ಬ್ರೇಕಿಂಗ್ ನ್ಯೂಸ್
13-09-20 06:52 pm Mangalore Reporter ಕರಾವಳಿ
ಮಂಗಳೂರು, ಸೆಪ್ಟೆಂಬರ್ 13: ಮುಸ್ಲಿಂ ಸಮುದಾಯದ ನ್ಯಾಯೋಚಿತ ಬೇಡಿಕೆ ಮತ್ತು ಅಭಿವೃದ್ಧಿಗೆ ಪೂರಕವಾಗಿ ಕೆಲಸ ಮಾಡಲಿದ್ದೇನೆ. ಸಮುದಾಯದ ಅಭಿವೃದ್ಧಿಗೆ ನಮ್ಮ ಪಕ್ಷವೂ ಬದ್ಧವಾಗಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಮಿಟಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಹೇಳಿದರು.
ಮಂಗಳೂರಿನ ಉಳ್ಳಾಲ ದರ್ಗಾದಲ್ಲಿ ಅವರು ಝಿಯಾರತ್ ನಡೆಸಿದ ಬಳಿಕ ದರ್ಗಾ ಆಡಳಿತ ಸಮಿತಿಯ ಕಚೇರಿಯಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಾರ್ಯಾಧ್ಯಕ್ಷರಾದ ಬಳಿಕ ಮೊದಲ ಬಾರಿಗೆ ಉಳ್ಳಾಲ ದರ್ಗಾ ಭೇಟಿ ನೀಡಿದ ಸಲೀಂ ಅಹ್ಮದ್ ಅವರನ್ನು ದರ್ಗಾ ಸಮಿತಿಯ ವತಿಯಿಂದ ಉಳ್ಳಾಲ ಅಧ್ಯಕ್ಷ ಹಾಜಿ ಅಬ್ದುಲ್ ರಶೀದ್ ಸನ್ಮಾನಿಸಿ, ಸಮುದಾಯದ ಹಿತಕ್ಕಾಗಿ ಶ್ರಮಿಸುವಂತೆ ವಿನಂತಿಸಿದರು.
ಸಲೀಂ ಅಹ್ಮದ್ ಜೊತೆಯಲ್ಲಿ ಆಗಮಿಸಿದ್ದ ವಿಧಾನ ಪರಿಷತ್ತಿನ ಮುಖ್ಯ ಸಚೇತಕ ನಾರಾಯಣ ಸ್ವಾಮಿಯವರನ್ನೂ ಉಳ್ಳಾಲ ದರ್ಗಾ ಅಧ್ಯಕ್ಷ ಹಾಜಿ ಅಬ್ದುಲ್ ರಶೀದ್ ಈ ಸಂದರ್ಭದಲ್ಲಿ ಸನ್ಮಾನಿಸಿದರು. ಮಾಜಿ ಸಚಿವ, ಶಾಸಕ ಯು.ಟಿ.ಖಾದರ್, ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್, ಕೆಪಿಸಿಸಿ ಕಾರ್ಯದರ್ಶಿ ಟಿ.ಎಂ.ಸಹೀದ್, ಕಾಂಗ್ರೆಸ್ ನಾಯಕ ಬಲರಾಜ್ ಜೊತೆಗಿದ್ದರು.
ಜಿಲ್ಲಾ ಕಾಂಗ್ರೆಸ್ ವಕ್ತಾರ ಹಾಗೂ ದರ್ಗಾ ಸಮಿತಿಯ ಫಾರೂಕ್ ಉಳ್ಳಾಲ್ ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿ, ಸಲೀಂ ಅಹ್ಮದ್ ಅವರು ಕಾಂಗ್ರೆಸ್ ಪಕ್ಷದ ಉನ್ನತ ಹುದ್ದೆ ಕಾರ್ಯಾಧ್ಯಕ್ಷರಾಗಿ ನೇಮಕವಾಗುವ ಮೂಲಕ ಮುಸ್ಲಿಂ ಸಮುದಾಯದ ಬಹುದಿನದ ಬೇಡಿಕೆ ಈಡೇರಿಕೆದಂತಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಉಳ್ಳಾಲ ದರ್ಗಾ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ತ್ವಾಹ ಹಾಜಿ, ಚಾರಿಟೇಬಲ್ ಟ್ರಸ್ಟ್ ಉಪಾಧ್ಯಕ್ಷರಾದ ಮುಸ್ತಫ ಅಬ್ದುಲ್ಲಾ, ಹಾಜಿ, ಇಬ್ರಾಹಿಂ ಕಕ್ಕೆತೋಟ, ಕಾರ್ಯದರ್ಶಿ ಹಾಜಿ ಎ.ಕೆ.ಮೊಹಿಯ್ಯುದ್ದೀನ್, ಅರಬಿಕ್ ಟ್ರಸ್ಟ್ ಕಾರ್ಯದರ್ಶಿ ಆಸಿಫ್ ಅಬ್ದುಲ್ಲಾ, ಕಾಂಗ್ರೆಸ್ ಮುಖಂಡರುಗಳಾದ ಎನ್.ಎಸ್.ಕರೀಂ, ಫಾರೂಕ್ ಫರಂಗಿಪೇಟೆ, ದರ್ಗಾ ಸಮಿತಿ ಸದಸ್ಯರಾದ ಹಸನಬ್ಬ ಕಡಪರ, ಹಮ್ಮಬ್ಬ ಕೋಟೇಪುರ, ಕಾಸಿಂ ಕೋಡಿ, ನಝೀರ್ ಸುಂದರ ಬಾಗ್, ಇಬ್ರಾಹಿಂ ಹಾಜಿ ಉಳ್ಳಾಲ ಬೈಲ್, ಅರೇಬಿಕ್ ಟ್ರಸ್ಟ್ ಸದಸ್ಯ ಯೂಸುಫ್ ಉಳ್ಳಾಲ್, ಹನೀಫ್ ಕೋಡಿ ಉಪಸ್ಥಿತರಿದ್ದರು.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am