ಬ್ರೇಕಿಂಗ್ ನ್ಯೂಸ್
29-12-21 11:51 am HK Desk news ಕರಾವಳಿ
ಉಡುಪಿ, ಡಿ.29 : ಕೊರಗ ಸಮುದಾಯದ ಮದುವೆ ಕಾರ್ಯಕ್ರಮ ನಿಮಿತ್ತ ಮೆಹಂದಿಗೆ ಡಿಜೆ ಹಾಕಿದ್ದ ನೆಪದಲ್ಲಿ ಲಾಠಿಚಾರ್ಜ್ ನಡೆಸಿದ್ದ ಕೋಟ ಠಾಣೆ ಪಿಎಸ್ಐ ಸಂತೋಷ್ ಅವರನ್ನು ಪಶ್ಚಿಮ ವಲಯ ಐಜಿಪಿ ಅಮಾನತು ಮಾಡಿದ್ದಾರೆ.
ಲಾಠಿಚಾರ್ಜ್ ಘಟನೆಯಲ್ಲಿ ಭಾಗಿಯಾಗಿದ್ದ ಇತರ ಐವರು ಪೊಲೀಸ್ ಸಿಬಂದಿಯನ್ನು ತಕ್ಷಣದಿಂದಲೇ ಬೇರೆ ಕಡೆಗೆ ವರ್ಗಾವಣೆ ಮಾಡಲು ಐಜಿಪಿ ಆದೇಶ ಮಾಡಿದ್ದಾರೆ. ಡಿ.27ರ ಸೋಮವಾರ ರಾತ್ರಿ ಕೋಟತಟ್ಟು ಗ್ರಾಮದಲ್ಲಿ ಘಟನೆ ನಡೆದಿತ್ತು. ಕೊರಗ ಸಮುದಾಯದ ಮದುವೆ ಮೆಹಂದಿ ಕಾರ್ಯಕ್ರಮದಲ್ಲಿ ಡಿಜೆ ಸೌಂಡ್ ಹಾಕಿದ್ದನ್ನು ವಿರೋಧಿಸಿ ಸ್ಥಳೀಯ ಕೆಲವರು ಠಾಣೆಗೆ ದೂರು ನೀಡಿದ್ದರು. ಸ್ಥಳಕ್ಕೆ ತೆರಳಿದ್ದ ಪೊಲೀಸರು ಡಿಜೆ ಸೌಂಡ್ ಕಡಿಮೆ ಮಾಡಲು ಸೂಚಿಸಿದ್ದು ಆನಂತರವೂ ನಿಲ್ಲಿಸದೇ ಇದ್ದುದಕ್ಕೆ ಪಿಎಸ್ಐ ನೇತೃತ್ವದಲ್ಲಿ ಲಾಠಿಚಾರ್ಜ್ ಮಾಡಿದ್ದರು.
ಮದುಮಗ ಸೇರಿದಂತೆ ಮಹಿಳೆಯರು, ವೃದ್ಧರ ಮೇಲೂ ಹಲ್ಲೆ ನಡೆಸಲಾಗಿತ್ತು. ಈ ಬಗ್ಗೆ ಭಾರೀ ಆಕ್ರೋಶ ವ್ಯಕ್ತವಾಗುತ್ತಲೇ ಎಸ್ಪಿ ವಿಷ್ಣುವರ್ಧನ್ ಘಟನೆ ಬಗ್ಗೆ ತನಿಖೆಗೆ ಆದೇಶ ಮಾಡಿದ್ದರು. ಪ್ರಾಥಮಿಕ ವರದಿ ಆಧರಿಸಿ ಪಶ್ಚಿಮ ವಲಯ ಐಜಿಪಿ ದೇವಜ್ಯೋತಿ ರೇ ಕೋಟ ಠಾಣೆ ಪಿಎಸ್ಐ ಸಂತೋಷ್ ಅಮಾನತು ಮಾಡಿದ್ದಾರೆ.
ಮೆಹಂದಿ ಕಾರ್ಯಕ್ರಮಕ್ಕೆ ನುಗ್ಗಿದ ಪೊಲೀಸರಿಂದ ಲಾಠಿಚಾರ್ಜ್ ! ಸಚಿವ ಕೋಟ ಊರಲ್ಲೇ ಬಡವರ ಮೇಲೆ ಪೊಲೀಸರ ದೌರ್ಜನ್ಯ !
ಕೋಟದಲ್ಲಿ ಪೊಲೀಸ್ ದೌರ್ಜನ್ಯ ; ಡಿಎಸ್ಪಿ ನೇತೃತ್ವದಲ್ಲಿ ತನಿಖೆಗೆ ಆದೇಶ - ಎಸ್ಪಿ ವಿಷ್ಣುವರ್ಧನ್
Kota police sub inspector Santhosh was suspended on the accusation of atrocities by the police personnel on the Koraga community during a Mehendi programme. This order was taken out by IGP of Western Range. The five policemen who wielded lathis mercilessly on the Koraga community members are also transferred with immediate effect.
03-09-25 09:00 pm
HK News Desk
ಧರ್ಮಸ್ಥಳ ಚಲೋ' ಬಿಜೆಪಿ ನಾಯಕರ ವಿಡಿಯೋ ಬಳಸಿ ಜಾಲತಾಣ...
03-09-25 08:35 pm
ಪ್ರೀಮಿಯಂ ಬ್ರಾಂಡ್ ಮದ್ಯಗಳ ಬೆಲೆ ಇಳಿಕೆಗೆ ಚಿಂತನೆ ;...
03-09-25 02:30 pm
Mangalore, Moodbidri Police, Constable Shanta...
03-09-25 01:36 pm
ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಅಸ್ತಿತ್ವಕ್ಕೆ ;...
02-09-25 11:04 pm
04-09-25 08:47 pm
HK News Desk
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
ಯಮ‘ಕಂಪನ’ ; ತಾಲಿಬಾನಿಗಳ ನೆಲೆ ಈಗ ಗಢಗಢ..ಭೂಕಂಪಕ್ಕೆ...
03-09-25 07:18 pm
04-09-25 11:07 pm
Mangalore Correspondent
Dharmasthala, Sameer Md, House Raid: ಧರ್ಮಸ್ಥಳ...
04-09-25 10:29 pm
Brijesh Chowta, Mangalore: ಜಿಎಸ್ಟಿ ಹೊರೆ ಇಳಿಸಿ...
04-09-25 07:57 pm
Mangalore, Loudspeaker Ban: ರಾತ್ರಿ ವೇಳೆ ಧ್ವನಿ...
04-09-25 07:39 pm
KMC Attavar Performs Rare, Life-Saving Surger...
03-09-25 11:03 pm
04-09-25 01:10 pm
Udupi Correspondent
Udupi Crime, Baby Sale Racket: ಮಂಗಳೂರಿನ ಪ್ರತಿ...
04-09-25 12:25 pm
Bagalur Police, Drugs, Crime: ಬ್ಯುಸಿನೆಸ್ ವೀಸಾ...
03-09-25 05:40 pm
Gold Theft, Mangalore, Airport: ವಿಮಾನ ಪ್ರಯಾಣಿ...
02-09-25 07:09 pm
Valachil, Rape, College, Mangalore Crime: ಇನ್...
02-09-25 04:31 pm