ಶಾಸಕ ಕಮರುದ್ದೀನ್ ಬಂಧನ ಆಗ್ರಹಿಸಿ ಬಿಜೆಪಿ ಮುತ್ತಿಗೆ ; ಜಲಫಿರಂಗಿ ಪ್ರಯೋಗಕ್ಕೆ ಹಿಮ್ಮೆಟ್ಟದ ಕಾರ್ಯಕರ್ತರು ! 

14-09-20 06:08 pm       Mangalore Reporter   ಕರಾವಳಿ

ಮಂಜೇಶ್ವರ ಶಾಸಕ ಎಂ.ಸಿ ಖಮರುದ್ದೀನ್ ರಾಜೀನಾಮೆ ನೀಡಬೇಕು, ಕೂಡಲೇ ಶಾಸಕರನ್ನು ಬಂಧಿಸಬೇಕು ಎಂದು ಒತ್ತಾಯಿಸಿ ಬಿಜೆಪಿ ಕಾರ್ಯಕರ್ತರು ಕಾಸರಗೋಡು ತಾಲೂಕು ಕಚೇರಿಗೆ ಮುತ್ತಿಗೆ ಹಾಕಿದ್ದಾರೆ.

ಕಾಸರಗೋಡು, ಸೆ.14: ವಂಚನೆ ಪ್ರಕರಣ ಎದುರಿಸುತ್ತಿರುವ ಮಂಜೇಶ್ವರ ಶಾಸಕ ಎಂ.ಸಿ ಖಮರುದ್ದೀನ್ ರಾಜೀನಾಮೆ ನೀಡಬೇಕು, ಕೂಡಲೇ ಶಾಸಕರನ್ನು ಬಂಧಿಸಬೇಕು ಎಂದು ಒತ್ತಾಯಿಸಿ ಬಿಜೆಪಿ ಕಾರ್ಯಕರ್ತರು ಕಾಸರಗೋಡು ತಾಲೂಕು ಕಚೇರಿಗೆ ಮುತ್ತಿಗೆ ಹಾಕಿದ್ದಾರೆ. ಪೊಲೀಸ್ ಬ್ಯಾರಿಕೇಡ್ ಬೇಧಿಸಿ ಮುನ್ನುಗ್ಗಲೆತ್ನಿಸಿದ ಕಾರ್ಯಕರ್ತರ ಮೇಲೆ ಪೊಲೀಸರು ಜಲಫಿರಂಗಿ ಪ್ರಯೋಗಿಸಿದರು. 

ಮೆರವಣಿಗೆ ಮೂಲಕ ಆಗಮಿಸಿದ ಕಾರ್ಯಕರ್ತರು ಬ್ಯಾರಿಕೇಡ್ ಗಳನ್ನು ತೆಗೆದು ಒಳನುಗ್ಗಲು ಯತ್ನಿಸಿದ್ದಾರೆ. ಈ ವೇಳೆ, ಪೊಲೀಸರು ಬ್ಯಾರಿಕೇಡ್ ಹಾಕಿ ಭದ್ರತೆ ನಡೆಸಿದ್ದು ಮೂರು ಬಾರಿ ಜಲಫಿರಂಗಿ ಪ್ರಯೋಗ ಮಾಡಿದ್ದಾರೆ. 

ಪ್ರತಿಭಟನೆ ನೇತೃತ್ವ ವಹಿಸಿದ್ದ ಕಾಸರಗೋಡು ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಶ್ರೀಕಾಂತ್ ಜಲಫಿರಂಗಿ ಎದುರಾಗಿ ನಿಂತು ಕಾರ್ಯಕರ್ತರಿಗೆ ಬೆನ್ನೆಲುಬಾಗಿ ನಿಂತರು. ಉಪಾಧ್ಯಕ್ಷ ಸದಾನಂದ ರೆ, ಜಿಲ್ಲಾ ಕಾರ್ಯದರ್ಶಿ ಎನ್.ಸತೀಶ್, ಸವಿತಾ ಟೀಚರ್, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಎಂ. ಜನನಿ, ಯುವ ಮೋರ್ಚಾ ಜಿಲ್ಲಾಧ್ಯಕ್ಷ ಧನಂಜಯ ಮಧೂರು, ಪಿ.ಆರ್ ಸುನಿಲ್, ಹರೀಶ್ ನಾರಂಪಾಡಿ, ಸುಕುಮಾರ ಕುದ್ರೆಪ್ಪಾಡಿ ಮೊದಲಾದವರು ಪಾಲ್ಗೊಂಡಿದ್ದರು. 
ಜಲಫಿರಂಗಿ ಮೂಲಕ ಕಾರ್ಯಕರ್ತರನ್ನು ಹಿಮ್ಮೆಟ್ಟಿಸಲು ಪೊಲೀಸರು ಯತ್ನಿಸಿದರೂ ಕಾರ್ಯಕರ್ತರು ಕದಲಲಿಲ್ಲ. ಬಳಿಕ ಕಾರ್ಯಕರ್ತರನ್ನು ಬಂಧಿಸಿದರು.

Join our WhatsApp group for latest news updates