ನಶೆ ಮುಕ್ತ ಭಾರತಕ್ಕಾಗಿ ಎಬಿಬಿಪಿ ಸಹಿ ಅಭಿಯಾನ 

15-09-20 08:11 pm       Mangalore Reporter   ಕರಾವಳಿ

ಡ್ರಗ್ಸ್ ಮಾಫಿಯಾದಲ್ಲಿ ಭಾಗಿಯಾದವರ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಬೇಕೆಂದು ಒತ್ತಾಯಿಸಿ ಎಬಿವಿಪಿ ಸಹಿ ಸಂಗ್ರಹ ಅಭಿಯಾನ ಆರಂಭಿಸಿದ್ದು ಬಂಟ್ವಾಳ ಮಿನಿ ವಿಧಾನಸೌದ ಮುಂದೆ ಚಾಲನೆ ನೀಡಲಾಯಿತು. 

ಮಂಗಳೂರು, ಸೆಪ್ಟೆಂಬರ್ 15: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಬಂಟ್ವಾಳ ತಾಲೂಕು ಘಟಕದ ವತಿಯಿಂದ ನಶೆ ಮುಕ್ತ ಭಾರತಕ್ಕಾಗಿ ಎಬಿವಿಪಿ ಸಂಕಲ್ಪ ಸಹಿ ಸಂಗ್ರಹ ಅಭಿಯಾನ ನಡೆಯಿತು. 

ರಾಷ್ಟ್ರವ್ಯಾಪಿ ಅವ್ಯಾಹತವಾಗಿ ನಡೆಯುತ್ತಿರುವ ಡ್ರಗ್ಸ್ ಮಾಫಿಯಾದಲ್ಲಿ ಭಾಗಿಯಾದವರ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಬೇಕೆಂದು ಒತ್ತಾಯಿಸಿ ಎಬಿವಿಪಿ ಸಹಿ ಸಂಗ್ರಹ ಅಭಿಯಾನ ಆರಂಭಿಸಿದ್ದು ಬಂಟ್ವಾಳ ಮಿನಿ ವಿಧಾನಸೌದ ಮುಂದೆ ಚಾಲನೆ ನೀಡಲಾಯಿತು. 

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಹಾಗೂ ಬಂಟ್ವಾಳ ತಾಲೂಕಿನ ತಹಶೀಲ್ದಾರ್ ರಶ್ಮಿ ಎಸ್ .ಆರ್ ಸಹಿ ಹಾಕುವುದರ ಮೂಲಕ  ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.  ಜಿ ಪಂ ಸದಸ್ಯ ರವೀಂದ್ರ ಕಂಬಳಿ ಸೇರಿದಂತೆ ವಿವಿಧ ಕ್ಷೇತ್ರದ ಗಣ್ಯರು, ತಾಲೂಕು ಕಚೇರಿಗೆ ಆಗಮಿಸಿದ ಸಾರ್ವಜನಿಕರು ತಮ್ಮ ಸಹಿ ಹಾಕುವ ಮೂಲಕ ಅಭಿಯಾನಕ್ಕೆ ಬೆಂಬಲ ಸೂಚಿಸಿದರು.

ಅ.ಭಾ.ವಿ.ಪ ಮಂಗಳೂರು ವಿಭಾಗ ಸಂಘಟನಾ ಕಾರ್ಯದರ್ಶಿಗಳಾದ ಬಸವೇಶ್ ಕೋರಿ, ವಿಭಾಗ ಸಂಚಾಲಕರಾದ ಆಶಿಶ್ ಅಜ್ಜಿಬೆಟ್ಟು, ಹರ್ಷಿತ್ ಕೊಯಿಲ ಅಖಿಲಾಷ್, ದಿನೇಶ್ ಕೊಯಿಲ, ನಿಶ್ಚಿತ್ ಬಂಟ್ವಾಳ್. ಹಿರಿಯ ಕಾರ್ಯಕರ್ತರಾದ ಪ್ರಣಮ್ ರಾಜ್ ಅಜ್ಜಿಬೆಟ್ಟು, ಮನೀಷ್ ರಾಯಿ ಮುಂತಾದವರು ಉಪಸ್ಥಿತರಿದ್ದರು.

Join our WhatsApp group for latest news updates