ಪದವಿ ಸೆಮಿಸ್ಟರ್ ಪರೀಕ್ಷೆ ; ಮಂಗಳೂರು ವಿವಿ ಜಾಲತಾಣದಲ್ಲಿ ಫಲಿತಾಂಶ 

24-11-21 06:02 pm       HK news Desk   ಕರಾವಳಿ

ಮಂಗಳೂರು ವಿಶ್ವವಿದ್ಯಾನಿಲಯ ವ್ಯಾಪ್ತಿಯಲ್ಲಿ ಕಳೆದ ಸೆಪ್ಟೆಂಬರ್ ಮತ್ತು ಅಕ್ಟೋಬರ್ ತಿಂಗಳಲ್ಲಿ ನಡೆಸಿರುವ ಪದವಿ ತರಗತಿಗಳ 1, 3 ಮತ್ತು 4ನೇ ಸೆಮಿಸ್ಟರ್ ಪರೀಕ್ಷೆಗಳ ಫಲಿತಾಂಶ ಪ್ರಕಟಗೊಂಡಿದೆ. 

ಮಂಗಳೂರು, ನ.24: ಮಂಗಳೂರು ವಿಶ್ವವಿದ್ಯಾನಿಲಯ ವ್ಯಾಪ್ತಿಯಲ್ಲಿ ಕಳೆದ ಸೆಪ್ಟೆಂಬರ್ ಮತ್ತು ಅಕ್ಟೋಬರ್ ತಿಂಗಳಲ್ಲಿ ನಡೆಸಿರುವ ಪದವಿ ತರಗತಿಗಳ 1, 3 ಮತ್ತು 4ನೇ ಸೆಮಿಸ್ಟರ್ ಪರೀಕ್ಷೆಗಳ ಫಲಿತಾಂಶ ಪ್ರಕಟಗೊಂಡಿದೆ. 

ಪರೀಕ್ಷೆ ಬರೆದ ವಿದ್ಯಾರ್ಥಿಗಳು ಮಂಗಳೂರು ವಿವಿಯ ಅಧಿಕೃತ ಜಾಲತಾಣದಲ್ಲಿ ಫಲಿತಾಂಶ ವೀಕ್ಷಿಸಬಹುದು. ಈ ಕುರಿತು ಮಂಗಳೂರು ವಿಶ್ವವಿದ್ಯಾಲಯದಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದ್ದು, ವಿವಿಯಿಂದ ನಡೆಸಿರುವ ಪದವಿ ಸೆಮಿಸ್ಟರ್ ಪರೀಕ್ಷೆಯ ಫಲಿತಾಂಶವನ್ನು https://mangaloreuniversity.ac.in/ ಜಾಲತಾಣದಲ್ಲಿ ಪ್ರಕಟಿಸಲಾಗಿದೆ. ವಿದ್ಯಾರ್ಥಿಗಳು ವೆಬ್ ಸೈಟ್ ನಲ್ಲಿ ತಮ್ಮ ನೋಂದಣಿ ಸಂಖ್ಯೆ ನಮೂದಿಸಿ, ಫಲಿತಾಂಶ ವೀಕ್ಷಿಸಬಹುದು ಎಂದು ತಿಳಿಸಿದೆ.

ವಿದ್ಯಾರ್ಥಿಗಳು ಮಂಗಳೂರು ವಿವಿಯ ಅಧಿಕೃತ ಜಾಲತಾಣ https://mangaloreuniversity.ac.in/ ಕ್ಕೆ ಫಲಿತಾಂಶ ವೀಕ್ಷಿಸಲು ತೆರಳಬೇಕು. ಜಾಲತಾಣದಲ್ಲಿ ಫಲಿತಾಂಶ ವೀಕ್ಷಣೆಯ ಲಿಂಕ್ ಒತ್ತಿದ ಬಳಿಕ ತಮ್ಮ ನೋಂದಣಿ ಸಂಖ್ಯೆ ಹಾಗೂ ಸೆಕ್ಯುರಿಟಿ ಪಿನ್ ನಮೂದಿಸಬೇಕು. ಆ ನಂತರ ಫಲಿತಾಂಶವನ್ನು ಡೌನ್ ಲೋಡ್ ಮಾಡಿಕೊಳ್ಳುವುದಕ್ಕೂ ಅವಕಾಶ ಇದೆ.

Semister exams results out by Mangalore University, result can be viewed online by loging into offical website of Mangalore University