ಬ್ರೇಕಿಂಗ್ ನ್ಯೂಸ್
16-12-21 08:17 pm HK Desk news ಕರಾವಳಿ
ಮಂಗಳೂರು, ಡಿ.16 : ಪಿಎಫ್ಐ ಕಾರ್ಯಕರ್ತರ ಪ್ರತಿಭಟನೆಗೆ ಸಂಬಂಧಿಸಿ ಉಪ್ಪಿನಂಗಡಿ ಠಾಣೆ ಪೊಲೀಸರು ಕಟ್ಟುಕತೆಗಳನ್ನು ಸೃಷ್ಟಿಸಿ ಹರಿಯಬಿಡುತ್ತಿದ್ದು, ತಮ್ಮ ಲಾಠಿಚಾರ್ಜ್ ಪ್ರಮಾದವನ್ನು ಮುಚ್ಚಿ ಹಾಕುವ ಪಿತೂರಿಯಾಗಿದೆ ಎಂದು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ರಾಜ್ಯ ಕಾರ್ಯದರ್ಶಿ ಎ.ಕೆ.ಅಶ್ರಫ್ ದೂರಿದ್ದಾರೆ.
ಈ ಬಗ್ಗೆ ಸುದ್ದಿಗೋಷ್ಟಿ ನಡೆಸಿದ ಅವರು, ಉಪ್ಪಿನಂಗಡಿ ಪೊಲೀಸ್ ಠಾಣೆ ಮುಂಭಾಗದಲ್ಲಿ ಡಿ.14ರಂದು ನಡೆದ ಪ್ರತಿಭಟನೆಯ ವೇಳೆ ಪೊಲೀಸರ ಮೇಲೆ ಹಲ್ಲೆ, ಠಾಣೆಯ ಮೇಲೆ ಕಲ್ಲೆಸೆತ, ಆ್ಯಂಬುಲೆನ್ಸಲ್ಲಿ ಮಾರಕಾಯುಧ ಇಟ್ಟು ಗಲಭೆ ಪಿತೂರಿ, ಪೊಲೀಸ್ ಜೀಪ್‌ಗೆ ಹಾನಿ ಆರೋಪಗಳೆಲ್ಲ ಸತ್ಯಕ್ಕೆ ದೂರವಾದ್ದು. ಪೊಲೀಸ್ ಲಾಠಿಚಾರ್ಜ್ ನಡೆಸಿದ ಬಳಿಕವೂ ಪೊಲೀಸ್ ಇನ್ಸ್ ಪೆಕ್ಟರ್ ಪ್ರಸನ್ನ ಕುಮಾರ್ ಠಾಣೆಯ ಮುಂಭಾಗದಲ್ಲಿ ನಿಂತಿರುವುದು ಕಂಡುಬರುತ್ತದೆ. ಆ ವೇಳೆ ಅವರ ಕೈಯಲ್ಲಿ ಯಾವುದೇ ಗಾಯದ ಗುರುತಾಗಲೀ, ಬ್ಯಾಂಡೇಜ್ ಕಟ್ಟಿದ ಕುರುಹು ಆಗಲೀ ಕಂಡುಬರುವುದಿಲ್ಲ. ಲಾಠಿ ಏಟಿನಿಂದಾಗಿ ಗಂಭೀರ ಗಾಯಗೊಂಡ ಫೋಟೋಗಳು ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ವೈರಲ್ ಆಗಿ ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತವಾದ ಬಳಿಕವಷ್ಟೇ ಈ ಅರೋಪಗಳು ಕೇಳಿಬಂದವು. ನಂತರ ದಾಖಲಿಸಲಾದ ಎಫ್.ಐ.ಆರ್.ಗಳಲ್ಲಿ ಒಂದೊಂದೇ ಆರೋಪಗಳನ್ನು ಸೇರಿಸಲಾಗಿತ್ತು ಎಂದು ಆರೋಪಿಸಿದ್ದಾರೆ.
ಮಂಗಳೂರಿನಲ್ಲಿ ನಡೆದ ಎನ್.ಆರ್.ಸಿ ಪ್ರತಿಭಟನೆಯ ವೇಳೆಯೂ ಪೊಲೀಸರು ತಮ್ಮ ಪ್ರಮಾದಗಳನ್ನು ಮುಚ್ಚಿ ಹಾಕಲು ಕಟ್ಟುಕಥೆಗಳನ್ನು ಕಟ್ಟಿದ್ದರು. ಉಪ್ಪಿನಂಗಡಿ ಘಟನೆಯಲ್ಲಿ ತಮ್ಮ ಪ್ರಮಾದ ಮುಚ್ಚಿಹಾಕಲು ಈ ರೀತಿ ಸುದ್ದಿ ಹರಡುತ್ತಿದ್ದಾರೆ. ಪ್ರತಿಭಟನಕಾರರು ಶಾಂತಿ ಕದಡುವ ಪ್ರಯತ್ನ ಮಾಡಿದ್ದರೆ, ಅದರ ಬಗ್ಗೆ ಸಾಕ್ಷ್ಯಗಳನ್ನು ಬಿಡುಗಡೆ ಮಾಡಲಿ ಹೊರತು ಸಾರ್ವಜನಿಕರ ದಿಕ್ಕು ತಪ್ಪಿಸಲು ಯತ್ನಿಸುವುದು ಸರಿಯಲ್ಲ ಎಂದು ಅಶ್ರಫ್ ಹೇಳಿದ್ದಾರೆ.
Uppinangady PFI laticharge case, Police are making fake allegations against PFI members slams leaders in Mangalore. District PFI president Izaaz Ahammed said they would take out a march to SP’s office condemning the lathi charge on December 17. PFI state secretary A K Ashraf urged the government to take action against the police officers, who were responsible for injuring innocents, including Maulana Sayyed Athoor Tangal and those who ordered for lathi charge should be placed under suspension.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm