ಬ್ರೇಕಿಂಗ್ ನ್ಯೂಸ್
28-11-21 04:34 pm Mangaluru Correspondent ಕರಾವಳಿ
ಮಂಗಳೂರು: 2014ರಲ್ಲಿ ನಡೆದ ಅಪ್ರಾಪ್ತ ದಲಿತ ಬಾಲಕಿಯ ಕಿಡ್ನಾಪ್ ಮತ್ತು ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗೆ ಏಳು ವರ್ಷಗಳ ಕಠಿಣ ಸಜೆ ಮತ್ತು 15 ಸಾವಿರ ರೂ. ದಂಡ ವಿಧಿಸಿ ಮಂಗಳೂರಿನ ಒಂದನೇ ತ್ವರಿತ ಗತಿ ಸೆಷನ್ಸ್ ನ್ಯಾಯಾಲಯ ತೀರ್ಪು ಪ್ರಕಟಿಸಿದೆ.
ಅಪ್ರಾಪ್ತ ಬಾಲಕಿಯ ಅಪಹರಣ ಆರೋಪಕ್ಕೆ 3 ವರ್ಷ ಕಠಿಣ ಶಿಕ್ಷೆ ಮತ್ತು 5000 ರೂ. ದಂಡ ಹಾಗೂ ದಂಡ ತೆರಲು ತಪ್ಪಿದರೆ 15 ದಿನಗಳ ಕಠಿಣ ಶಿಕ್ಷೆ, ಅತ್ಯಾಚಾರ ಆರೋಪಕ್ಕೆ 7 ವರ್ಷ ಕಠಿಣ ಸಜೆ ಮತ್ತು 10 ಸಾವಿರ ರೂ. ದಂಡ ಹಾಗೂ ದಂಡ ಪಾವತಿಸಲು ತಪ್ಪಿದರೆ ಎರಡು ತಿಂಗಳ ಕಠಿಣ ಸಜೆಯನ್ನು ಅನುಭವಿಸಬೇಕು ಎಂದು ತೀರ್ಪಿನಲ್ಲಿ ತಿಳಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕೇಪು ಗ್ರಾಮದ ನೀರ್ಕಜೆಯ ನಿತಿನ್ (27) ಎಂಬಾತ 2014 ರಲ್ಲಿ ಬಂಟ್ವಾಳ ತಾಲೂಕಿನ ವಿಟ್ಲ ಸಮೀಪದ 17 ವರ್ಷದ ದಲಿತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದನು. ಆರೋಪಿ ನಿತಿನ್, ಖಾಸಗಿ ಬಸ್ಸಿನ ಕಂಡಕ್ಟರ್ ಆಗಿದ್ದ. ಈತನ ಬಸ್‌ನಲ್ಲಿ ಬಾಲಕಿ ಕಾಲೇಜಿಗೆ ಹೋಗಿ ಬರುತ್ತಿದ್ದಳು. ಆರೋಪಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯನ್ನು ಪರಿಚಯ ಮಾಡಿಕೊಂಡಿದ್ದನು.
2014 ಜುಲೈ 24ರಂದು ಪುತ್ತೂರಿಗೆ ಬರುವಂತೆ ಹೇಳಿ ನಿನ್ನನ್ನೇ ಮದುವೆಯಾಗುವುದಾಗಿ ನಂಬಿಸಿ ರಾತ್ರಿ ವೇಳೆ ಸ್ಲೀಪರ್ ಬಸ್‌ನಲ್ಲಿ ಬೆಂಗಳೂರಿಗೆ ಕರೆದೊಯ್ದಿದ್ದ. ಬಸ್‌ನಲ್ಲಿ ಪ್ರಯಾಣಿಸುವ ವೇಳೆ ನಿತಿನ್ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ. ಬೆಂಗಳೂರಿಗೆ ತೆರಳಿದ ಬಳಿಕ ಅಲ್ಲಿ ಎರಡು ದಿನ ಸುತ್ತಾಡಿಸಿದ್ದ.
ಈ ನಡುವೆ ಕಾಲೇಜಿಗೆಂದು ಹೋಗಿದ್ದ ಮಗಳು ವಾಪಸ್ ಬರದಿರುವ ಬಗ್ಗೆ ಬಾಲಕಿಯ ಪೋಷಕರು ವಿಟ್ಲ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದರು. ತನಿಖೆ ನಡೆಸಿದ ಪೊಲೀಸರಿಗೆ ಬಾಲಕಿಯನ್ನು ನಿತಿನ್ ಬೆಂಗಳೂರಿಗೆ ಕರೆದುಕೊಂಡು ಹೋದ ಸುಳಿವು ಲಭಿಸಿದ ಹಿನ್ನೆಲೆಯಲ್ಲಿ ಪೊಲೀಸರು ಬೆಂಗಳೂರಿಗೆ ತೆರಳಿ ಇವರನ್ನು ಪತ್ತೆ ಹಚ್ಚಿ ಊರಿಗೆ ಕರೆ ತಂದಿದ್ದರು. ಬಾಲಕಿಯನ್ನು ಬೆಂಗಳೂರಿಗೆ ಕರೆದೊಯ್ದು, ಆಕೆಯ ಮೇಲೆ ಅತ್ಯಾಚಾರ ಎಸಗಿದ ನಿತಿನ್ ವಿರುದ್ಧ ಪ್ರಕರಣ ದಾಖಲಿಸಿದ್ದ ವಿಟ್ಲ ಪೊಲೀಸರು ಆರೋಪಿಯನ್ನು ಬಂಧಿಸಿದ್ದರು. ಪ್ರಕರಣದ ತನಿಖೆ ನಡೆಸಿದ ಬಂಟ್ವಾಳ ಡಿವೈಎಸ್ಪಿ ರಾಹುಲ್ ಕುಮಾರ್, ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ಒಂದನೇ ತ್ವರಿತ ಗತಿ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶೆ ಸಾವಿತ್ರಿ ವಿ. ಭಟ್ ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ಶಿಕ್ಷೆ ಪ್ರಮಾಣ ಪ್ರಕಟಿಸಿದರು. ಪ್ರಕರಣದಲ್ಲಿ ಬಾಲಕಿ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಸಿ. ವೆಂಕಟರಮಣ ಸ್ವಾಮಿ ವಾದಿಸಿದ್ದರು.
Sullia Bus conductor rapes minor girl court sentences seven year jail term
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
09-09-25 11:09 pm
HK News Desk
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
09-09-25 10:47 pm
Mangalore Correspondent
Mangalore Accident, Kulur, NHAI: ಕುಳೂರು ರಸ್ತೆ...
09-09-25 08:01 pm
YouTuber Munaf, SIT, Dharmasthala Case: ಎಸ್ಐಟ...
09-09-25 05:59 pm
Mangalore, NHAI, Padmaraj: ಇನ್ನೆಷ್ಟು ಜೀವ ಬಲಿಯ...
09-09-25 05:14 pm
MLA Vedavyas Kamath, Mangalore, Yakshangana:...
09-09-25 04:47 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm