ಬ್ರೇಕಿಂಗ್ ನ್ಯೂಸ್
30-01-22 02:00 pm Mangalore Correspondent ಕರಾವಳಿ
ಮಂಗಳೂರು, ಜ.30 : ವೆನ್ಲಾಕ್ ಆಸ್ಪತ್ರೆಯಲ್ಲಿ ರೋಗಿಯನ್ನು ನಿರ್ಲಕ್ಷಿಸಿ ವಿಡಿಯೋ ಗೇಮ್ ಆಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ ಕೆಎಂಸಿ ಆಸ್ಪತ್ರೆಯ ಸ್ನಾತಕೋತ್ತರ ವಿದ್ಯಾರ್ಥಿಗೆ ಅಮಾನತು ಶಿಕ್ಷೆ ನೀಡಲಾಗಿದೆ.
ಫೇಸ್ಬುಕ್ ನಲ್ಲಿ ವಿಡಿಯೋ ವೈರಲ್ ಆಗಿರುವ ಹಿನ್ನೆಲೆಯಲ್ಲಿ ವೆನ್ಲಾಕ್ ಆಸ್ಪತ್ರೆ ವೈದ್ಯಕೀಯ ಅಧೀಕ್ಷಕರು ತನಿಖೆ ನಡೆಸಿದ್ದು ಆಸ್ಪತ್ರೆಯಲ್ಲಿ ಕ್ಲಿನಿಕಲ್ ಸೇವೆ ನೀಡುತ್ತಿದ್ದ ಕೆಎಂಸಿ ಆಸ್ಪತ್ರೆಯ ಸ್ನಾತಕೋತ್ತರ ವಿದ್ಯಾರ್ಥಿ ವಿಡಿಯೋ ಗೇಮ್ ಆಡುತ್ತಿದ್ದುದಾಗಿ ತಿಳಿದುಬಂದಿದೆ. ಕರ್ತವ್ಯ ನಿರ್ಲಕ್ಷ್ಯದ ಬಗ್ಗೆ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ ಎಂದು ವೆನ್ಲಾಕ್ ವೈದ್ಯಕೀಯ ಅಧೀಕ್ಷಕ ಸದಾಶಿವ ಶಾನುಭೋಗ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜ.23 ರಂದು ರಾತ್ರಿ 11 ಗಂಟೆಗೆ ಬಂಟ್ವಾಳ ತಾಲೂಕಿನ ವಗ್ಗ ನಿವಾಸಿ ವಿಜಯ ಆಚಾರ್ಯ ಎಂಬ ವ್ಯಕ್ತಿಯನ್ನು ಕುಸಿದು ಬಿದ್ದು ಪ್ರಜ್ಞೆ ತಪ್ಪಿದ ಸ್ಥಿತಿಯಲ್ಲಿ ವೆನ್ಲಾಕ್ ಆಸ್ಪತ್ರೆಗೆ ಕರೆತರಲಾಗಿತ್ತು. ಆದರೆ ಆಸ್ಪತ್ರೆ ಸಿಬಂದಿ ನಿರ್ಲಕ್ಷ್ಯ ವಹಿಸಿದ್ದಲ್ಲದೆ ಕಂಪ್ಯೂಟರ್ ನಲ್ಲಿ ವಿಡಿಯೋ ಗೇಮ್ ಆಡುತ್ತಾ ಸಮಯ ಕಳೆದಿದ್ದ ವಿಡಿಯೋ ವೈರಲ್ ಆಗಿತ್ತು. ರೋಗಿ ಚಿಂತಾಜನಕ ಸ್ಥಿತಿಯಲ್ಲಿದ್ದರೂ ಆಸ್ಪತ್ರೆ ಸಿಬಂದಿ ನಿರ್ಲಕ್ಷ್ಯ ತೋರಿದ್ದರಿಂದ ವ್ಯಕ್ತಿಯ ಸ್ಥಿತಿ ಬಿಗಡಾಯಿಸಿತ್ತು. ಮುಂಜಾವಿನ ನಾಲ್ಕು ಗಂಟೆ ಸುಮಾರಿಗೆ ಅವರನ್ನು ಬಳಿಕ ಕಂಕನಾಡಿ ಆಸ್ಪತ್ರೆಗೆ ರವಾನಿಸಲಾಗಿತ್ತು. ಅಂದಿನ ನಿರ್ಲಕ್ಷ್ಯದಿಂದಾಗಿ ರೋಗಿಯ ಸ್ಥಿತಿ ಇನ್ನೂ ಚೇತರಿಕೆ ಆಗಿಲ್ಲ. ಕೋಮಾ ಸ್ಥಿತಿಯಲ್ಲಿದ್ದಾರೆ ಎಂದು ವಿಜಯ ಕುಮಾರ್ ಸಂಬಂಧಿಕರು ತಿಳಿಸಿದ್ದಾರೆ.
A post graduate medical student of a private college was suspended from the college after he was found playing videogame when he was assigned for clinicals at Government Wenlock Hospital in Mangaluru. A video of him playing videogame had gone viral in social media.
18-12-25 11:05 pm
HK News Desk
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm