ಬ್ರೇಕಿಂಗ್ ನ್ಯೂಸ್
24-12-21 01:11 pm HK Desk news ಕರಾವಳಿ
ಉಡುಪಿ, ಡಿ.24 : ಕಳೆದ ಬಾರಿ ಸಿದ್ದರಾಮಯ್ಯ ಸರಕಾರ ಉಡುಪಿ ಕೃಷ್ಣ ಮಠವನ್ನು ಸರಕಾರದ ವಶಕ್ಕೆ ಪಡೆಯಲು ಮುಂದಾಗಿತ್ತು. ಈ ಬಗ್ಗೆ ಮಾಹಿತಿ ತಿಳಿದು, ಆ ಪ್ರಯತ್ನವನ್ನು ತಡೆ ಹಾಕಿದ್ದೆ ಎಂದು ಸಿದ್ದರಾಮಯ್ಯ ಸರಕಾರದಲ್ಲಿ ಸಚಿವರಾಗಿದ್ದ ಪ್ರಮೋದ್ ಮಧ್ವರಾಜ್ ಹೇಳಿದ್ದಾರೆ.
ಉಡುಪಿ ಕೃಷ್ಣಮಠದಲ್ಲಿ ನಡೆಯುತ್ತಿರುವ ವಿಶ್ವಾರ್ಪಣಂ ಕಾರ್ಯಕ್ರಮದಲ್ಲಿ ಡಿ.23ರಂದು ಮಾತನಾಡಿದ ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಕೆಲವು ಅಚ್ಚರಿಯ ಮಾಹಿತಿಗಳನ್ನು ಹೊರಗೆಡವಿದ್ದಾರೆ. ಸಿದ್ದರಾಮಯ್ಯ ಸರಕಾರ ಕೃಷ್ಣ ಮಠವನ್ನು ಸರಕಾರದ ವಶಕ್ಕೆ ಪಡೆಯುವ ಸಂಚು ನಡೆಸಿತ್ತು. ಆದರೆ ಈ ಬಗ್ಗೆ ಮಾಹಿತಿ ತಿಳಿಯುತ್ತಲೇ ಮುಖ್ಯಮಂತ್ರಿಗೆ ಫೋನ್ ಕರೆ ಮಾಡಿ, ಇಂತಹ ಪ್ರಯತ್ನ ನಡೆಸಿದರೆ ಅದಕ್ಕೆ ಮೊದಲು ನಾನೇ ರಾಜಿನಾಮೆ ನೀಡುತ್ತೇನೆ ಎಂದಿದ್ದೆ. ಕೃಷ್ಣ ಮಠವನ್ನು ವಶಕ್ಕೆ ಪಡೆಯುವುದರಿಂದ ದೊಡ್ಡ ವಿವಾದ ಮೈಮೇಲೆ ಎಳೆದುಕೊಳ್ಳುವ ಸಂದರ್ಭ ಬರುತ್ತಿತ್ತು. ಆದರೆ ಅಂಥ ಸಂದರ್ಭ ಬಾರದಂತೆ ತಡೆದು ನಿಲ್ಲಿಸಿದ ತೃಪ್ತಿ ನನಗಿದೆ ಎಂದು ಪ್ರಮೋದ್ ಮಧ್ವರಾಜ್ ಹೇಳಿದ್ದಾರೆ.
ಕಳೆದ ಬಾರಿ ಪಲಿಮಾರು ಮಠಾಧೀಶರ ಪರ್ಯಾಯ ಸಂದರ್ಭದಲ್ಲಿ ಮಧ್ವ ಸರೋವರಕ್ಕೆ ಕೊಳಚೆ ನೀರು ಸೇರುವ ಸಂದರ್ಭ ಎದುರಾಗಿತ್ತು. ಇದನ್ನು ಮನಗಂಡು ನಗರಸಭೆಯಿಂದ 45 ಲಕ್ಷ ರೂ. ಮಂಜೂರು ಮಾಡಿಸಿ, ಅದನ್ನು ನಿವಾರಿಸುವ ಕೆಲಸ ಮಾಡಿದ್ದೇನೆ ಎಂದರು.
ಅಲ್ಲದೆ, ನಾನು ಶಾಸಕನಾಗಿ ಆಯ್ಕೆಯಾದ ಬಳಿಕ ಉಡುಪಿ ಶ್ರೀಕೃಷ್ಣ ಮತ್ತು ಮುಖ್ಯಪ್ರಾಣ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದೆ. ಇದನ್ನು ಸಹಿಸದ ಕೆಲವರು ನನ್ನ ಶಾಸಕತ್ವ ರದ್ದುಪಡಿಸುವ ಕೋರಿ ಪಿಐಎಲ್ ಹಾಕಿದ್ದರು. ಆದರೆ ಈ ರೀತಿಯ ಕಿಡಿಗೇಡಿ ಪ್ರಯತ್ನಗಳಿಂದ ನನಗೇನೂ ತೊಂದರೆ ಆಗಿಲ್ಲ. ಈ ರೀತಿಯ ಬಾಲಿಶ ಮನಸ್ಸುಳ್ಳವರು ಕೂಡ ನಮ್ಮ ನಡುವೆ ಇದ್ದಾರಲ್ಲಾ ಅನ್ನುವುದು ನನಗೆ ಅಚ್ಚರಿಯಾಗುತ್ತಿದೆ ಎಂದು ಪ್ರಮೋದ್ ಹೇಳಿದರು. ಪರ್ಯಾಯ ಶ್ರೀ ಈಶಪ್ರಿಯ ತೀರ್ಥ ಸ್ವಾಮೀಜಿ, ಮಂಗಳೂರಿನ ಆದಿಚುಂಚನಗಿರಿ ಮಠದ ಧರ್ಮಪಾಲನಾಥ ಸ್ವಾಮೀಜಿ ಉಪಸ್ಥಿತರಿದ್ದರು.
ಪ್ರಮೋದ್ ಮಧ್ವರಾಜ್ ಬಿಜೆಪಿ ಸೇರಲಿದ್ದಾರೆ ಎಂಬ ಊಹೋಪೋಹದ ನಡುವೆಯೇ ಕೃಷ್ಣ ಮಠದಲ್ಲೇ ನಿಂತು ಸಿದ್ದರಾಮಯ್ಯ ಸರಕಾರದ ವಿರುದ್ಧ ಹೇಳಿಕೆ ನೀಡಿರುವುದು ಪ್ರಾಮುಖ್ಯತೆ ಪಡೆದಿದೆ.
Former minister Pramod Madhwaraj, said that the erstwhile Congress government was on the verge of taking over the administration of Srikrishna Math. Madhwaraj revealed that the then Congress government headed by Siddaramaiah had conspired to bring the Math under the rule of the department of religious endowments.
02-10-25 03:50 pm
Bangalore Correspondent
ಆರ್ ಸಿಬಿ ತಂಡ ಮಾರಾಟಕ್ಕಿಟ್ಟ ಯುನೈಟೆಡ್ ಸ್ಪಿರಿಟ್ಸ್...
02-10-25 02:28 pm
ಹಾಸನದ ನಿಗೂಢ ಸ್ಫೋಟದ ಬೆನ್ನತ್ತಿದ ಪೊಲೀಸರು ; ಸಿಡಿಮ...
01-10-25 10:06 pm
Dharmasthala Case: ಧರ್ಮಸ್ಥಳ ಪ್ರಕರಣ ; ಆದಷ್ಟು ಬ...
30-09-25 07:31 pm
Hassan Blast: ಹಾಸನದಲ್ಲಿ ಅನುಮಾನಾಸ್ಪದ ಸ್ಫೋಟ ; ನ...
30-09-25 04:00 pm
02-10-25 03:45 pm
HK News Desk
ಆರೆಸ್ಸೆಸ್ ಶತಮಾನೋತ್ಸವ ; ಭಾರತ ಮಾತೆಯ ಚಿತ್ರವಿರುವ...
01-10-25 09:44 pm
Cough Syrup Side Effects Suspected, Kidney Fa...
01-10-25 05:32 pm
ಮುಂಬೈ ಉಗ್ರ ದಾಳಿ ; 17 ವರ್ಷಗಳ ಬಳಿಕ ಪಿ. ಚಿದಂಬರಂ...
01-10-25 04:10 pm
ಫಸ್ಟ್ ನೈಟ್ ಅರ್ಜೆಂಟ್ ಮಾಡಂಗಿಲ್ಲ..! ಮದುಮಗಳ ರಾಗಕ್...
30-09-25 04:08 pm
02-10-25 11:05 pm
Mangalore Correspondent
Illegal Slaughterhouse in Mangalore: ಬೆನ್ನು ಬ...
02-10-25 10:43 pm
D.K. Shivakumar, Mangaluru Dasara: ದೇವರೇ ನನ್ನ...
02-10-25 11:43 am
Mangalore, Pilinalike 2025: ಪಿಲಿನಲಿಕೆ ಉತ್ಸವಕ್...
01-10-25 11:00 pm
Jayanth, Chinnayya, Dharmasthala Case: ಚಿನ್ನಯ...
01-10-25 04:45 pm
01-10-25 02:39 pm
Mangalore Correspondent
Ullal Gold Robbery, Mangalore, CCB police: ಜು...
29-09-25 01:24 pm
ಸಹಾಯ ಕೇಳಿ ಬಂದ ಯುವತಿಯನ್ನು ಮದುವೆಯಾಗುತ್ತೇನೆಂದು ನ...
28-09-25 11:08 pm
ವಾಟ್ಸಪ್ ಮೆಸೇಜ್ ನಂಬಿ ಷೇರು ಮಾರುಕಟ್ಟೆ ಹೂಡಿಕೆ ; ನ...
28-09-25 05:04 pm
ಉಡುಪಿ ಬಸ್ ಚಾಲಕ ಸೈಫುದ್ದೀನ್ ಸ್ನೇಹಿತರಿಂದಲೇ ಕೊಲೆ...
28-09-25 04:57 pm