ಡ್ರಗ್ಸ್ ಬಗ್ಗೆ ಮಂಗಳೂರು ವಿವಿ ವ್ಯಾಪ್ತಿಯಲ್ಲಿ ಅಭಿಯಾನ ; ರವಿಚಂದ್ರ ಪಿ.ಎಂ‌. 

17-09-20 05:15 pm       Mangalore Reporter   ಕರಾವಳಿ

ಮಾದಕ ವ್ಯಸನದಿಂದ ವಿದ್ಯಾರ್ಥಿಗಳು ಬಲಿಯಾಗುತ್ತಿರುವುದು ಗಮನಕ್ಕೆ ಬಂದಿದ್ದು ಈ ಬಗ್ಗೆ ಮಂಗಳೂರು ವಿವಿ ವ್ಯಾಪ್ತಿಯಲ್ಲಿ ಜನಜಾಗೃತಿಗಾಗಿ ಅಭಿಯಾನ ರೂಪಿಸಲಾಗುವುದು ಎಂದು ಮಂಗಳೂರು ವಿವಿ ಸಿಂಡಿಕೇಟ್ ಸದಸ್ಯರಾದ ರವಿಚಂದ್ರ ಪಿ.ಎಂ. ಹಾಗೂ ರಮೇಶ್ ಕೆ. ತಿಳಿಸಿದ್ದಾರೆ.

ಮಂಗಳೂರು, ಸೆ.17: ಮಾದಕ ವ್ಯಸನದಿಂದ ವಿದ್ಯಾರ್ಥಿಗಳು ಬಲಿಯಾಗುತ್ತಿರುವುದು ಗಮನಕ್ಕೆ ಬಂದಿದ್ದು ಈ ಬಗ್ಗೆ ಮಂಗಳೂರು ವಿವಿ ವ್ಯಾಪ್ತಿಯಲ್ಲಿ ಜನಜಾಗೃತಿಗಾಗಿ ಅಭಿಯಾನ ರೂಪಿಸಲಾಗುವುದು ಎಂದು ಮಂಗಳೂರು ವಿವಿ ಸಿಂಡಿಕೇಟ್ ಸದಸ್ಯರಾದ ರವಿಚಂದ್ರ ಪಿ.ಎಂ. ಹಾಗೂ ರಮೇಶ್ ಕೆ. ತಿಳಿಸಿದ್ದಾರೆ.

ಗುರುವಾರ ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಂಬರುವ ಮಂಗಳೂರು ವಿ.ವಿ. ಸಿಂಡಿಕೇಟ್ ಸಭೆಯಲ್ಲೂ ಈ ಬಗ್ಗೆ ವಿಶೇಷ ಚರ್ಚೆ ನಡೆಸಲಾಗುವುದು. ಮಾದಕ ವ್ಯಸನದ ಬಗ್ಗೆ ಏನೇನು ಕ್ರಮ ಕೈಗೊಳ್ಳಬೇಕೆಂದು ಯೋಜನೆ ರೂಪಿಸಲಾಗುವುದು ಎಂದರು.

ಪ್ರತಿ ಕಾಲೇಜಿನಲ್ಲಿ ಡ್ರಗ್ಸ್ ಬಗ್ಗೆ ಜಾಗೃತಿ ಹಾಗೂ ಅದರ ನಿಯಂತ್ರಣಕ್ಕಾಗಿ ಸಮಿತಿ ರಚನೆ ಮಾಡಲಾಗುವುದು. ಅಲ್ಲದೆ ಕಾಲೇಜಿನ ವಿದ್ಯಾರ್ಥಿ ಸಂಘ, ಎನ್‌ಸಿಸಿ/ಎನ್ನೆಸ್ಸೆಸ್ ಮುಂತಾದ ಘಟಕಗಳ ಮೂಲಕ ಮಾದಕ ವ್ಯಸನದ ಬಗ್ಗೆ ವಿಶೇಷ ತರಬೇತಿ ನೀಡಲಾಗುವುದು ಎಂದರು.

ಇದರ ಭಾಗವಾಗಿ ವಿವಿ ವ್ಯಾಪ್ತಿಯ ಎಲ್ಲ ಕಾಲೇಜುಗಳಲ್ಲಿ ಶೈಕ್ಷಣಿಕ ವರ್ಷದ ಆರಂಭದಲ್ಲಿ ವಿದ್ಯಾರ್ಥಿ ಜಾಗೃತಿ ಸಭೆ, ಟಾಸ್ಕ್‌ಫೋರ್ಸ್ ರಚನೆ, ಎನ್‌ಜಿಒಗಳ ಜೊತೆ ಸೇರಿ ಜನಜಾಗೃತಿ ಅಭಿಯಾನ ನಡೆಸಲಾಗುವುದು. ಅಲ್ಲದೆ, ಡ್ರಗ್ಸ್ ವಿರುದ್ಧ ಕಠಿಣ ಕಾನೂನು ರೂಪಿಸುವಂತೆ ರಾಜ್ಯ ಸರಕಾರಕ್ಕೆ ಮನವಿ ಮಾಡಲಾಗುವುದು.  ಜನನಾಯಕರು, ಸಾಹಿತಿಗಳು, ಮಠಾಧೀಶರು, ಸಂಘ ಸಂಸ್ಥೆಗಳ ನಾಯಕರು ಈ ಬಗ್ಗೆ ಜನಾಭಿಪ್ರಾಯ ಮೂಡಿಸುವಲ್ಲಿ ಸಹಕರಿಸಬೇಕು ಎಂದು ರವಿಚಂದ್ರ ಪಿ.ಎಂ. ಮನವಿ ಮಾಡಿದ್ದಾರೆ.

Join our WhatsApp group for latest news updates