ಆಟೋ ಹಿಂದಿಕ್ಕುವ ಧಾವಂತ ;  ಡಿವೈಡರ್ ಡಿಕ್ಕಿಯಾಗಿ ಸ್ಥಳದಲ್ಲೇ ಬೈಕ್ ಸವಾರ ಸಾವು  

08-12-21 11:07 am       HK Desk news   ಕರಾವಳಿ

ಆಟೋ ರಿಕ್ಷಾವನ್ನ ಓವರ್ ಟೇಕ್ ಮಾಡುವ ಭರದಲ್ಲಿ ಬೈಕ್ ಸವಾರ ನಿಯಂತ್ರಣ ತಪ್ಪಿ ರಸ್ತೆ ಮಧ್ಯದ ಡಿವೈಡರ್ ನಲ್ಲಿರುವ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದ್ದು ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಉಳ್ಳಾಲ ಮಾಸ್ತಿಕಟ್ಟೆ ಬಳಿ ನಡೆದಿದೆ. 

Photo credits : Headline Karnataka

ಉಳ್ಳಾಲ, ಡಿ.8 : ಆಟೋ ರಿಕ್ಷಾವನ್ನ ಓವರ್ ಟೇಕ್ ಮಾಡುವ ಭರದಲ್ಲಿ ಬೈಕ್ ಸವಾರ ನಿಯಂತ್ರಣ ತಪ್ಪಿ ರಸ್ತೆ ಮಧ್ಯದ ಡಿವೈಡರ್ ನಲ್ಲಿರುವ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದ್ದು ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಉಳ್ಳಾಲ ಮಾಸ್ತಿಕಟ್ಟೆ ಬಳಿ ನಡೆದಿದೆ. 

ಮೃತ ಸವಾರನನ್ನು ಮದನಿ ನಗರ ನಿವಾಸಿ ಮಹಮ್ಮದ್ ಕೈಫ್ (23) ಎಂದು ಗುರುತಿಸಲಾಗಿದೆ. ಬೆಳಗ್ಗೆ 8.30 ರ ಸುಮಾರಿಗೆ ಧಾವಂತದಲ್ಲಿ ಬೈಕ್ ಚಲಾಯಿಸಿಕೊಂಡು ಬಂದಿದ್ದ ಕೈಫ್ ಆಟೋ ರಿಕ್ಷಾವನ್ನು ಓವರ್ ಟೇಕ್ ಮಾಡಿ ಹಿಂದಿಕ್ಕುವ ಭರದಲ್ಲಿ ನಿಯಂತ್ರಣ ತಪ್ಪಿದ್ದು ರಸ್ತೆ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದ್ದಾನೆ.

ಡಿಕ್ಕಿಯ ರಭಸಕ್ಕೆ ಬೈಕ್ ಸವಾರನ ತಲೆಗೆ ಗಂಭೀರ ಏಟು ತಗುಲಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಮಂಗಳೂರು ದಕ್ಷಿಣ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

23 year old youth dies after bike accident in Ullal in Mangalore. The deceased has been identified as Mohammad Kaif. The incident took place after he lost control and hit and electric police in the middle of the road.