ಬ್ರೇಕಿಂಗ್ ನ್ಯೂಸ್
22-11-21 10:05 pm Mangaluru Correspondent ಕರಾವಳಿ
ಮಂಗಳೂರು, ನ.22: ಬಜ್ಪೆ ಠಾಣೆಯ ಇನ್ಸ್ ಪೆಕ್ಟರ್ ಸಂದೇಶ್ ಪಿ.ಜಿ. ಸಾರ್ವಜನಿಕರ ಜೊತೆ ದುರ್ವರ್ತನೆ ತೋರುತ್ತಿದ್ದು ವರ್ಗಾವಣೆ ಮಾಡಬೇಕೆಂದು ಠಾಣೆ ವ್ಯಾಪ್ತಿಯ ನಾಲ್ಕು ಗ್ರಾಮ ಪಂಚಾಯಿತಿಗಳಲ್ಲಿ ನಿರ್ಣಯ ಅಂಗೀಕಾರವಾಗಿದ್ದು ಹಳೇ ಸುದ್ದಿ. ಈ ಪೈಕಿ ಮೂರು ಗ್ರಾಮ ಪಂಚಾಯಿತಿ ಆಡಳಿತಗಳು ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ, ಗೃಹ ಸಚಿವಾಲಯ, ರಾಜ್ಯ ಪೊಲೀಸ್ ಮಹಾನಿರ್ದೇಶಕರು, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಸಿಇಓ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗೆ ದೂರು ನೀಡಿವೆ.
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸಿಇಓ, ಈ ಬಗ್ಗೆ ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಅವರಿಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಹೇಳಿ ಪತ್ರ ಬರೆದಿದ್ದಾರೆ. ಗೃಹ ಇಲಾಖೆ ಮತ್ತು ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿಯವರು ದೂರಿನ ಹಿನ್ನೆಲೆ ಮಂಗಳೂರು ಪೊಲೀಸ್ ಆಯುಕ್ತರಲ್ಲಿ ವರದಿ ಕೇಳಿದ್ದಾರೆಯೇ ಎನ್ನುವುದು ಗೊತ್ತಾಗಿಲ್ಲ. ಆದರೆ ಒಂದು ಪೊಲೀಸ್ ಠಾಣೆಯ ಠಾಣಾಧಿಕಾರಿ ವಿರುದ್ಧ ಆಯಾ ವ್ಯಾಪ್ತಿಯ ಗ್ರಾಮ ಪಂಚಾಯತಿಗಳು ಗ್ರಾಮ ಸಭೆಯಲ್ಲಿ ನಿರ್ಣಯ ಸ್ವೀಕರಿಸಿದ್ದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇದೇ ಮೊದಲು.


ಈ ಬಗ್ಗೆ ಹೆಡ್ ಲೈನ್ ಕರ್ನಾಟಕಕ್ಕೆ (Headline Karnataka) ನಾಲ್ಕು ಗ್ರಾಮ ಪಂಚಾಯತ್ ಗಳು ನಿರ್ಣಯ ಸ್ವೀಕರಿಸಿದ ಪ್ರತಿ ಲಭ್ಯವಾಗಿದೆ. ಪಡುಪೆರಾರಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಸೆ.23ರಂದು ನಡೆದ ಗ್ರಾಮಸಭೆಯಲ್ಲಿ ಬಜ್ಪೆ ಠಾಣಾಧಿಕಾರಿ ಸಂದೇಶ್ ಪಿ.ಜಿ. ವಿರುದ್ಧ ಕ್ರಮ ಕೈಗೊಳ್ಳಬೇಕು ಮತ್ತು ವರ್ಗಾವಣೆ ಮಾಡಬೇಕು ಎನ್ನುವ ಬಗ್ಗೆ ಸಾರ್ವಜನಿಕರ ಅಭಿಪ್ರಾಯದಂತೆ ನಿರ್ಣಯ ಸ್ವೀಕರಿಸಲಾಗಿದೆ. ಸಭೆಯ ನಡವಳಿ ಪುಸ್ತಕದಲ್ಲಿ ರೈತ ಸಂಘದ ಮುಖಂಡ ಕಿಟ್ಟಣ್ಣ ರೈಯವರಿಗೆ ಗುರುಪುರದಲ್ಲಿ ಪಾರ್ಕಿಂಗ್ ವಿಷಯಕ್ಕೆ ಅವಮಾನಿಸಿರುವುದು, ಕೈಕಂಬದ ಮೆಗಾ ಪ್ಲಾಜಾ ಹಾಲ್ ನ ಸಾಹುಲ್ ಎಂಬವರಿಗೆ ಪಾರ್ಕಿಂಗ್ ವಿಚಾರದಲ್ಲಿ ಸಾರ್ವಜನಿಕವಾಗಿ ನಿಂದಿಸಿ, ಲಾಠಿಯಲ್ಲಿ ಹೊಡೆದಿರುವುದು, ಕೈಕಂಬದ ಪೊಂಪೈ ಸ್ಟೋರ್ ಮಾಲಕರನ್ನು ಮೈಗೆ ಕೈಹಾಕಿ ಗದರಿಸಿರುವುದು, ಸಾಮಾಜಿಕ ಕಾರ್ಯಕರ್ತ ರೋಶನ್ ಲೋಬೋ ಎಂಬವರಿಗೆ ಠಾಣೆಯಲ್ಲಿ ಅವಮಾನಿಸಿ, ಬೆದರಿಕೆ ಹಾಕಿರುವ ಬಗ್ಗೆ ಉಲ್ಲೇಖಿಸಲಾಗಿದೆ.

ಸೆ.24ರಂದು ಕಂದಾವರ ಗ್ರಾಮ ಪಂಚಾಯತಿಯ ಕಂದಾವರ, ಕೊಳಂಬೆ ಮತ್ತು ಅದ್ಯಪಾಡಿ ಗ್ರಾಮಗಳ ವ್ಯಾಪ್ತಿಯ ಗ್ರಾಮಸಭೆ ಕಿನ್ನಿಕಂಬ್ಳದಲ್ಲಿ ನಡೆದಿತ್ತು. ಪಂಚಾಯತ್ ಅಧ್ಯಕ್ಷ ಉಮೇಶ್ ಮೂಲ್ಯ ಅಧ್ಯಕ್ಷತೆ ವಹಿಸಿದ್ದರು. ಕ್ಷೇತ್ರ ಶಿಕ್ಷಣಾಧಿಕಾರಿ ರಾಜಲಕ್ಷ್ಮಿ ನೋಡಲ್ ಅಧಿಕಾರಿಯಾಗಿದ್ದರು. ಸಭೆಯಲ್ಲಿ ಬಜ್ಪೆ ಠಾಣೆಯ ನಿರೀಕ್ಷಕರು ಸಾರ್ವಜನಿಕರ ಮೇಲೆ ದೌರ್ಜನ್ಯ ಎಸಗುತ್ತಿದ್ದು ಜನಸಾಮಾನ್ಯರ ದೂರುಗಳನ್ನು ತೆಗೆದುಕೊಳ್ಳುವುದಿಲ್ಲ. ಇದು ಜನರಿಗೆ ಆಗುವ ಅನ್ಯಾಯವಾಗಿದ್ದು, ಇಂತಹ ಅಧಿಕಾರಿಯನ್ನು ವರ್ಗಾವಣೆ ಮಾಡಬೇಕೆಂದು ಮೇಲಧಿಕಾರಿಗಳಿಗೆ ಬರೆಯಲು ನಿರ್ಣಯಿಸಲಾಗಿತ್ತು.

ಸೆ.30ರಂದು ಕುಪ್ಪೆಪದವು ಚರ್ಚ್ ಹಾಲ್ ನಲ್ಲಿ ಮುತ್ತೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಸಭೆ ನಡೆದಿತ್ತು. ಸಭೆಯಲ್ಲಿ ಪಂಚಾಯತ್ ಅಧ್ಯಕ್ಷ ಸತೀಶ್ ಪೂಜಾರಿ ಅಧ್ಯಕ್ಷತೆಯಲ್ಲಿ ಅಧಿಕಾರಿಗಳು ಸೇರಿದಂತೆ 119 ಜನರು ಭಾಗವಹಿಸಿದ್ದರು. ಸಭೆಯಲ್ಲಿ ಬಜ್ಪೆ ಠಾಣಾಧಿಕಾರಿಯ ದುರ್ವರ್ತನೆ ಬಗ್ಗೆ ಚರ್ಚೆ ನಡೆದು ವರ್ಗಾವಣೆ ಮಾಡುವ ಬಗ್ಗೆ ನಿರ್ಣಯ ಸ್ವೀಕರಿಸಲಾಗಿತ್ತು. ಸಾರ್ವಜನಿಕರ ದೂರುಗಳಿಗೆ ಸ್ಪಂದನೆ ನೀಡದೆ, ಕೆಟ್ಟ ರೀತಿಯಲ್ಲಿ ವರ್ತಿಸುತ್ತಾರೆ ಎಂದು ನಡವಳಿ ಪುಸ್ತಕದಲ್ಲಿ ಉಲ್ಲೇಖ ಮಾಡಲಾಗಿದೆ.

ಅ.30ರಂದು ಗುರುಪುರ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಯಶವಂತ್ ಕುಮಾರ್ ಶೆಟ್ಟಿ ಅಧ್ಯಕ್ಷತೆಯಲ್ಲಿ ಗ್ರಾಮಸಭೆ ನಡೆದಿತ್ತು. ಸಭೆಯಲ್ಲಿ ಬಜ್ಪೆ ಠಾಣಾಧಿಕಾರಿ ಸಂದೇಶ್ ಪಿ.ಜಿ. ಸಾರ್ವಜನಿಕ ದೂರುಗಳಿಗೆ ಸ್ಪಂದಿಸದೆ, ಅವಾಚ್ಯ ಶಬ್ದಗಳಿಂದ ನಿಂದಿಸಿ ಜನಸಾಮಾನ್ಯರಿಗೆ ಎದೆಯ ಮೇಲೆ ಕಾಲಿಡುತ್ತೇನೆಂದು ಗದರಿಸುತ್ತಿದ್ದು ರೌಡಿಯಂತೆ ವರ್ತಿಸುತ್ತಿದ್ದಾರೆ. ಸಾಮಾಜಿಕ ಕಾರ್ಯಕರ್ತರ ಮೇಲೆ ಸುಳ್ಳು ಕೇಸು ಹಾಕುತ್ತೇನೆಂದು ಬೆದರಿಸುತ್ತಾರೆ. ಗ್ರಾಮಸ್ಥರಿಗೆ ಸಾಮಾಜಿಕ ಭದ್ರತೆ ಒದಗಿಸುವುದು ಗ್ರಾಮಸಭೆಯ ಕರ್ತವ್ಯ ಆಗಿರುವುದರಿಂದ ಠಾಣಾಧಿಕಾರಿ ವಿರುದ್ಧ ಕಾನೂನು ಕ್ರಮಕ್ಕೆ ಬರೆಯಲು ನಿರ್ಣಯ ಮಾಡಲಾಗಿತ್ತು.
ಈ ಪೈಕಿ ಕಂದಾವರ ಹೊರತುಪಡಿಸಿ ಮೂರು ಗ್ರಾ.ಪಂ.ನಿಂದ ವಿವಿಧ ಇಲಾಖೆಗಳಿಗೆ ಪತ್ರ ಬರೆದು ಗ್ರಾಮಸಭೆಯ ನಿರ್ಣಯದ ಬಗ್ಗೆ ದೂರು ನೀಡಲಾಗಿತ್ತು. ದುರ್ವರ್ತನೆ ತೋರುವ ಠಾಣಾಧಿಕಾರಿಯನ್ನು ಬಜ್ಪೆಯಿಂದ ವರ್ಗಾವಣೆ ಮಾಡಬೇಕೆಂದು ಪತ್ರಗಳಲ್ಲಿ ಒತ್ತಾಯಿಸಲಾಗಿದೆ.
Mangalore Four Gram Panchayats have passed a resolution against Bajpe Inspector Sandesh PG stating to transfer him as he has been troubling and threatening the general public. The attached letter has been sent to the DGP and State Secretary of Karnataka.
07-11-25 09:59 pm
HK News Desk
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
07-11-25 11:20 pm
Mangalore Correspondent
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm