ಬ್ರೇಕಿಂಗ್ ನ್ಯೂಸ್
01-02-22 01:19 pm Mangalore Correspondent ಕರಾವಳಿ
ಮಂಗಳೂರು, ಫೆ.1 : ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿ ಕೈಗೆತ್ತಿಕೊಂಡ ಯೋಜನೆಗಳನ್ನು ಇದೇ ಮಾರ್ಚ್ ಅಂತ್ಯದೊಳಗೆ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ಹೇಳಿದ್ದಾರೆ.
ಮಂಗಳೂರು ನಗರದಲ್ಲಿ ನಡೆಯುತ್ತಿರುವ ಸ್ಮಾರ್ಟ್ ಸಿಟಿ ಕಾಮಗಾರಿಗಳನ್ನು ಮಂಗಳವಾರ ವೀಕ್ಷಿಸಿದ ಬಳಿಕ ಕಾಮಗಾರಿಗಳ ಕುರಿತಂತೆ ವಿವರ ನೀಡಿದರು. ಕಾಮಗಾರಿ ವಿಳಂಬವಾಗುತ್ತಿರುವ ಬಗ್ಗೆ ದೂರುಗಳಿದ್ದು, ಕೈಗೆತ್ತಿಕೊಂಡಿರುವ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಲು ಸೂಚನೆ ನೀಡಲಾಗಿದೆ.
ಕೇಂದ್ರ ಸರಕಾರ ಮೇ ತಿಂಗಳ ಒಳಗೆ ಸ್ಮಾರ್ಟ್ ಸಿಟಿ ಕಾಮಗಾರಿಗಳನ್ನು ಪೂರ್ಣಗೊಳಿಸಲು ಸೂಚನೆ ನೀಡಿದೆ. ಆದರೆ ನಾವು ಅದಕ್ಕೂ ಮೊದಲೇ ಮುಗಿಸಲು ಒತ್ತು ನೀಡಿದ್ದೇವೆ. ಅಲ್ಲದೆ ಮಂಗಳೂರಿನ ಅಭಿವೃದ್ಧಿಗೆ ಇನ್ನೂ ನೂರು ಕೋಟಿ ಅನುದಾನದ ಅಗತ್ಯವಿದ್ದು, ಈ ಬಗ್ಗೆ ಮುಖ್ಯಮಂತ್ರಿಗಳ ಗಮನ ಸೆಳೆಯಲಾಗಿದೆ ಎಂದು ಸಚಿವರು ಹೇಳಿದರು.
ಸ್ಮಾರ್ಟ್ ಸಿಟಿ ಕಾಮಗಾರಿಗಳ ಗುಣಮಟ್ಟಕ್ಕೆ ಆದ್ಯತೆ ನೀಡಬೇಕು. ಕಳಪೆ ಕಾಮಗಾರಿಯ ದೂರುಗಳು ಕೇಳಿಬಂದಲ್ಲಿ ಕ್ರಿಮಿನಲ್ ಕೇಸು ದಾಖಲಿಸಲಾಗುವುದು ಎಂದು ಸಚಿವರು ಎಚ್ಚರಿಸಿದರು. ಮೇಯರ್ ಪ್ರೇಮಾನಂದ ಶೆಟ್ಟಿ, ಉಪಮೇಯರ್ ಸುಮಂಗಲಾ ರಾವ್, ಮೂಡಾ ಅಧ್ಯಕ್ಷ ರವಿಶಂಕರ ಮಿಜಾರು ಉಪಸ್ಥಿತರಿದ್ದರು.
State minister for urban development, B A Byrathi Basavaraj, undertook inspection of various works undertaken in the city under the Smart City project, Karnataka Urban Infrastructure Development and Finance Corporation, Mangaluru Urban Development Authority etc on Tuesday February 1.
15-07-25 01:32 pm
Bangalore Correspondent
ನಟಿ ಸರೋಜಾ ದೇವಿ- ಎಸ್ಸೆಂ ಕೃಷ್ಣ ಪ್ರೇಮ ಪ್ರಸಂಗ ; ಮ...
15-07-25 12:27 pm
ಕೇವಲ 2 ಸಾವಿರ ಲಂಚ ಕೇಳಿ ಸಿಕ್ಕಿಬಿದ್ದ ಪಂಚಾಯತ್ ಪಿಡ...
15-07-25 10:35 am
ಧರ್ಮಸ್ಥಳದಲ್ಲಿ 20 ವರ್ಷಗಳಲ್ಲಾದ ಯುವತಿಯರ ನಾಪತ್ತೆ-...
14-07-25 10:44 pm
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
15-07-25 10:40 pm
Mangalore Correspondent
Udupi Rain, Fishermen Missing: ಉಡುಪಿ ; ಭಾರೀ ಗ...
15-07-25 10:13 pm
Kmc Manipal Hospital, Mangalore, Health Card:...
15-07-25 07:19 pm
Karkala Parashurama Theme Park: ಕಾರ್ಕಳ ಪರಶುರಾ...
15-07-25 02:28 pm
Mangalore Accident, Alto Car: ದೆಹಲಿಯಿಂದ ಬಂದ ಗ...
15-07-25 10:32 am
15-07-25 10:57 pm
HK News Desk
Lawrence Bishnoi, Bangalore, Crime: ಡಾನ್ ಲಾರೆ...
15-07-25 06:52 pm
Mangalore, Moodbidri college, Rape, Blackmail...
15-07-25 06:07 pm
ಹಿಂದು ಯುವತಿಯರನ್ನು ಮತಾಂತರ ಮಾಡುತ್ತಿದ್ದಾನೆಂದು ಸು...
15-07-25 05:21 pm
Mangalore Police, Arrest, NITTE College Stude...
15-07-25 01:13 pm