ಬ್ರೇಕಿಂಗ್ ನ್ಯೂಸ್
03-01-22 01:50 pm Mangaluru Correspondent ಕರಾವಳಿ
Photo credits : Headline Karnataka
ಮಂಗಳೂರು, ಜ.3 : ಉಳ್ಳಾಲದ ಮಾಜಿ ಶಾಸಕ ಬಿ.ಎಂ. ಇದಿನಬ್ಬ ಅವರ ಪುತ್ರ, ಬಿ.ಎಂ. ಬಾಷಾ ಮನೆಗೆ ಎನ್ಐಎ ಅಧಿಕಾರಿಗಳು ಮತ್ತೆ ದಾಳಿ ನಡೆಸಿದ್ದಾರೆ. ಎಸ್ಪಿ ನೇತೃತ್ವದ ಅಧಿಕಾರಿಗಳ ತಂಡವು ಮನೆಯಲ್ಲಿ ಬಾಷಾ ಅವರ ಸೊಸೆ ದೀಪ್ತಿ ಅಲಿಯಾಸ್ ಮರಿಯಂ ಳನ್ನು ವಿಚಾರಣೆ ನಡೆಸುತ್ತಿದ್ದಾರೆ.
ಉಳ್ಳಾಲದ ಮಾಸ್ತಿಕಟ್ಟೆಯಲ್ಲಿರುವ ಬಿ.ಎಂ. ಬಾಷಾ ಅವರ ಮನೆಗೆ ಕಳೆದ ಆಗಸ್ಟ್ ತಿಂಗಳ ಮೊದಲ ವಾರದಲ್ಲಿ ಎನ್ಐಎ ಅಧಿಕಾರಿಗಳು ದಾಳಿ ನಡೆಸಿದ್ದರು. ಎರಡು ದಿನಗಳ ಕಾಲ ವಿಚಾರಣೆ ನಡೆಸಿದ ಬಳಿಕ, ಬಾಷಾ ಅವರ ಕಿರಿಯ ಪುತ್ರ ಅಮರ್ ಅಬ್ದುಲ್ ರೆಹಮಾನ್ ಎಂಬಾತನನ್ನು ಅಧಿಕಾರಿಗಳು ಬಂಧಿಸಿದ್ದರು. ಆ ಸಂದರ್ಭದಲ್ಲಿ ಬಾಷಾ ಅವರ ಇನ್ನೊಬ್ಬ ಪುತ್ರ ಅನಾಸ್ ಮದುವೆಯಾಗಿದ್ದ ದೀಪ್ತಿ ಮರಿಯಂ ಎಂಬವಳ ಬಗೆಗೂ ಸಂಶಯ ಕಂಡುಬಂದಿತ್ತು.
ಮರಿಯಂಳನ್ನು ಎರಡು ದಿನಗಳ ಕಾಲ ವಿಚಾರಣೆ ನಡೆಸಿ, ಕೊನೆಗೆ ಬಂಧನ ಮಾಡದೆ ತೆರಳಿದ್ದರು. ಆದರೆ ದೂರದಲ್ಲಿದ್ದುಕೊಂಡೇ ಆಕೆಯ ಬಗ್ಗೆ ನಿಗಾ ಇಟ್ಟಿದ್ದರು ಎನ್ನಲಾಗಿದೆ. ಇದೀಗ ಮತ್ತೆ ಅದೇ ಮನೆಗೆ ಎನ್ಐಎ ತಂಡ ಆಗಮಿಸಿದ್ದು ದೀಪ್ತಿ ಮರಿಯಂಳನ್ನು ವಿಚಾರಣೆ ನಡೆಸುತ್ತಿದ್ದಾರೆ. ಈ ಬಾರಿ ಆಕೆಯನ್ನು ಬಂಧಿಸುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.
ಮೂಲತಃ ಕೊಡಗು ಮೂಲದ ದೀಪ್ತಿ ಹತ್ತು ವರ್ಷಗಳ ಹಿಂದೆ ದೇರಳಕಟ್ಟೆಯಲ್ಲಿ ಬಿಡಿಎಸ್ ಕಲಿಯುತ್ತಿದ್ದಾಗ ಬಿಎಂ ಬಾಷಾ ಪುತ್ರ ಅನಾಸ್ ಪರಿಚಯವಾಗಿ ಮದುವೆಯಾಗಿದ್ದಳು. ಆನಂತರ ಕಟ್ಟರ್ ಮುಸ್ಲಿಂ ಆಗಿ ಪರಿವರ್ತನೆಯಾಗಿದ್ದ ದೀಪ್ತಿ ತನ್ನ ಹೆಸರನ್ನು ಮರಿಯಂ ಎಂದು ಬದಲಿಸಿಕೊಂಡಿದ್ದಳು. ಅಲ್ಲದೆ, ಉಗ್ರವಾದಿ ಗುಂಪು ಐಸಿಸ್ ಸಂಪರ್ಕ ಪಡೆದಿದ್ದು ಮಂಗಳೂರಿನಲ್ಲಿದ್ದೇ ಜಮ್ಮು ಕಾಶ್ಮೀರದ ಲಿಂಕ್ ಹೊಂದಿದ್ದಳು ಎನ್ನಲಾಗಿತ್ತು. ಐಸಿಸ್ ನೆಟ್ವರ್ಕ್ ಗೆ ಯುವಕರನ್ನು ಸೇರಿಸುವ ಜಾಲದಲ್ಲಿ ಈಕೆಯೂ ಇದ್ದಾಳೆ ಎನ್ನುವ ಶಂಕೆಯಲ್ಲಿ ಎನ್ಐಎ ಅಧಿಕಾರಿಗಳು ತನಿಖೆ ನಡೆಸಿದ್ದರು.
Mangalore NIA Raids house of former MLA BM Idinabba for the second time in Ullal, chances of arresting Deepthi Marla. In the last raid Basha son Ammar was arrested on the charges of having links with ISIS. Deepthi who is said to be a Hindu was converted to Islam and was actively involved with ISIS activities supporting them online.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
21-04-25 02:13 pm
HK News Desk
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm