ಬ್ರೇಕಿಂಗ್ ನ್ಯೂಸ್
25-12-21 08:04 pm Mangalore Correspondent ಕರಾವಳಿ
ಮಂಗಳೂರು, ಡಿ.25 : ತುಳು ಭಾಷೆಯನ್ನು ಸಂವಿಧಾನದ ಎಂಟನೇ ಪರಿಚ್ಛೇದಕ್ಕೆ ಸೇರ್ಪಡೆ ಮಾಡಬೇಕು ಎಂಬ ಆಗ್ರಹದ ನಡುವೆಯೇ ಇಲ್ಲೊಬ್ಬ ವಿಮಾನದ ಪೈಲಟ್ ತುಳುವಿನಲ್ಲಿ ಅನೌನ್ಸ್ ಮೆಂಟ್ ಕೊಟ್ಟು ಹೈಫೈ ಇಂಗ್ಲಿಷ್ ಪ್ರಿಯರ ಮಧ್ಯೆ ವಿಭಿನ್ನ ಆಕರ್ಷಣೆಗೆ ಕಾರಣವಾಗಿದ್ದಾರೆ.
ಉಡುಪಿ ಜಿಲ್ಲೆಯ ಮೂಲದ ಪ್ರದೀಪ್ ಪದ್ಮಶಾಲಿ ಇಂಡಿಗೋ ವಿಮಾನದಲ್ಲಿ ಪೈಲಟ್ ಆಗಿದ್ದು ಶುಕ್ರವಾರ ರಾತ್ರಿ ಎಂಟು ಗಂಟೆಗೆ ಮುಂಬೈನಿಂದ ಮಂಗಳೂರಿಗೆ ವಿಮಾನ ಹೊರಡುವಾಗ ಇಂಗ್ಲಿಷ್ ಬದಲಿಗೆ ತುಳುವಿನಲ್ಲಿ ಅನೌನ್ಸ್ ಮೆಂಟ್ ಕೊಟ್ಟಿದ್ದಾರೆ. ದೇಶೀಯ ವಿಮಾನದಲ್ಲಿ ಇಂಗ್ಲಿಷ್ ಅಥವಾ ಹಿಂದಿಯಲ್ಲಿ ಮಾತ್ರ ವಿಮಾನ ಹೊರಡುವಾಗ ಮತ್ತು ಇಳಿಯುವಾಗ ಪ್ರಯಾಣಿಕರಿಗೆ ಸೂಚನೆ ರವಾನಿಸುವ ಪದ್ಧತಿ ಇದೆ. ಆದರೆ, ಕರಾವಳಿ ಕರ್ನಾಟಕದ ಜನರ ಸ್ಥಳೀಯ ಭಾಷೆ ಎನ್ನುವ ನೆಲೆಯಲ್ಲಿ ಮುಂಬೈನಿಂದ ಮಂಗಳೂರಿಗೆ ಬರುವ ವಿಮಾನದಲ್ಲಿ ಕರಾವಳಿ ಜನರೇ ಹೆಚ್ಚಿರುವುದರಿಂದ ಪೈಲಟ್ ಈ ಬಗ್ಗೆ ಹಿರಿಯಧಿಕಾರಿಗಳ ಅನುಮತಿ ಪಡೆದು ತುಳು ಭಾಷೆಯಲ್ಲಿ ಸೂಚನೆ ನೀಡಿದ್ದಾರೆ.

ಇಂಡಿಗೋ ವಿಮಾನ ಪ್ರತಿ ದಿನವೂ ಎಂಟು ಗಂಟೆಗೆ ಮುಂಬೈನಿಂದ ಹೊರಟು ರಾತ್ರಿ 9.30ಕ್ಕೆ ಮಂಗಳೂರು ತಲುಪುತ್ತದೆ. ಇದರಲ್ಲಿ ಪ್ರದೀಪ್ ಪೈಲಟ್ ಆಗಿದ್ದು ತಾನೊಬ್ಬ ತುಳುವ ಅನ್ನುವ ಅಭಿಮಾನದಿಂದ ಇಂಗ್ಲಿಷ್ ಭಾಷೆಯಲ್ಲಿರುವ ಸೂಚನೆಯನ್ನು ತುಳುವಿನಲ್ಲಿ ಬರೆದು ಓದಿದ್ದಾರೆ.
ಪ್ರದೀಪ್ ಉಡುಪಿ ಮೂಲದ ಕುಟುಂಬದವರಾಗಿದ್ದು ಮುಂಬೈನಲ್ಲಿಯೇ ಬೆಳೆದು ಕಲಿತು ಪೈಲಟ್ ಉದ್ಯೋಗಕ್ಕೆ ಸೇರಿದ್ದಾರೆ. ಮಾತೆರೆಗ್ಲಾ ಸೊಲ್ಮೆಲು ಎನ್ನುತ್ತಾ ತುಳುವಿನಲ್ಲಿ ಅನೌನ್ಸ್ ಮೆಂಟ್ ಕೊಟ್ಟಿರುವ 45 ಸೆಕಂಡಿನ ವಿಡಿಯೋ ಕರಾವಳಿಯಲ್ಲಿ ವೈರಲ್ ಆಗಿದೆ. ಹೆಚ್ಚಿನವರು ತಮ್ಮ ವಾಟ್ಸಪ್ ಸ್ಟೇಟಸ್ ಹಾಕಿ ಅಭಿಮಾನ ಮೆರೆದಿದ್ದಾರೆ.
Mangalore based Indigo pilot welcomes passenger in Tulu wins heart, video goes viral over internet. The flight was from Mumbai to Mangalore. Udupi based Pradeep is the a pilot.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
12-07-26 10:13 pm
HK News Staffer
ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಕೊನೆಗೂ ಎನ್ಐ...
12-07-26 02:16 pm
ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ತ್ರಿವಳಿ ಕೊಲೆ ; ತಾ...
11-07-26 08:40 pm
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm