ಬ್ರೇಕಿಂಗ್ ನ್ಯೂಸ್
30-01-22 05:44 pm Mangalore Correspondent ಕರಾವಳಿ
ಮಂಗಳೂರು, ಜ.30 : ಕರಾವಳಿ ಜಿಲ್ಲೆಗಳ ಏಕೈಕ ಅಲ್ಪಸಂಖ್ಯಾತ ಕಾಂಗ್ರೆಸ್ ಶಾಸಕ ಯು.ಟಿ. ಖಾದರ್ ಅವರನ್ನು ಶಾಸಕಾಂಗ ಪಕ್ಷದ ಉಪ ನಾಯಕನಾಗಿ ಕಾಂಗ್ರೆಸ್ ಹೈಕಮಾಂಡ್ ನೇಮಕ ಮಾಡಿದೆ.
ಹಿರಿಯ ಕಾಂಗ್ರೆಸ್ ಮುಖಂಡ, ಅಲ್ಪಸಂಖ್ಯಾತ ವರ್ಗದ ಸಿ.ಎಂ.ಇಬ್ರಾಹಿಂ ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿರುವ ಹಿನ್ನೆಲೆಯಲ್ಲಿ ಮತ್ತೊಬ್ಬ ಅಲ್ಪಸಂಖ್ಯಾತ ಮುಖಂಡನನ್ನು ಪಕ್ಷದ ಮುಂಚೂಣಿ ಹುದ್ದೆಗೆ ನೇಮಕ ಮಾಡಲಾಗಿದೆ. ಮಂಗಳೂರು ಕ್ಷೇತ್ರದಲ್ಲಿ ಸತತ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಯು.ಟಿ.ಖಾದರ್, ಸಿದ್ದರಾಮಯ್ಯ ಸರಕಾರದಲ್ಲಿ ಆರೋಗ್ಯ ಮತ್ತು ಆಹಾರ ಸಚಿವರಾಗಿ ಗಮನ ಸೆಳೆದಿದ್ದರು.
ಕಾಂಗ್ರೆಸ್ ಶಾಸಕಾಂಗ ಪಕ್ಷದ ಉಪ ನಾಯಕನಾಗಿ ನೇಮಿಸಿ, ಪಕ್ಷದ ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಆದೇಶ ಮಾಡಿದ್ದಾರೆ. ವಿಧಾನ ಪರಿಷತ್ ಸಭಾ ನಾಯಕನಾಗಿ ಬಿ.ಕೆ.ಹರಿಪ್ರಸಾದ್ ಅವರನ್ನು ನೇಮಕ ಮಾಡಿದ್ದಕ್ಕೆ ಮುನಿಸಿಕೊಂಡು ಸಿ.ಎಂ.ಇಬ್ರಾಹಿಂ ಪಕ್ಷ ಬಿಡುತ್ತಿದ್ದಾರೆ ಎನ್ನಲಾಗಿತ್ತು. ಸಿದ್ದರಾಮಯ್ಯ ನಂಬಿಕೊಂಡು ಪಕ್ಷಕ್ಕೆ ಬಂದೆ, ಈಗ ನನ್ನನ್ನು ಕಡೆಗಣಿಸಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ಅಲ್ಪಸಂಖ್ಯಾತರೇ ಶಕ್ತಿ. ಅವರಿಲ್ಲದೆ ಪಕ್ಷ ಇಲ್ಲ ಎಂದು ಹೇಳುವ ಮೂಲಕ ಅಲ್ಪಸಂಖ್ಯಾತರನ್ನು ಕಾಂಗ್ರೆಸ್ ಕಡೆಗಣಿಸಿದೆ ಅನ್ನುವ ಸಂದೇಶವನ್ನು ಸಿಎಂ ಇಬ್ರಾಹಿಂ ನೀಡಿದ್ದರು.
ಇಬ್ರಾಹಿಂ ಠಕ್ಕರ್ ಕೊಟ್ಟಿದ್ದಕ್ಕೆ ಮತ್ತೊಬ್ಬ ಪಕ್ಷ ನಿಷ್ಠ ಅಲ್ಪಸಂಖ್ಯಾತ ಮುಖಂಡನನ್ನು ಪಕ್ಷದ ಉನ್ನತ ಹುದ್ದೆಗೆ ಏರಿಸಲಾಗಿದೆ. ಶಾಸಕಾಂಗ ಪಕ್ಷದ ನಾಯಕ ಮತ್ತು ಪ್ರತಿಪಕ್ಷ ನಾಯಕನಾಗಿ ಸಿದ್ದರಾಮಯ್ಯ ಅವರೇ ಇದ್ದಾರೆ. ಈಗ ಚುನಾವಣೆ ಹತ್ತಿರ ಬರುತ್ತಿರುವುದರಿಂದ ಉಪ ನಾಯಕನ ಸ್ಥಾನಕ್ಕೆ ಖಾದರ್ ಅವರನ್ನು ನೇಮಕ ಮಾಡಲಾಗಿದೆ. ಡ್ಯಾಮೇಜ್ ಕಂಟ್ರೋಲ್ ಮಾಡುವುದಕ್ಕಾಗಿ ಖಾದರ್ ಅವರಿಗೆ ಭಡ್ತಿ ನೀಡಲಾಗಿದೆ ಎನ್ನುವ ಮಾತು ಕೇಳಿಬಂದಿದೆ. ಕರಾವಳಿ ಮೂಲದವರೇ ಆಗಿರುವ ಬಿಕೆ ಹರಿಪ್ರಸಾದ್ ಅವರನ್ನು ಇತ್ತೀಚೆಗೆ ವಿಧಾನ ಪರಿಷತ್ ಸಭಾ ನಾಯಕರಾಗಿ ನೇಮಕ ಮಾಡಲಾಗಿತ್ತು.
The Congress high command has appointed former minister and current MLA U T Khader as the deputy leader of Congress Legislative party in Karnataka Assembly. An order to this effect was sent by K C Venugopal, general secretary of the party.
10-05-25 10:40 pm
HK News Desk
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
U T Khader, Dinesh Gundurao, Suhas Shetty Mur...
08-05-25 07:50 pm
10-05-25 11:05 pm
HK News Desk
ಎಸ್-400 ಏರ್ ಡಿಫೆನ್ಸ್ ಸಿಸ್ಟಮ್ ಮತ್ತು ಬ್ರಹ್ಮೋಸ್...
10-05-25 09:24 pm
India and Pakistan, Ceasefire: ಮೂರೇ ದಿನದಲ್ಲಿ...
10-05-25 08:28 pm
India-Pakistan war: ಭಾರತ - ಪಾಕಿಸ್ತಾನ ತಕ್ಷಣದಿಂ...
10-05-25 07:25 pm
Indian Military, Pakistan : ತನ್ನ ಮೂರು ವಾಯುನೆಲ...
10-05-25 01:58 pm
10-05-25 07:10 pm
Mangalore Correspondent
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm