ಬ್ರೇಕಿಂಗ್ ನ್ಯೂಸ್
05-01-22 01:39 pm Mangalore Correspondent ಕರಾವಳಿ
ಮಂಗಳೂರು, ಜ.4 : ಕಳೆದ ಅಕ್ಟೋಬರ್ ತಿಂಗಳಲ್ಲಿ ಕೌಟುಂಬಿಕ ಕಲಹದಿಂದ ಮನ ನೊಂದು ಬೇರ್ಪಟ್ಟಿದ್ದ ಸತಿ-ಪತಿ ಹಾಗೂ ಮಕ್ಕಳು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಮಧ್ಯಸ್ಥಿಕೆಯಲ್ಲಿ ಮತ್ತೆ ಒಂದಾಗಿದ್ದಾರೆ.
ಕೌಟುಂಬಿಕ ಸಮಸ್ಯೆಗಳಿಂದ ಮನನೊಂದು ಬೇರೆಯಾಗಿದ್ದ ನಾರಾಯಣ್ (48) (ಹೆಸರು ಬದಲಿಸಲಾಗಿದೆ) ಹಾಗೂ ಸರಳಾ (46) (ಹೆಸರು ಬದಲಾಯಿಸಲಾಗಿದೆ) ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದ ನಡೆಸಿದ ಕೌನ್ಸೆಲಿಂಗ್‌ನಲ್ಲಿ ಸಂಸಾರದ ಜವಾಬ್ದಾರಿ ಅರಿತು ಮತ್ತೆ ಸತಿ-ಪತಿಯಾಗಲು ಒಪ್ಪಿದ್ದಾರೆ.
ದಂಪತಿ ಮಂಗಳೂರಿನ ಮರಕಡದ ನಿವಾಸಿಗಳಾಗಿದ್ದು ಕೌಟುಂಬಿಕ ಕಲಹದಿಂದ ನೊಂದು ಪರಸ್ಪರ ಬೇರೆಯಾಗಲು ನಿರ್ಧರಿಸಿದ್ದರು. ನಾರಾಯಣ್ ಬಿ ಫಾರ್ಮ್ ಓದಿಕೊಂಡು ಮರಕಡದಲ್ಲಿ ಮೆಡಿಕಲ್ ಶಾಪ್ ಹೊಂದಿದ್ದರು. ಅದರ ಪಕ್ಕದಲ್ಲೇ ಆಯುರ್ವೇದಿಕ್ ಕ್ಲಿನಿಕ್ ನಡೆಸುತ್ತಿದ್ದ ಪತ್ನಿ ಸರಳಾ ತಾನು ದುಡಿದ ಹಣವನ್ನು ಇಬ್ಬರು ಮಕ್ಕಳ ಹೆಸರಿನಲ್ಲಿ ಫಿಕ್ಸೆಡ್ ಡಿಪಾಸಿಟ್ ಇರಿಸಿದ್ದರು. ಕೌಟುಂಬಿಕ ಜೀವನದಲ್ಲಿ ಏರ್ಪಟ್ಟ ಘರ್ಷಣೆಗಳಿಂದಾಗಿ ಇಬ್ಬರ ನಡುವೆ ತೀವ್ರ ಭಿನ್ನಾಭಿಪ್ರಾಯ ತಲೆದೋರಿತ್ತು. ಇದರಿಂದ ಕಠಿಣ ನಿರ್ಧಾರ ಕೈಗೊಂಡ ಪತಿ - ಪತ್ನಿ ಪರಸ್ಪರ ದೂರವಾಗಲು ನಿರ್ಧರಿಸಿದ್ದರು. ಸರಳಾ ಪತಿಯಿಂದ ಪ್ರತ್ಯೇಕವಾಗಿ ಉಡುಪಿ ಜಿಲ್ಲೆಯ ಸಿದ್ಧಾಪುರದಲ್ಲಿ ಮಕ್ಕಳೊಂದಿಗೆ ವಾಸವಿದ್ದರು. ಈ ನಡುವೆ, ಜೀವನ ನಿರ್ವಹಣೆ, ಮಕ್ಕಳ ಭವಿಷ್ಯ ಹಾಗೂ ಅವರ ಶಿಕ್ಷಣಕ್ಕೆ ದಾರಿ ತೋರುವಂತೆ ಕೋರಿ ದಕ್ಷಿಣ ಕನ್ನಡ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಕ್ಕೆ ಅರ್ಜಿ ಸಲ್ಲಿಸಿದ್ದರು.
ಅರ್ಜಿಯನ್ನು ಪರಿಶೀಲಿಸಿದ ಪ್ರಾಧಿಕಾರವು ನಾರಾಯಣ್ ಹಾಗೂ ಸರಳಾ ಅವರನ್ನು ಮಂಗಳೂರಿನ ನ್ಯಾಯಾಲಯದ ಸಂಕೀರ್ಣದಲ್ಲಿರುವ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಕಚೇರಿಗೆ ಕರೆದು, ಅಲ್ಲಿ ಅವರಿಗೆ ನಾಲ್ಕು ಬಾರಿ ಕೌನ್ಸಲಿಂಗ್‌ಗೆ ಒಳಪಡಿಸಿತ್ತು. ಈ ಸಂದರ್ಭದಲ್ಲಿ ಪತಿ- ಪತ್ನಿ ಇಬ್ಬರೂ ಒಟ್ಟಿಗೆ ಬಾಳುವಂತೆ ಸಲಹೆ ನೀಡಿ, ಮನಃ ಪರಿವರ್ತನೆಗೆ ಸೂಚಿಸಲಾಯಿತು. ನೆಮ್ಮದಿಯ ಜೀವನಕ್ಕಾಗಿ ಇರುವ ದಾರಿಗಳು, ಸೌಲಭ್ಯಗಳು, ಇಬ್ಬರು ಹೆಣ್ಣು ಮಕ್ಕಳ ಭವಿಷ್ಯ ಹಾಗೂ ಅವರ ಶಿಕ್ಷಣ ಸೇರಿದಂತೆ ವಿವಿಧ ವಿಚಾರಗಳ ಬಗ್ಗೆ ತಿಳಿಸಿಕೊಡಲಾಗಿತ್ತು. ಕೌನ್ಸಲಿಂಗ್ ಇಬ್ಬರ ಮೇಲೂ ಪರಿಣಾಮ ಬೀರಿದ್ದು, ವಿವಾಹ ವಾರ್ಷಿಕೋತ್ಸವವಾದ ಜ.4 (ಮಂಗಳವಾರ) ಪರಿತ್ಯಕ್ತರಾಗಿದ್ದ ಇಬ್ಬರೂ ಮತ್ತೆ ಕೈಹಿಡಿದು ಅನ್ಯೋನ್ಯವಾಗಿ ಜೀವನ ಸಾಗಿಸಲು ಮುಂದಾಗಿದ್ದಾರೆ.
ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಆದ ಮುರಲೀಧರ ಪೈ ಬಿ. ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಪೃಥ್ವಿರಾಜ್ ವರ್ಣೇಕರ್ ಈ ದಂಪತಿಗೆ ಪರಸ್ಪರ ಕೌನ್ಸೆಲಿಂಗ್ ನಡೆಸಿ, ಬೇರೆಯಾಗಿದ್ದ ಪತಿ-ಪತ್ನಿಯನ್ನು ಪ್ರಕರಣ ದಾಖಲಾದ ಅತಿ ಕಡಿಮೆ ಅವಧಿಯಲ್ಲಿ ಒಂದುಗೂಡಿಸಿದ್ದಾರೆ.
A couple which was under separation due to family issues since October 2021, were reunited due to the intervention of District Legal Services Authority on Tuesday, January 4, 2022. Narayan (48) (name changed) and Sarala (46) (name changed) are the estranged couple brought together again by the efforts of the authority. Both are residents of Marakada in the city. They had decided to separate due to some differences between them.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 10:33 pm
Mangalore Correspondent
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm