ಬ್ರೇಕಿಂಗ್ ನ್ಯೂಸ್
05-12-21 11:15 pm HK Desk news ಕರಾವಳಿ
ಮಂಗಳೂರು, ಡಿ.5: ಕೇರಳದ ಕಣ್ಣೂರು ವಿಮಾನ ನಿಲ್ದಾಣದಿಂದ ದುಬೈನ ಶಾರ್ಜಾಕ್ಕೆ ಹೊರಟಿದ್ದ ಕುಟುಂಬದ ಮಹಿಳೆಗೆ ಹೃದಯಾಘಾತ ಆಗಿದ್ದು ಏರ್ ಇಂಡಿಯಾ ವಿಮಾನವನ್ನು ತುರ್ತಾಗಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಮಾಡಲಾಗಿದೆ.
ಕಣ್ಣೂರಿನಿಂದ ಶಾರ್ಜಾಕ್ಕೆ ಹೊರಟಿದ್ದ ವಿಮಾನದಲ್ಲಿ ಮಹಿಳೆಗೆ ತೊಂದರೆ ಉಂಟಾಗಿದ್ದು ಎದೆ ನೋವು ಮತ್ತು ಉಸಿರಾಟದ ಸಮಸ್ಯೆ ಎದುರಿಸಿದ್ದರು. ಮಹಿಳೆ ಮೂರು ಮಕ್ಕಳ ತಾಯಿಯಾಗಿದ್ದು ಪತಿಯೊಂದಿಗೆ ಶಾರ್ಜಾಕ್ಕೆ ತೆರಳುತ್ತಿದ್ದಾಗ ಡಿ.3 ರಂದು ಘಟನೆ ನಡೆದಿದೆ. ಈ ಬಗ್ಗೆ ಏರ್ಪೋರ್ಟ್ ಆಪರೇಶನ್ ಕಂಟ್ರೋಲ್ ಸೆಂಟ್ರಲ್ ಗೆ ಬೆಳಗ್ಗೆ 9.20 ಕ್ಕೆ ಸಂದೇಶ ಬಂದಿದ್ದು ಮಂಗಳೂರು ವಿಮಾನ ನಿಲ್ದಾಣ ಅಧಿಕಾರಿಗಳು ಅಲರ್ಟ್ ಆಗಿದ್ದಾರೆ.
ವಿಮಾನವನ್ನು ತುರ್ತಾಗಿ ನಿಲ್ದಾಣದಲ್ಲಿ ಇಳಿಸಿ, ಮೂರು ಮಕ್ಕಳು ಮತ್ತು ಮಹಿಳೆ ಹಾಗೂ ಪತಿಯನ್ನು ಅಧಿಕಾರಿಗಳು ನೇರವಾಗಿ ಎಜೆ ಆಸ್ಪತ್ರೆಗೆ ಕರೆತಂದಿದ್ದಾರೆ. ಬೆಳಗ್ಗೆ ಹತ್ತು ಗಂಟೆಗೆ ವಿಮಾನ ಲ್ಯಾಂಡ್ ಆಗಿದ್ದು 17 ನಿಮಿಷದಲ್ಲಿ ಎಜೆ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಏರ್ಪೋರ್ಟ್ ಅಧಿಕಾರಿಗಳು, ಆರೋಗ್ಯ ಸಿಬಂದಿ ಕೂಡ ಮಹಿಳೆ ಜೊತೆಗೆ ಬಂದಿದ್ದರು.
ವೈದ್ಯರು ಬಳಿಕ ಚಿಕಿತ್ಸೆ ನೀಡಿದ್ದು ಮಹಿಳೆಯ ಸ್ಥಿತಿ ಸ್ಥಿರವಾಗಿದ್ದು ಯಾವುದೇ ತೊಂದರೆ ಇಲ್ಲ ಎಂದು ಹೇಳಿದ್ದಾರೆ. ಅದರಂತೆ, ಮಹಿಳೆ ಮತ್ತು ಕುಟುಂಬವನ್ನು ಅದೇ ದಿನ ರಾತ್ರಿ 11 ಗಂಟೆಗೆ ಶಾರ್ಜಾಕ್ಕೆ ಕರೆದೊಯ್ಯಲು ಏರ್ಪೋರ್ಟ್ ಅಧಿಕಾರಿಗಳು ವ್ಯವಸ್ಥೆ ಮಾಡಿದ್ದಾರೆ.
Woman gets heart attack in Dubai Sharjah flight emergency landing made in Mangalore. The flight was from Kannur and made emergency landing in Mangalore International Airport.
18-12-25 12:37 pm
HK News Desk
ಸಿಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ ಏರುಪೇರು ; ಸದನಕ್ಕ...
17-12-25 10:30 pm
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
18-12-25 10:52 am
Mangalore Correspondent
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm