ಬ್ರೇಕಿಂಗ್ ನ್ಯೂಸ್
26-12-21 08:09 pm Mangalore Correspondent ಕರಾವಳಿ
ಉಳ್ಳಾಲ, ಡಿ.26 : ಸೋಮವಾರ (ಡಿ.27) ಕೋಟೆಕಾರ್ ಪಟ್ಟಣ ಪಂಚಾಯತ್ ಚುನಾವಣೆ ನಡೆಯಲಿದ್ದು,ವಿಳಾಸ ಇಲ್ಲದವರೂ ಮತದಾರರ ಪಟ್ಟಿಯಲ್ಲಿ ಸೇರ್ಪಡೆ ಆಗಿರುವುದು ಗೊಂದಲಕ್ಕೆ ಕಾರಣವಾಗುವ ಸಾಧ್ಯತೆಗಳಿವೆ.
ಕೋಟೆಕಾರ್ ಪಟ್ಟಣ ಸ್ಥಳೀಯ ಸಂಸ್ಥೆಯ 17 ವಾರ್ಡ್ ಗಳಿಗೆ ನಡೆಯುವ ಚುನಾವಣೆಯಲ್ಲಿ ಕಾಂಗ್ರೆಸ್ 17, ಬಿಜೆಪಿ 17, ಸಿಪಿಐಎಂ 2, ಎಸ್ ಡಿಪಿಐ 6 ಹಾಗೂ ಮೂವರು ಪಕ್ಷೇತರರು ಸೇರಿದಂತೆ ಒಟ್ಟು 45 ಮಂದಿ ಕಣದಲ್ಲಿದ್ದಾರೆ. ಮತಯಾಚನೆ, ಬಹಿರಂಗ ಪ್ರಚಾರ ಮುಕ್ತಾಯಗೊಂಡಿದ್ದು, ಅಭ್ಯರ್ಥಿಗಳು ಚುನಾವಣೆ ಎದುರಿಸಲು ಸಜ್ಜಾಗಿ ನಿಂತಿದ್ದಾರೆ. 45 ಅಭ್ಯರ್ಥಿಗಳ ಪೈಕಿ ಜಯ ಸಾಧಿಸುವ 17 ಅಭ್ಯರ್ಥಿಗಳು ಯಾರು ಎಂಬುದನ್ನು ಮತದಾರರು ನಿರ್ಧರಿಸಲಿದ್ದಾರೆ.
ಕೋಟೆಕಾರ್ ಪಟ್ಟಣ ಪಂಚಾಯಿತಿಯ 17 ವಾರ್ಡ್ ವ್ಯಾಪ್ತಿಯಲ್ಲಿ 18 ಮತಗಟ್ಟೆಗಳನ್ನು ತೆರೆಯಲಾಗಿದೆ. ಮಾಡೂರು ನಲ್ಲಿ ಮೂರು, ಅಜ್ಜಿನಡ್ಕದಲ್ಲಿ ಎರಡು, ಕಣಚೂರು ಶಾಲೆಯಲ್ಲಿ ಒಂದು, ಬಗಂಬಿಲದಲ್ಲಿ ಎರಡು, ಮರ್ಕಜದಲ್ಲಿ ಎರಡು, ಉಚ್ಚಿಲ ದಲ್ಲಿ ಒಂದು, ಮಡ್ಯಾರ್ ನಲ್ಲಿ ಎರಡು, ಪನೀರ್ ನಲ್ಲಿ ಎರಡು, ಕೋಟೆಕಾರ್ ಪಟ್ಟಣ ಪಂಚಾಯತ್ ನಲ್ಲಿ ಎರಡು ಮತಗಟ್ಟೆಗಳನ್ನು ತೆರೆಯಲಾಗಿದೆ.
9, 10 ಹಾಗೂ 3ನೇ ವಾರ್ಡ್ ಗಳ ಮತಗಟ್ಟೆ ಹೊಂದಿರುವ ಮಾಡೂರು, ಅಜ್ಜಿನಡ್ಕ, ಕೊಮರಂಗಲ ಅತೀ ಸೂಕ್ಷ್ಮ ಮತಗಟ್ಟೆಗಳು ಎಂದು ಗುರುತಿಸಲಾಗಿದ್ದು, ಇಲ್ಲಿಗೆ ಹೆಚ್ಚಿನ ಭದ್ರತೆ ಒದಗಿಸಲಾಗಿದೆ. ಮತಗಟ್ಟೆಗಳ ಬಳಿ ತೆರೆಯುವ ಪಕ್ಷಗಳ ಬೂತ್ ಗಳಲ್ಲಿ ಇಬ್ಬರಿಗೆ ಮಾತ್ರ ಕಾರ್ಯ ನಿರ್ವಹಿಸಲು ಅವಕಾಶ ಕಲ್ಪಿಸಲಾಗಿದೆ. ರಾಜಕೀಯ ಪಕ್ಷಗಳ ಕಾರ್ಯಕರ್ತರು ಮತಗಟ್ಟೆಗಳ ಬಳಿ ಸೇರದಂತೆ ಸೂಚನೆ ನೀಡಲಾಗಿದೆ.
ಚುನಾವಣಾ ಅಧಿಕಾರಿಗಳಾಗಿ ಸತೀಶ್ ಹಾಗೂ ಸದಾನಂದ ಕಾರ್ಯ ನಿರ್ವಹಣೆ ಮಾಡಲಿದ್ದಾರೆ. ಸಿಡಿಪಿಒ ಸದಸ್ಯೆ ಶೈಲ ಚುನಾವಣೆ ಅಧಿಕಾರಿ ಆಗಿ ಕಾರ್ಯ ನಿರ್ವಹಿಸಲಿದ್ದಾರೆ. ಉಳ್ಳಾಲ ನಗರಸಭಾ ಪೌರಾಯುಕ್ತ ರಾಯಪ್ಪ ಮಾದರಿ ನೀತಿ ಸಂಹಿತೆ ಅಧಿಕಾರಿಯಾಗಿ ಹಾಗೂ ಕೋಟೆಕಾರ್ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಪ್ರಭಾಕರ್ ಅಧಿಕಾರಿಯಾಗಿ ಕಾರ್ಯ ನಿರ್ವಹಣೆ ಮಾಡಲಿದ್ದಾರೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ. ಅಧಿಕಾರಿಗಳು ಭಾನುವಾರ ಎಲ್ಲಾ ಮತಗಟ್ಟೆಗಳ ಬಳಿ ತೆರಳಿ ಪರಿಶೀಲನೆ ನಡೆಸಿದ್ದಾರೆ.
ಅಂತಿಮ ಮತದಾರ ಪಟ್ಟಿಯಲ್ಲಿ ಕೋಟೆಕಾರು ಪಟ್ಟಣದ ವಾರ್ಡ್ ನಂಬರ್ 6 (ಬಗಂಬಿಲ ವೈದ್ಯನಾಥ ನಗರ) ಮತಗಟ್ಟೆ ಸಂಖ್ಯೆ 154 ರಲ್ಲಿ ಮೂರು ವೈದ್ಯಕೀಯ ಕಾಲೇಜಿನ 300 ಹೊರ ರಾಜ್ಯದ ವೈದ್ಯಕೀಯ ವಿದ್ಯಾರ್ಥಿಗಳ ಹೆಸರುಗಳನ್ನ ಸೇರಿಸಲಾಗಿದೆ. ವಿದ್ಯಾರ್ಥಿಗಳು ಮತಗಟ್ಟೆಗೆ ಬಂದು ಮತ ಚಲಾಯಿಸಲು ಮುಂದಾದರೆ ಗೊಂದಲ ಉಂಟಾಗುವ ಸಾಧ್ಯತೆ ದಟ್ಟವಾಗಿದೆ. ಮತದಾರರ ಪಟ್ಟಿಯಲ್ಲಿ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳ ಹೆಸರುಗಳನ್ನ ಸೇರ್ಪಡೆಗೊಳಿಸಿದ ಬಗ್ಗೆ ಚುನಾವಣಾ ಆಯೋಗಕ್ಕೆ ಬಿಜೆಪಿ ಪ್ರಮುಖರಾದ ಮೋಹನ್ ರಾಜ್ ಕೆ.ಆರ್ ಅವರು ದೂರು ಸಲ್ಲಿಸಿದ್ದರು. ರಾಜ್ಯ ಚುನಾವಣಾ ಆಯೋಗವು ಪ್ರಕರಣವನ್ನ ತನಿಖೆ ನಡೆಸುವಂತೆ ದ.ಕ ಜಿಲ್ಲಾಧಿಕಾರಿಗೆ ಸೂಚಿಸಿತ್ತು. ಜಿಲ್ಲಾಧಿಕಾರಿಗಳು ಸಹಾಯಕ ಆಯುಕ್ತರ ಮೂಲಕ ತಹಸೀಲ್ದಾರ್ ಅವರಿಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದರೂ, ತಹಶೀಲ್ದಾರ್ ಯಾವುದೇ ಕ್ರಮ ಕೈಗೊಳ್ಳದೆ ಸುಮ್ಮನಾಗಿದ್ದರು. ನಾಳೆ ಮತಗಟ್ಟೆಗಳಲ್ಲಿ ಗೊಂದಲ ಸೃಷ್ಟಿಯಾದರೆ ಜಿಲ್ಲಾಡಳಿತವೇ ನೇರ ಹೊಣೆಯಾಗುವುದೆಂದು ಸ್ಥಳೀಯರು ಅಭಿಪ್ರಾಯ ಪಟ್ಟಿದ್ದಾರೆ. ಡಿ.30 ರಂದು ಮಂಗಳೂರು ತಾಲೂಕು ಪಂಚಾಯಿತಿ ಕಚೇರಿಯಲ್ಲಿ ಮತ ಎಣಿಕೆ ಕಾರ್ಯ ನಡೆಯಲಿದೆ.
Mangalore Kotekar panchayat elections tomorrow. As hundreds of voter id have been issued to students who are of different state without any address or details.
03-09-25 09:00 pm
HK News Desk
ಧರ್ಮಸ್ಥಳ ಚಲೋ' ಬಿಜೆಪಿ ನಾಯಕರ ವಿಡಿಯೋ ಬಳಸಿ ಜಾಲತಾಣ...
03-09-25 08:35 pm
ಪ್ರೀಮಿಯಂ ಬ್ರಾಂಡ್ ಮದ್ಯಗಳ ಬೆಲೆ ಇಳಿಕೆಗೆ ಚಿಂತನೆ ;...
03-09-25 02:30 pm
Mangalore, Moodbidri Police, Constable Shanta...
03-09-25 01:36 pm
ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಅಸ್ತಿತ್ವಕ್ಕೆ ;...
02-09-25 11:04 pm
04-09-25 08:47 pm
HK News Desk
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
ಯಮ‘ಕಂಪನ’ ; ತಾಲಿಬಾನಿಗಳ ನೆಲೆ ಈಗ ಗಢಗಢ..ಭೂಕಂಪಕ್ಕೆ...
03-09-25 07:18 pm
04-09-25 11:07 pm
Mangalore Correspondent
Dharmasthala, Sameer Md, House Raid: ಧರ್ಮಸ್ಥಳ...
04-09-25 10:29 pm
Brijesh Chowta, Mangalore: ಜಿಎಸ್ಟಿ ಹೊರೆ ಇಳಿಸಿ...
04-09-25 07:57 pm
Mangalore, Loudspeaker Ban: ರಾತ್ರಿ ವೇಳೆ ಧ್ವನಿ...
04-09-25 07:39 pm
KMC Attavar Performs Rare, Life-Saving Surger...
03-09-25 11:03 pm
04-09-25 01:10 pm
Udupi Correspondent
Udupi Crime, Baby Sale Racket: ಮಂಗಳೂರಿನ ಪ್ರತಿ...
04-09-25 12:25 pm
Bagalur Police, Drugs, Crime: ಬ್ಯುಸಿನೆಸ್ ವೀಸಾ...
03-09-25 05:40 pm
Gold Theft, Mangalore, Airport: ವಿಮಾನ ಪ್ರಯಾಣಿ...
02-09-25 07:09 pm
Valachil, Rape, College, Mangalore Crime: ಇನ್...
02-09-25 04:31 pm