ಬ್ರೇಕಿಂಗ್ ನ್ಯೂಸ್
17-12-21 07:45 pm HK Desk news ಕರಾವಳಿ
ಮಂಗಳೂರು ಡಿ.17 : ರಾಜ್ಯ ರಸ್ತೆ ಸಾರಿಗೆ ನಿಗಮದ ಮಂಗಳೂರು ವಿಭಾಗದಿಂದ ಮಂಗಳೂರು-ಮುಂಬೈ (ಮಂಗಳೂರಿನಿಂದ ವಯಾ ಮೂಡಬಿದಿರೆ, ಕಾರ್ಕಳ, ನಿಟ್ಟೆ, ಬೆಳ್ಮಣ್ಣು, ಶಿರ್ವ, ಮಂಚಕಲ್, ಉಡುಪಿ, ಕುಂದಾಪುರ, ಭಟ್ಕಳ, ಅಂಕೋಲ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ನಿಪ್ಪಾಣಿ, ಕೊಲ್ಲಾಪುರ, ಸತಾರ, ಪೂನಾ ಮಾರ್ಗವಾಗಿ ಮುಂಬೈ) ಮಾರ್ಗದಲ್ಲಿ ವೋಲ್ವೋ ಮಲ್ಟಿ ಆಕ್ಸಲ್ ಸಾರಿಗೆಯು ಡಿ.12ರಿಂದ ಕಾರ್ಯಾಚರಣೆ ಆರಂಭಿಸಿದೆ.
ಈ ಸಾರಿಗೆಯು ಮಂಗಳೂರು ಬಸ್ ನಿಲ್ದಾಣದಿಂದ ಮಧ್ಯಾಹ್ನ 12.45 ಗಂಟೆಗೆ ಹೊರಟು ಮೂಡಬಿದಿರೆಗೆ 1.45ಕ್ಕೆ ತಲುಪಲಿದೆ. ಕಾರ್ಕಳದಿಂದ 2.15 ಕ್ಕೆ ಹೊರಟು ನಿಟ್ಟೆ, ಬೆಳ್ಮಣ್ಣು, ಶಿರ್ವ, ಮಂಚಕಲ್, ಉಡುಪಿ, ಕುಂದಾಪುರ, ಭಟ್ಕಳ, ಅಂಕೋಲ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ನಿಪ್ಪಾಣಿ, ಕೊಲ್ಲಾಪುರ, ಸತಾರ, ಪೂನಾ ಮಾರ್ಗವಾಗಿ ಮುಂಬೈಗೆ ಬೆಳಗ್ಗೆ 7 ಕ್ಕೆ ತಲುಪುತ್ತದೆ.
ಮರು ಪ್ರಯಾಣದಲ್ಲಿ ಮುಂಬೈಯಿಂದ ಮಧ್ಯಾಹ್ನ 12 ಗಂಟೆಗೆ ಹೊರಟು ಪೂನಾ, ಸತಾರ, ಕೊಲ್ಲಾಪುರ, ನಿಪ್ಪಾಣಿ, ಬೆಳಗಾವಿ, ಧಾರವಾಡ, ಹುಬ್ಬಳ್ಳಿ, ಅಂಕೋಲಾ, ಭಟ್ಕಳ, ಕುಂದಾಪುರ, ಉಡುಪಿ, ಶಿರ್ವ- ಮಂಚಕಲ್, ಬೆಳ್ಮಣ್ಣು, ನಿಟ್ಟೆ, ಕಾರ್ಕಳ ಬೆಳಗ್ಗೆ 6.30ಕ್ಕೆ ತಲುಪಲಿದೆ. ನಂತರ ಮೂಡಬಿದ್ರೆಯಿಂದ ಬೆಳಗ್ಗೆ 7ಕ್ಕೆ ಹೊರಟು ಮಂಗಳೂರಿಗೆ 8 ಗಂಟೆಗೆ ತಲುಪುತ್ತದೆ.

ಮಂಗಳೂರಿನಿಂದ ಮುಂಬೈಗೆ ಪ್ರತಿ ಪ್ರಯಾಣಿಕರಿಗೆ ಒಟ್ಟು ಪ್ರಯಾಣ ದರ 1,400 ರೂ.ಗಳು. ಪ್ರಯಾಣಿಕರಿಗೆ ಅವತಾರ್ ವ್ಯವಸ್ಥೆ ಮೂಲಕ ಮುಂಗಡ ಆಸನ ಕಾದಿರಿಸುವ ವ್ಯವಸ್ಥೆ ಕಲ್ಪಿಸಲಾಗಿದೆ. ಸಾರ್ವಜನಿಕರು ಕೆಎಸ್ಸಾರ್ಟಿಸಿ ವೈಬ್ ಸೈಟ್ ಅಥವಾ ಹತ್ತಿರದ ರಿಸರ್ವೇಶನ್ ಕೌಂಟರ್ ಅನ್ನು ಸಂಪರ್ಕಿಸಬಹುದು.
ಹೆಚ್ಚಿನ ಮಾಹಿತಿಗೆ ಮಂಗಳೂರು ಬಸ್ಸು ನಿಲ್ದಾಣ ಮೊ.ಸಂಖ್ಯೆ: 7760990720, ಮಂಗಳೂರು ಮುಂಗಡ ಬುಕ್ಕಿಂಗ್ ಕೌಂಟರ್ ಮೊ.ಸಂಖ್ಯೆ: 9663211553, ಉಡುಪಿ ಬಸ್ಸು ನಿಲ್ದಾಣ ಮೊ.ಸಂಖ್ಯೆ: 9663266400, ಕುಂದಾಪುರ ಬಸ್ಸು ನಿಲ್ದಾಣ ಮೊ.ಸಂಖ್ಯೆ: 9663266009 ಸಂಪರ್ಕಿಸಬಹುದು ಎಂದು ಮಂಗಳೂರು ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
KSRTC Mangalore to Mumbai Multi axle Volvo service resumes back after long gap.
18-12-25 11:05 pm
HK News Desk
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm