ಮಂಗಳೂರು ; ಮತ್ತೊಂದು ನರ್ಸಿಂಗ್ ಕಾಲೇಜಿನ ಹತ್ತು ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು

10-12-21 10:05 pm       HK Desk news   ಕರಾವಳಿ

ನಗರದ ನರ್ಸಿಂಗ್ ಕಾಲೇಜೊಂದರಲ್ಲಿ ಒಂದೇ ದಿನ ಹತ್ತು ಮಂದಿ ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ.

ಮಂಗಳೂರು, ಡಿ.10 : ನಗರದ ನರ್ಸಿಂಗ್ ಕಾಲೇಜೊಂದರಲ್ಲಿ ಒಂದೇ ದಿನ ಹತ್ತು ಮಂದಿ ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ವಳಚ್ಚಿಲ್ ನಲ್ಲಿರುವ ಖಾಸಗಿ ನರ್ಸಿಂಗ್ ಕಾಲೇಜಿನಲ್ಲಿ ಕಲಿಯುತ್ತಿರುವ ಕೇರಳ ಮೂಲದ 10 ವಿದ್ಯಾರ್ಥಿಗಳು ಕೊರೊನಾ ಪಾಸಿಟಿವ್ ಆಗಿದ್ದಾರೆ.

ಓಮಿಕ್ರಾನ್ ಭೀತಿ ಹಿನ್ನೆಲೆಯಲ್ಲಿ ಕೇರಳದ ವಿದ್ಯಾರ್ಥಿಗಳನ್ನು ವಿಶೇಷವಾಗಿ ತಪಾಸಣೆ ನಡೆಸಲಾಗುತ್ತಿದೆ. ಈ ವೇಳೆ, ಹತ್ತು ಮಂದಿ ವಿದ್ಯಾರ್ಥಿಗಳಲ್ಲಿ ಪಾಸಿಟಿವ್ ಕಂಡುಬಂದಿದೆ ಎನ್ನುವ ಮಾಹಿತಿ ಆರೋಗ್ಯ ಇಲಾಖೆಯಿಂದ ತಿಳಿದುಬಂದಿದೆ. ಇದಲ್ಲದೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಒಂದೇ ದಿನ 26 ಮಂದಿ ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ. ಸದ್ಯಕ್ಕೆ ಜಿಲ್ಲೆಯಲ್ಲಿ 141 ಮಂದಿ ಸಕ್ರಿಯ ಸೋಂಕಿತರಿದ್ದಾರೆ.

ಎರಡಕ್ಕಿಂತ ಹೆಚ್ಚು ಮಂದಿಗೆ ಒಂದೇ ಕಡೆ ಸೋಂಕು ಕಂಡುಬಂದಲ್ಲಿ ಅಂತಹ ಪ್ರದೇಶವನ್ನು ಕಂಟೈನ್ಮೆಂಟ್ ಝೋನ್ ಎಂದು ಪರಿಗಣಿಸುವಂತೆ ಸರಕಾರದ ಆದೇಶ ಇದೆ. ಹೀಗಾಗಿ ನರ್ಸಿಂಗ್ ವಿದ್ಯಾರ್ಥಿಗಳಿದ್ದ ಹಾಸ್ಟೆಲನ್ನು ಕಂಟೈನ್ಮೆಂಟ್ ಮಾಡಲಾಗಿದೆ. ಇತ್ತೀಚೆಗೆ ನರ್ಸಿಂಗ್ ಕಾಲೇಜಿನಲ್ಲಿ ಕಲಿಯುವ ಕೇರಳದ ವಿದ್ಯಾರ್ಥಿಗಳು ಇದೇ ರೀತಿ ಕೊರೊನಾ ಪಾಸಿಟಿವ್ ಆಗಿದ್ದರು.

Mangalore Another 10 nursing college students tested covid positive at a private college in Valachil. Recently nine students were tested positive at a college in Kavoor.