ಕಾರಿಂಜೇಶ್ವರ ; ಕಲ್ಲು ಗಣಿಗಾರಿಕೆ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಕ್ಕೆ ಸೂಚನೆ ; ಸಚಿವ ಎಸ್.‌ಅಂಗಾರ 

21-12-21 12:59 pm       Mangalore correspondent   ಕರಾವಳಿ

ಬಂಟ್ವಾಳ ತಾಲೂಕಿನ ಕಾವಳಮುಡೂರು ಗ್ರಾಮದ ಕಾರಿಂಜೇಶ್ವರ ದೇವಸ್ಥಾನದ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಅಕ್ರಮ ಕಲ್ಲು ಗಣಿಗಾರಿಕೆ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಬಂದರು, ಮೀನುಗಾರಿಕೆ ಹಾಗೂ ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ತಿಳಿಸಿದ್ದಾರೆ. 

ಮಂಗಳೂರು, ಡಿ.20 : ಬಂಟ್ವಾಳ ತಾಲೂಕಿನ ಕಾವಳಮುಡೂರು ಗ್ರಾಮದ ಕಾರಿಂಜೇಶ್ವರ ದೇವಸ್ಥಾನದ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಅಕ್ರಮ ಕಲ್ಲು ಗಣಿಗಾರಿಕೆ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಬಂದರು, ಮೀನುಗಾರಿಕೆ ಹಾಗೂ ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ತಿಳಿಸಿದ್ದಾರೆ. 

ಜಿಲ್ಲಾಧಿಕಾರಿ ಅವರು ಈಗಾಗಲೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ದೇವಸ್ಥಾನದ ಸುತ್ತಮುತ್ತಲಿನ ಜಾಗದಲ್ಲಿ ನಡೆಯುತ್ತಿದ್ದ 2 ಕ್ರಶರ್ ಮತ್ತು 2 ಕಲ್ಲು ಕ್ವಾರಿಗಳ ಕಾರ್ಯಾಚರಣೆ ಸ್ಥಗಿತಗೊಳಿಸಲಾಗಿದೆ. ಕಲ್ಲು ಗಣಿ ಗುತ್ತಿಗೆ ಪ್ರದೇಶದ ಹೊರ ಭಾಗದಲ್ಲಿ ಅಕ್ರಮವಾಗಿ ಕಟ್ಟಡ ಕಲ್ಲು ಸಾಗಾಣಿಕೆ ಮಾಡಿರುವುದರಿಂದ ಗಣಿ ಮಾಲೀಕರಿಗೆ 8.90 ಕೋಟಿ ರೂ. ದಂಡ ವಿಧಿಸಲಾಗಿದೆ. ಬಂಟ್ವಾಳ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ಇಲಾಖೆಯವರು ಪಿಸಿಆರ್ ದಾವೆ ಹೂಡಿದ್ದಾರೆ ಎಂದು ಸಚಿವರು ತಿಳಿಸಿದ್ದಾರೆ. 

ಜಿಯೋಗ್ರಾಫಿಕಲ್ ಸರ್ವೆ ಆಫ್ ಇಂಡಿಯಾದಿಂದ ಸರ್ವೇ ನಡೆಸಿ  ಅದರ ವರದಿ ಆಧಾರದ ಮೇಲೆ ಕ್ರಮ ಕೈಗೊಳ್ಳಲಾಗುವುದು. ಜಿಲ್ಲಾಧಿಕಾರಿ ಹಾಗೂ ಸಂಬಂಧಪಟ್ಟ ಎಲ್ಲ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸೂಕ್ತ ಕ್ರಮಕ್ಕೆ ನಿರ್ದೇಶನ ನೀಡಲಾಗುವುದೆಂದು ಸಚಿವ ಎಸ್.ಅಂಗಾರ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Minister Angara orders for strict action against Karinja quarrying in Bantwal. Hindu Jagarana Vedike (HJV) plans to organize foot march to DC office at 11 am on December 21 demanding to permanently end quarrying and mining activities in the area of Karinjeshwara temple in Bantwal taluk. Speaking at a press conference held here on Friday December 17, HJV provincial executive member, Radhakrishna Adyantaya, said that this is the second phase of the fight against illegal mining in the region launched by his organization.