್ದವು. ಶ್ರೀನಾಥ್ ನಿರಾಯಾಸವಾಗಿ ಗೆಲುವು ಸಾಧಿಸಿದ್ದಾರೆ.
ಉಜಿರೆ ಎಸ್ ಡಿಎಂ ಕಾಲೇಜಿನಲ್ಲಿ 26 ವರ್ಷಗಳಿಂದ ಕನ್ನಡ ಉಪನ್ಯಾಸಕರಾಗಿರುವ ಎಂ.ಪಿ.ಶ್ರೀನಾಥ್ ಈಗ ಸಹಾಯಕ ಪ್ರಾಧ್ಯಾಪಕ ಹುದ್ದೆಯಲ್ಲಿದ್ದಾರೆ. ಹಲವಾರು ವರ್ಷಗಳಿಂದ ಕನ್ನಡ ಪರ ಚಟುವಟಿಕೆ, ಕನ್ನಡ ಸಾಹಿತ್ಯ ಪರಿಷತ್ ಕೆಲಸದಲ್ಲಿ ನಿರತರಾಗಿದ್ದಾರೆ.
ಉಡುಪಿ ಜಿಲ್ಲೆಯ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿ ನೀಲಾವರ ಸುರೇಂದ್ರ ಅಡಿಗ ಮೂರನೇ ಬಾರಿಗೆ ಆಯ್ಕೆಯಾಗಿದ್ದಾರೆ. ತೀವ್ರ ಸ್ಪರ್ಧೆ ಇದ್ದ ಚುನಾವಣೆಯಲ್ಲಿ ಸುರೇಂದ್ರ ಅಡಿಗ 432 ಮತಗಳನ್ನು ಪಡೆದರೆ, ಪ್ರತಿಸ್ಪರ್ಧಿ ಸುಬ್ರಹ್ಮಣ್ಯ ಬಸ್ರಿ 400 ಮತಗಳನ್ನು ಪಡೆದಿದ್ದರು.
ಮೂರು ವರ್ಷಗಳಿದ್ದ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಹುದ್ದೆಯ ಅವಧಿಯನ್ನು 5 ವರ್ಷಗಳಿಗೆ ಮಾಡಲಾಗಿದೆ. 5 ವರ್ಷ ಅವಧಿ ಆದಬಳಿಕ ಮೊದಲ ಬಾರಿಗೆ ಸಾಹಿತ್ಯ ಪರಿಷತ್ ಹುದ್ದೆಗಳಿಗೆ ಚುನಾವಣೆ ನಡೆಸಲಾಗಿದ್ದು, ರಾಜ್ಯಾದ್ಯಂತ ತೀವ್ರ ತುರುಸಿನ ಸ್ಪರ್ಧೆ ನಡೆದಿತ್ತು.
Assistant professor and noted writer, Dr M P Srinath, was elected as the president of Dakshina Kannada (DK) district Kannada Sahitya Parishad. Voting was held in ten centres across Dakshina Kannada district between 8 am and 4 pm on Sunday in which 44.8 percent members voted.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:23 am
HK News Desk
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
ಜಮ್ಮು ಗಡಿಯಲ್ಲಿ ಪಾಕ್ ಶೆಲ್ ದಾಳಿ ; ಬಿಎಸ್ಎಫ್ ಯೋಧ,...
11-05-25 01:43 pm
12-05-25 11:26 am
HK News Desk
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm