ಬ್ರೇಕಿಂಗ್ ನ್ಯೂಸ್
31-12-21 03:01 pm Mangalore Correspondent ಕರಾವಳಿ
ಮಂಗಳೂರು, ಡಿ.31 : ಹೊಸ ವರ್ಷಕ್ಕೆ ಬೆಂಗಳೂರು, ಮೈಸೂರಿನ ಜನರು ಕರಾವಳಿಯ ಸಮುದ್ರ ತೀರಗಳಿಗೆ ಬರುವುದು ಸಾಮಾನ್ಯ. ಪಣಂಬೂರು, ತಣ್ಣೀರುಬಾವಿ, ಮಲ್ಪೆ ಸೇರಿದಂತೆ ಮಂಗಳೂರು, ಉಡುಪಿಯ ಬೀಚ್ ಗಳಲ್ಲಿ ಪ್ರವಾಸಿಗರು ಗುಂಪು ಕಟ್ಟಿಕೊಂಡು ಬರುತ್ತಾರೆ. ಬೀಚ್ ನಲ್ಲೇ ಗಡದ್ದು ಪಾರ್ಟಿಯನ್ನೂ ಮಾಡುತ್ತಿದ್ದರು. ಆದರೆ, ಈ ಬಾರಿ ಇವೆಲ್ಲದಕ್ಕೂ ಪೊಲೀಸರು ಬ್ರೇಕ್ ಹಾಕಿದ್ದಾರೆ.
ಸಂಜೆ ಏಳು ಗಂಟೆಯಿಂದ ಸಮುದ್ರ ತೀರಗಳಿಗೆ ಹೋಗುವುದನ್ನು ನಿಷೇಧ ಮಾಡಲಾಗಿದೆ. ಮಂಗಳೂರು ಆಸುಪಾಸಿನ ಪಣಂಬೂರು, ತಣ್ಣೀರುಬಾವಿ, ಉಳ್ಳಾಲ ಸೇರಿದಂತೆ ಎಲ್ಲ ಸಮುದ್ರ ತೀರಗಳಿಗೂ ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಿ ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ. ಆದೇಶ ಮಾಡಿದ್ದಾರೆ. ಡಿ.31ರ ಸಂಜೆ ಏಳು ಗಂಟೆಯಿಂದ ಜನವರಿ 1ರ ಬೆಳಗ್ಗೆ 5ರ ವರೆಗೆ ಸಾರ್ವಜನಿಕರು ಬೀಚ್ ಪ್ರವೇಶ ಮಾಡುವುದನ್ನು ನಿರ್ಬಂಧಿಸಿದ್ದಾರೆ.

ಇದೇ ವೇಳೆ, ಮಂಗಳೂರಿನಲ್ಲಿ ಹೊಸ ವರ್ಷಕ್ಕೆ ಇನ್ನಿತರ ಪಾರ್ಟಿ ನಡೆಸುವುದಕ್ಕೂ ನಿರ್ಬಂಧ ಹಾಕಲಾಗಿದೆ. ಹೊಸ ವರ್ಷದ ನೆಪದಲ್ಲಿ ಡಿಜೆ ಹಾಕಿ ಕುಣಿಯುವುದು, ಸಾರ್ವಜನಿಕವಾಗಿ ಪಾರ್ಟಿ ನಡೆಸುವುದಕ್ಕೆ ನಿರ್ಬಂಧ ಇದೆ. ಪಬ್, ಬಾರ್ ಗಳಲ್ಲಿ ಕೂಡ ಜನರಿಗೆ ರಾತ್ರಿ ಹತ್ತು ಗಂಟೆ ವರೆಗೆ ಮಾತ್ರ ಅವಕಾಶ ಇರಲಿದೆ. ಕೊರೊನಾ ನಿರ್ಬಂಧ ಕಾರಣ 50 ಶೇಕಡಾ ಗ್ರಾಹಕರಿಗೆ ಮಾತ್ರ ಅವಕಾಶ ನೀಡುವಂತೆ ಸರಕಾರ ಸೂಚನೆ ನೀಡಿದೆ.

ಈ ಹಿನ್ನೆಲೆಯಲ್ಲಿ ಸಂಜೆಯಾಗುತ್ತಲೇ ಆಯಾ ಭಾಗದ ಪೊಲೀಸರು ಪೆಟ್ರೋಲಿಂಗ್ ನಡೆಸಲು ನಗರ ಪೊಲೀಸ್ ಕಮಿಷನರ್ ಶಶಿಕುಮಾರ್ ಸೂಚನೆ ನೀಡಿದ್ದಾರೆ. ಅದರಂತೆ, ಸಂಜೆ ಆರೂವರೆ ಗಂಟೆ ವೇಳೆಗೆ ಬೀಚ್ ನಲ್ಲಿ ಜನರನ್ನು ಖಾಲಿ ಮಾಡಲು ಪೊಲೀಸರು ಮುಂದಾಗಲಿದ್ದಾರೆ. ಬೆಂಗ್ರೆ, ಪಣಂಬೂರು, ತಣ್ಣೀರುಬಾವಿಯಲ್ಲಿ ಪಣಂಬೂರು ಪೊಲೀಸರು, ಸಸಿಹಿತ್ಲು, ಮೀನಕಳಿಯ, ಚಿತ್ರಾಪುರ ಬೀಚ್ ಗಳಲ್ಲಿ ಸುರತ್ಕಲ್ ಪೊಲೀಸರು ಗಸ್ತು ತಿರುಗಲಿದ್ದಾರೆ. ಉಳ್ಳಾಲದ ಸೋಮೇಶ್ವರ, ಸಮ್ಮರ್ ಸ್ಯಾಂಡ್, ಕೋಟೆಪುರ ಬೀಚ್ ಗಳಲ್ಲಿ ಅಲ್ಲಿನ ಪೊಲೀಸರು ಜನರನ್ನು ಖಾಲಿ ಮಾಡಿಸಲಿದ್ದಾರೆ.
ಹೊಸ ವರ್ಷಕ್ಕೆ ಬ್ರೇಕ್ ಹಾಕಿದ ಹಿನ್ನೆಲೆಯಲ್ಲಿ ಪ್ರವಾಸಿಗರ ಸಂಖ್ಯೆಯೂ ಕಡಿಮೆಯಾಗಿದ್ದು, ಹಗಲಿನಲ್ಲೂ ಬೀಚ್ ಗಳಲ್ಲಿ ಜನರು ಕಡಿಮೆ ಸಂಖ್ಯೆಯಲ್ಲಿದ್ದಾರೆ. ಕೆಲವೊಂದಷ್ಟು ಕಾಲೇಜು ವಿದ್ಯಾರ್ಥಿಗಳು ಮಾತ್ರ ಬೀಚ್ ನಲ್ಲಿ ಕಂಡುಬಂದಿದ್ದಾರೆ.
Beach entry restricted in Mangalore after 7 due to new year curfew in Karnataka. Police have been deployed all over the city as well as Beaches to avoid gathering and parties in Beaches.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
12-07-26 10:13 pm
HK News Staffer
ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಕೊನೆಗೂ ಎನ್ಐ...
12-07-26 02:16 pm
ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ತ್ರಿವಳಿ ಕೊಲೆ ; ತಾ...
11-07-26 08:40 pm
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm