ಬ್ರೇಕಿಂಗ್ ನ್ಯೂಸ್
03-12-21 08:35 pm HK Desk news ಕರಾವಳಿ
ಮಂಗಳೂರು, ಡಿ.3: ಗುರುವಾರ ರಾತ್ರಿ ಗುಜ್ಜರಕೆರೆಯಲ್ಲಿ ಯೇನಪೋಯ ಮೆಡಿಕಲ್ ಕಾಲೇಜಿನ ಹಾಸ್ಟೆಲ್ ವಿದ್ಯಾರ್ಥಿಗಳು ಪರಸ್ಪರ ಗುಂಪು ಕಟ್ಟಿಕೊಂಡು ಹೊಡೆದಾಡಿದ ಘಟನೆ ಹಿನ್ನೆಲೆಯಲ್ಲಿ ಇಂದು ಸ್ಥಳಕ್ಕೆ ಭೇಟಿದ ಪೊಲೀಸ್ ಕಮಿಷನರ್ ಶಶಿಕುಮಾರ್ ಎದುರಲ್ಲಿ ಸ್ಥಳೀಯರು ಪ್ರತಿಭಟನೆ ನಡೆಸಿದ್ದಾರೆ. ಈ ಪ್ರದೇಶದಿಂದ ಕಾಲೇಜಿನ ಹಾಸ್ಟೆಲನ್ನೇ ಸ್ಥಳಾಂತರ ಮಾಡಬೇಕೆಂದು ಆಗ್ರಹ ಮಾಡಿದ್ದಾರೆ.
ಪ್ರತಿ ದಿನವೂ ಈ ಭಾಗದಲ್ಲಿ ವಿದ್ಯಾರ್ಥಿಗಳು ಕೀಟಲೆ ಮಾಡುತ್ತಾರೆ. ತಡರಾತ್ರಿ ವರೆಗೂ ಬೈಕ್ ರೈಸ್ ಮಾಡಿ ಕಿರುಕುಳ ಕೊಡುತ್ತಾರೆ. ಹಾರ್ನ್ ಮಾಡುವುದು, ಅರೆಬರೆ ಬಟ್ಟೆ ಧರಿಸಿಕೊಂಡು ಅಡ್ಡಾಡುವುದು, ಕಿರುಚಾಡುವುದು ಹೀಗೆ ಸ್ಥಳೀಯರಿಗೆ ನೆಮ್ಮದಿ ಇಲ್ಲದಾಗಿದೆ ಎಂದು ಸ್ಥಳೀಯರು ದೂರಿದ್ದಾರೆ.
ಇತ್ತೀಚೆಗೆ ದೀಪಾವಳಿ ಸಂದರ್ಭದಲ್ಲಿ ಪಟಾಕಿ ಉರಿಸಿ, ಬೇರೆ ಮನೆಗಳಿಗೆ ಎಸೆದು ಕೀಟಲೆ ಕೊಟ್ಟಿದ್ದಾರೆ. ಹಾಸ್ಟೆಲ್ ಮೇಲ್ಗಡೆ ನಿಂತು ಪಟಾಕಿಯನ್ನು ಹತ್ತಿರದ ಮನೆಗಳತ್ತ ತೂರಿದ್ದರು ಎಂದು ಅಲ್ಲಿನ ನಿವಾಸಿಯೊಬ್ಬರು ಕಮಿಷನರ್ ಬಳಿ ಅಳಲು ತೋಡಿಕೊಂಡರು. ಯೇನಪೋಯ ಕಾಲೇಜಿನ ಆಡಳಿತ, ಹಾಸ್ಟೆಲನ್ನು ಬೇರೆ ಕಡೆಗೆ ಶಿಫ್ಟ್ ಮಾಡಬೇಕೆಂದು ಸ್ಥಳೀಯರು ಒತ್ತಾಯಿಸಿದರು.


ಪೊಲೀಸ್ ಕಮಿಷನರ್ ಶಶಿಕುಮಾರ್ ಮಾತನಾಡಿ, ಈಗಾಗ್ಲೇ ಪಾಂಡೇಶ್ವರ ಠಾಣೆಯಲ್ಲಿ ಎರಡು ಪ್ರಕರಣ ದಾಖಲಿಸಿದ್ದು, ಆರು ಮಂದಿ ವಿದ್ಯಾರ್ಥಿಗಳನ್ನು ಬಂಧಿಸಿದ್ದೇವೆ. ಸ್ಥಳೀಯರು ಈ ಬಗ್ಗೆ ದೂರು ಕೊಡುವುದಿದ್ದರೆ ಪ್ರಕರಣ ದಾಖಲಿಸಲಾಗುವುದು ಎಂದು ಹೇಳಿದ್ದಾರೆ.
ಇದೇ ವೇಳೆ, ಕಾಲೇಜಿನ ಪ್ರಿನ್ಸಿಪಾಲ್ ಮಾತನಾಡಿ, ನಾವು ರ್ಯಾಗಿಂಗ್ ಕಮಿಟಿ ಮಾಡಿದ್ದೇವೆ. ಆಗಿಂದಾಗ್ಗೆ ಕಾಲೇಜಿನ ಆಡಳಿತಕ್ಕೆ ರಿಪೋರ್ಟ್ ಕೊಡುತ್ತೇವೆ. ಆದರ್ಶ್ ಎಂಬ ವಿದ್ಯಾರ್ಥಿಯನ್ನು ಮೂರು ಬಾರಿ ಅಮಾನತು ಮಾಡಿದ್ದೇವೆ. ಹಾಗಿದ್ದರೂ ಕಲಿಯುವುದಕ್ಕೆ ಅವಕಾಶ ಕೊಟ್ಟಿದ್ದೇವೆ. ಈ ಬಗ್ಗೆ ಸ್ವಲ್ಪ ಸಮಯ ಕೊಡಿ, ಸಮಸ್ಯೆ ಇತ್ಯರ್ಥ ಮಾಡುತ್ತೇವೆ ಎಂದು ಸ್ಥಳೀಯರಲ್ಲಿ ಕೇಳಿಕೊಂಡರು. ಶಾಸಕ ವೇದವ್ಯಾಸ ಕಾಮತ್, ವಿಎಚ್ ಪಿ ಮುಖಂಡ ಶರಣ್ ಪಂಪ್ವೆಲ್ ಸ್ಥಳಕ್ಕೆ ಬಂದಿದ್ದರು.
ಗುರುವಾರ ರಾತ್ರಿ ಗುಜ್ಜರಕೆರೆಯಲ್ಲಿ ಎರಡು ತಂಡಗಳ ನಡುವೆ ಬೀದಿಕಾಳಗ ನಡೆದಿದ್ದು, ಬಳಿಕ ವಿದ್ಯಾರ್ಥಿಗಳು ಪೊಲೀಸರ ಮೇಲೂ ಹಲ್ಲೆ ನಡೆಸಿದ್ದರು. ಘಟನೆಯಲ್ಲಿ ಹಲವರು ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.
Locals in Gujjarakere protested on Friday December 3 and demanded the students to vacate the college hostel after the two groups of students engaged in a clash on the night of December 2. Police commissioner N Shashi Kumar visited the spot and interacted with the locals
18-12-25 12:37 pm
HK News Desk
ಸಿಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ ಏರುಪೇರು ; ಸದನಕ್ಕ...
17-12-25 10:30 pm
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
18-12-25 10:52 am
Mangalore Correspondent
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm