ಕೋವಿಡ್ ಸೋಂಕಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಲ್ವರು ಬಲಿ, 667 ಮಂದಿಗೆ ಸೋಂಕು 

25-01-22 10:30 pm       Mangalore Correspondent   ಕರಾವಳಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳವಾರ ಕೋವಿಡ್‌ ಸೋಂಕಿಗೆ ನಾಲ್ಕು ಮಂದಿ ಬಲಿಯಾಗಿದ್ದಾರೆ. ಇಬ್ಬರು ಮಂಗಳೂರು ತಾಲೂಕು ಮತ್ತು ಪುತ್ತೂರು ಮತ್ತು ಬಂಟ್ವಾಳ ತಾಲೂಕಿಗೆ ಇನ್ನಿಬ್ಬರು ಇದ್ದಾರೆ. ಮೃತ ನಾಲ್ವರೂ ಪುರುಷರು.‌

ಮಂಗಳೂರು, ಜ.25 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳವಾರ ಕೋವಿಡ್‌ ಸೋಂಕಿಗೆ ನಾಲ್ಕು ಮಂದಿ ಬಲಿಯಾಗಿದ್ದಾರೆ. ಇಬ್ಬರು ಮಂಗಳೂರು ತಾಲೂಕು ಮತ್ತು ಪುತ್ತೂರು ಮತ್ತು ಬಂಟ್ವಾಳ ತಾಲೂಕಿಗೆ ಇನ್ನಿಬ್ಬರು ಇದ್ದಾರೆ. ಮೃತ ನಾಲ್ವರೂ ಪುರುಷರು.‌

ಮಂಗಳವಾರ 667 ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ಕೋವಿಡ್ ಪಾಸಿಟಿವಿಟಿ ದರ ಶೇ.10.04 ದಾಖಲಾಗಿದೆ. ಅಲ್ಲದೆ, 773 ಮಂದಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ.

ಜಿಲ್ಲೆಯಲ್ಲಿ ಈವರೆಗೆ 1,29,046 ಪಾಸಿಟಿವ್ ಪ್ರಕರಣ ದಾಖಲಾಗಿದೆ. ಸೋಂಕಿತರ ಪೈಕಿ ಒಟ್ಟು 1,21,980 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. 1,727 ಮಂದಿ ಕೋವಿಡ್‌ಗೆ ಬಲಿಯಾಗಿದ್ದಾರೆ. ಸದ್ಯ 5,345 ಸಕ್ರಿಯ ಪ್ರಕರಣವಿದೆ.

ದ.ಕ.ಜಿಲ್ಲೆಯಲ್ಲಿ ಕೋವಿಡ್ ಸೋಂಕಿನ ಪ್ರಮಾಣಕ್ಕೆ ಸಂಬಂಧಿಸಿದಂತೆ ಮಂಗಳವಾರ 1 ಕಂಟೈನ್ಮೆಂಟ್ ವಲಯವನ್ನು ಗುರುತಿಸಲಾಗಿದೆ. ವೇಣೂರಿನ ಶಾಲೆಯೊಂದರಲ್ಲಿ 74 ಮಂದಿ ವಿದ್ಯಾರ್ಥಿಗಳನ್ನು ಕೋವಿಡ್ ಪರೀಕ್ಷೆ ಮಾಡಲಾಗಿದ್ದು, ಆ ಪೈಕಿ 74 ಮಂದಿಯಲ್ಲಿ ಕೋವಿಡ್ ಸೋಂಕು ಕಾಣಿಸಿಕೊಂಡಿವೆ.

ಕೋವಿಡ್ ನಿಯಮ ಉಲ್ಲಂಘಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ 94,177 ಪ್ರಕರಣ ದಾಖಲಿಸಿ, 1,13,94,080 ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಪ್ರಕಟನೆ ತಿಳಿಸಿದೆ.

Dakahina Kannada reports 667 covid cases with Four death as on 25 Jan 2022.