ಬ್ರೇಕಿಂಗ್ ನ್ಯೂಸ್
19-01-22 11:04 pm Mangalore Correspondent ಕರಾವಳಿ
ಮಂಗಳೂರು, ಜ.19 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ವ್ಯಾಕ್ಸಿನ್ ಮೊದಲ ಡೋಸ್ ಶೇ. 100ರಷ್ಟು ಪೂರ್ಣಗೊಳ್ಳದ ಬಗ್ಗೆ ಮುಖ್ಯಮಂತ್ರಿಗಳು ಕಳವಳ ವ್ಯಕ್ತಪಡಿಸಿದ್ದು, ಅಧಿಕಾರಿಗಳು ಲಸಿಕೆ ನೀಡುವ ಕಾರ್ಯಕ್ಕೆ ಹೆಚ್ಚಿನ ಗಮನ ನೀಡುತ್ತಿಲ್ಲ. ತಳಮಟ್ಟದಲ್ಲಿ ಅಭಿಯಾನ, ಜಾಗೃತಿ ಹಮ್ಮಿಕೊಂಡು ಜನವರಿ ತಿಂಗಳ ಅಂತ್ಯದೊಳಗೆ ಮೊದಲ ಡೋಸ್ ಪೂರ್ಣಗೊಳಿಸಲು ಸೂಚಿಸಿದ್ದಾರೆ. ಆ ನಿಟ್ಟಿನಲ್ಲಿ ಸಂಬಂಧಿಸಿದ ಅಧಿಕಾರಿ, ಸಿಬ್ಬಂದಿಗಳು ಲಸಿಕಾ ಅಭಿಯಾನವನ್ನು ತೀವ್ರಗೊಳಿಸುವಂತೆ ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ತಾಕೀತು ಮಾಡಿದ್ದಾರೆ.
ಬುಧವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವರ್ಚ್ಯೂವಲ್ ಮಾಧ್ಯಮದ ಮೂಲಕ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಸಭೆ ನಡೆಸಿದರು.
ಮೊದಲ ಡೋಸ್ ನೀಡಿಕೆಯಲ್ಲಿ ಜಿಲ್ಲೆ ಶೇ. 100ರ ಗುರಿ ತಲುಪಲೇಬೇಕು. ಅದಕ್ಕಾಗಿ ಆಶಾ, ಅಂಗನವಾಡಿ, ಆರೋಗ್ಯ ಕಾರ್ಯಕರ್ತರು, ಬಿಲ್ ಕಲೆಕ್ಟರ್ಗಳು, ನೀರುಗಂಟಿಗಳು, ಗ್ರಾಮ ಪಂಚಾಯತ್ ಅಧ್ಯಕ್ಷರು, ಸದಸ್ಯರು, ಪಂಚಾಯತ್ ಅಭಿವೃದ್ದಿ ಅಧಿಕಾರಿಗಳು, ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು, ಜನ ಪ್ರತಿನಿಧಿಗಳು, ಆರೋಗ್ಯ ನಿರೀಕ್ಷಕರು, ವೈದ್ಯಾಧಿಕಾರಿಗಳೊಂದಿಗೆ ಸಂಬಂಧಿಸಿದವರೆಲ್ಲರೂ ಶ್ರಮ ವಹಿಸಿ ಕೆಲಸ ಮಾಡಬೇಕು ಎಂದು ಜಿಲ್ಲಾಧಿಕಾರಿ ಹೇಳಿದರು.
ಮುಂದಿನ ದಿನಗಳಲ್ಲಿ ಜಿಲ್ಲೆಯಲ್ಲಿ 3-4 ಸಾವಿರ ಕೋವಿಡ್ ಪ್ರಕರಣಗಳು ವರದಿಯಾಗುವ ಸಾಧ್ಯತೆಗಳು ಇವೆ. ಆದರೆ ಗಾಬರಿ ಪಡುವ ಅಗತ್ಯವಿಲ್ಲ. ಅದಕ್ಕೆ ನಾವು ಸಿದ್ದವಾಗಬೇಕು, ಜಿಲ್ಲೆಯ ಶೇ.96 ಶೇ. ಜನರಿಗೆ ಲಸಿಕೆ ನೀಡಿರುವ ಕಾರಣ ಕೋವಿಡ್ ಅಥವಾ ಓಮಿಕ್ರಾನ್ ಸೋಂಕು ಕಂಡುಬಂದರೂ ಅವರಲ್ಲಿ ಆಸ್ಪತ್ರೆಗೆ ದಾಖಲಾಗುವ ಸ್ಥಿತಿ ಕಡಿಮೆ ಇರುತ್ತದೆ. ಕೋಂ ಆರ್ಬಿಟ್ಗಳಿಗೂ ಲಸಿಕೆ ಅತ್ಯಂತ್ಯ ಮುಖ್ಯವಾಗಿದೆ, ವ್ಯಾಕ್ಸಿನ್ ಪಡೆಯದೇ ಬಾಕಿ ಉಳಿದ ಶೇ.4ರಷ್ಟು ಜನರೇ ಕೋವಿಡ್ ಹಾಗೂ ಅದರ ರೂಪಾಂತರಿ ಓಮಿಕ್ರಾನ್ನಿಂದ ಬಾಧೆಗೆ ಒಳಗಾಗಿ ತೊಂದರೆ ಅನುಭವಿಸುತ್ತಾರೆ. ಆದುದರಿಂದ ವೈಯಕ್ತಿಕವಾಗಿ ವ್ಯಾಕ್ಸಿನ್ ನೀಡಲು ಹೆಚ್ಚಿನ ಗಮನ ಹರಿಸಬೇಕು, ವ್ಯಾಕ್ಸಿನ್ ಪಡೆಯದವರನ್ನು ಪತ್ತೆ ಹಚ್ಚಲು ಪ್ರತಿ ಮನೆ ಮನೆಯನ್ನೂ ಪರಿಶೀಲಿಸಬೇಕು. ಜನರಿಗೆ ಅರ್ಥವಾಗುವ ರೀತಿಯಲ್ಲಿ ಜಾಗೃತಿ ಮೂಡಿಸಿ, ಲಸಿಕೆ ಕೊಡಿಸಬೇಕು, ಪ್ರಾಥಮಿಕ ಆರೋಗ್ಯ ಕೇಂದ್ರಗಳ ವೈದ್ಯಾಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಲಸಿಕೆ ಪಡೆಯದವರನ್ನು ಗುರುತಿಸಿ ಅವರಿಗೆ ವ್ಯಾಕ್ಸಿನ್ ನೀಡುವ ಮೂಲಕ ಶೇ. 100ರಷ್ಟು ಗುರಿ ಸಾಧಿಸಬೇಕು, ಇದಕ್ಕಾಗಿ ಫೀಲ್ಡ್ ಗೆ ಇಳಿದು ಕೆಲಸ ಮಾಡಬೇಕು, ಇಲ್ಲದಿದ್ದಲ್ಲೀ ನಿದ್ಯಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಲಸಿಕೆ ಪಡೆಯಲು ಹೆಚ್ಚಿನ ಪ್ರತಿರೋಧ ವ್ಯಕ್ತವಾಗುವೆಡೆ ತಾವೇ ಖುದ್ದಾಗಿ ಭೇಟಿ ನೀಡುವುದಾಗಿ ತಿಳಿಸಿದ ಜಿಲ್ಲಾಧಿಕಾರಿ, 15 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಯುದ್ದೋಪಾದಿಯಲ್ಲಿ ಲಸಿಕೆ ಕೊಡಿಸಬೇಕು. ಜನ ಪ್ರತಿನಿಧಿಗಳು ಈ ಅಭಿಯಾನಕ್ಕೆ ಕೈ ಜೋಡಿಸಬೇಕು, ಕ್ಷೇತ್ರದ ಅಭಿವೃದ್ಧಿಗೆ ಆಯಾ ಪ್ರದೇಶವಾರು ಸಂಪೂರ್ಣ ಲಸಿಕೆ ಕೊಡಿಸುವುದು ಸಂಬಂಧಿಸಿದ ಜನಪ್ರತಿನಿಧಿಗಳ ಜವಬ್ದಾರಿಯಾಗಿದೆ. ಆಯಾ ಪ್ರದೇಶಗಳ ಧಾರ್ಮಿಕ ಮುಖಂಡರನ್ನು ಈ ಕಾರ್ಯಕ್ಕೆ ಆಹ್ವಾನಿಸಬೇಕು. ತಾಲೂಕು ಮಟ್ಟದಲ್ಲಿ ಈ ಪ್ರಕ್ರಿಯೆಗೆ ವಾಹನಗಳ ಅಗತ್ಯವಿದ್ದರೆ ತಹಶಿಲ್ದಾರ್ ಮೂಲಕ ಪಡೆದುಕೊಳ್ಳುವಂತೆ ಅವರು ತಿಳಿಸಿದರು.
ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ರೀಕ್ರಿಯೇಷನ್ ಕ್ಲಬ್ಗಳನ್ನು ಬಂದ್ ಮಾಡಲಾಗಿದೆ. ಒಂದು ವೇಳೆ ಅಲ್ಲಿ ಚಟುವಟಿಕೆಗಳು ಕಂಡುಬಂದರೆ, ಪಂಚಾಯತ್ ಅಭಿವೃದ್ದಿ ಅಧಿಕಾರಿಗಳು ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರ ಮೇಲೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದರು.
ಜಿಲ್ಲೆಯ ಶಾಲೆಗಳಲ್ಲಿ 5 ಕ್ಕಿಂತ ಹೆಚ್ವು ಕೋವಿಡ್ ಪ್ರಕರಣ ದಾಖಲಾದರೆ ಆ ಶಾಲೆಗಳನ್ನು ಒಂದು ವಾರದ ಮಟ್ಟಿಗೆ ಬಂದ್ ಮಾಡಬೇಕು, ಶಾಲೆಯನ್ನು ಸಂಪೂರ್ಣವಾಗಿ ಸ್ಯಾನಿಟೈಸ್ ಮಾಡಬೇಕು. ತದನಂತರ ಮಕ್ಕಳಲ್ಲಿ ಆತ್ಮವಿಶ್ವಾಸ ತುಂಬಿ ನಂತರ ಶಾಲೆ ಆರಂಭಿಸಬೇಕು. ಆದರೆ ಜಿಲ್ಲೆಯಾದ್ಯಂತ ಶಾಲೆಗೆ ರಜೆ ಘೋಷಿಸುವುದಿಲ್ಲ ಎಂದ ಜಿಲ್ಲಾಧಿಕಾರಿ, ಕೌಟುಂಬಿಕ ಕಾರ್ಯಕ್ರಮಗಳು, ಮದುವೆ, ಹರಕೆ ಇತ್ಯಾದಿ ಪೂರ್ವ ನಿರ್ಧರಿತ ಕಾರ್ಯಕ್ರಮಗಳನ್ನ ಮಾರ್ಗಸೂಚಿಗಳಂತೆ ನಿರ್ವಹಿಸಬೇಕು, ಗ್ರಾಮ ಮಟ್ಟದಲ್ಲಿ ಬೃಹತ್ ಜಾತ್ರೆ, ಉರುಸ್ ಗಳಿಗೆ ಅನುಮತಿಯಿಲ್ಲ. ಆಯಾ ದೇವಸ್ಥಾನಗಳ ಸಮಿತಿಯವರು ಮಾತ್ರ ಸೇರಿ ಜಾತ್ರೆ ಅಥವಾ ಉರೂಸ್ ಮಾಡಬಹುದು, ಅದನ್ನು ಉಲ್ಲಂಘಿಸಿದ್ದಲ್ಲೀ ಪ್ರಕರಣ ದಾಖಲಿಸಲಾಗುವುದು ಎಂದು ತಿಳಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕಿಶೋರ್ ಕುಮಾರ್ ಸೇರಿದಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿದ್ದರು. ಜಿಲ್ಲೆಯ ಸಹಾಯಕ ಆಯುಕ್ತರು, ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಚ್ಯೂವಲ್ ಸಭೆಯಲ್ಲಿ ಭಾಗವಹಿಸಿದ್ದರು.
Mangalore Dc Rajendra Kumar orders for strict vaccination of first dose to all task force.
10-05-25 10:40 pm
HK News Desk
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
U T Khader, Dinesh Gundurao, Suhas Shetty Mur...
08-05-25 07:50 pm
10-05-25 11:05 pm
HK News Desk
ಎಸ್-400 ಏರ್ ಡಿಫೆನ್ಸ್ ಸಿಸ್ಟಮ್ ಮತ್ತು ಬ್ರಹ್ಮೋಸ್...
10-05-25 09:24 pm
India and Pakistan, Ceasefire: ಮೂರೇ ದಿನದಲ್ಲಿ...
10-05-25 08:28 pm
India-Pakistan war: ಭಾರತ - ಪಾಕಿಸ್ತಾನ ತಕ್ಷಣದಿಂ...
10-05-25 07:25 pm
Indian Military, Pakistan : ತನ್ನ ಮೂರು ವಾಯುನೆಲ...
10-05-25 01:58 pm
10-05-25 07:10 pm
Mangalore Correspondent
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm