ಬ್ರೇಕಿಂಗ್ ನ್ಯೂಸ್
05-02-22 02:02 pm HK Desk news ಕರಾವಳಿ
ಉಡುಪಿ, ಫೆ.5 : ಉಡುಪಿ ಮತ್ತು ಕುಂದಾಪುರದಲ್ಲಿ ಹಿಜಾಬ್ - ಕೇಸರಿ ವಿವಾದ ತಾರಕಕ್ಕೇರಿದೆ. ಇಂದು ಹಿಂದು ವಿದ್ಯಾರ್ಥಿನಿಯರು ಕೂಡ ಕೇಸರಿ ಶಾಲು ಹಾಕ್ಕೊಂಡು ಕಾಲೇಜಿಗೆ ಬಂದಿದ್ದು ಹೊಸ ತಿಕ್ಕಾಟಕ್ಕೆ ಆಸ್ಪದ ಕೊಟ್ಟಿದ್ದಾರೆ. ಇದೇ ವೇಳೆ, ಕುಂದಾಪುರದ ಖಾಸಗಿ ಆರ್.ಎನ್ ಶೆಟ್ಟಿ ಕಾಲೇಜಿನಲ್ಲು ಕೇಸರಿ ಶಾಲು ತೊಟ್ಟು ವಿದ್ಯಾರ್ಥಿಗಳು ಬಂದಿದ್ದು ವಿವಾದಕ್ಕೆ ನಾಂದಿ ಹಾಡಿದ್ದಾರೆ.
ಆರ್.ಎನ್ ಶೆಟ್ಟಿ ಕಾಲೇಜು ಮುಂದೆ ಕೇಸರಿ ಮತ್ತು ಬುರ್ಖಾ ತೊಟ್ಟ ವಿದ್ಯಾರ್ಥಿಗಳು ಜಮಾವಣೆಗೊಂಡಿದ್ದು ಹೈಡ್ರಾಮಾ ನಡೆಸಿದ್ದಾರೆ. ವಿವಾದ ಏರ್ಪಟ್ಟ ಬಳಿಕ ಆರ್. ಎನ್ ಶೆಟ್ಟಿ ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿದೆ. ಹೈಕೋರ್ಟ್ ತೀರ್ಪು ಬರುವ ತನಕವೂ ಕಾಲೇಜಿಗೆ ರಜೆ ಘೋಷಿಸಲಾಗಿದೆ.


ಕೇಸರಿ ತೊಟ್ಟ ವಿದ್ಯಾರ್ಥಿಗಳು ಜೈಶ್ರೀರಾಮ್, ಹರ ಹರ ಮಹಾದೇವ ಎನ್ನುವ ಘೋಷಣೆ ಕೂಗುತ್ತಾ ಮೆರವಣಿಗೆ ನಡೆಸಿದ್ದಾರೆ. ವಿವಾದ ಜೋರಾಗುತ್ತಲೇ ಆರ್ ಎನ್ ಶೆಟ್ಟಿ ಕಾಲೇಜು ಆಡಳಿತದ ಜೊತೆಗೆ ಪೊಲೀಸರು ಸಭೆ ನಡೆಸಿದ್ದು ಬಳಿಕ ರಜೆ ಘೋಷಿಸುವ ನಿರ್ಧಾರಕ್ಕೆ ಬರಲಾಗಿದೆ.

ಇದೇ ವೇಳೆ, ಕುಂದಾಪುರ ಪೇಟೆಯಲ್ಲಿ ಕೇಸರಿ ಶಾಲು ತೊಟ್ಟು ಮೆರವಣಿಗೆ ನಡೆಸಿದ ವಿದ್ಯಾರ್ಥಿಗಳನ್ನು ಪೊಲೀಸರು ನೇರ ಮನೆಗೆ ತೆರಳುವಂತೆ ಸೂಚನೆ ನೀಡಿದ್ದಾರೆ. ಕುಂದಾಪುರದ ಭಂಡಾರ್ಕಾರ್ಸ್ ಕಾಲೇಜಿನಲ್ಲೂ ವಿದ್ಯಾರ್ಥಿನಿಯರು ಕೇಸರಿ ಶಾಲುಗಳನ್ನು ತೊಟ್ಟು ಬಂದಿದ್ದು ಮೆರವಣಿಗೆ ಮಾಡಿದ್ದಾರೆ. ಹಿಜಾಬ್ ಕಳಚುವ ತನಕ ಕೇಸರಿ ತೊಡುತ್ತೇವೆ. ಅವರಿಗೊಂದು ನ್ಯಾಯ ನಮಗೊಂದು ನ್ಯಾಯ ಬೇಡ ಎಂದು ವಿದ್ಯಾರ್ಥಿಗಳು ಜೈ ಶ್ರೀರಾಮ್ ಘೋಷಣೆ ಕೂಗಿದ್ದಾರೆ. ಪಾರಿಜಾತ ಸರ್ಕಲ್ ನಿಂದ ಭಂಡಾರ್ಕರ್ಸ್ ಕಾಲೇಜ್ ಗೇಟ್ ತನಕ ಮೆರವಣಿಗೆ ನಡೆಸಿದ ವಿದ್ಯಾರ್ಥಿಗಳು ಕೇಸರಿ ಶಾಲು ತೆಗೆದು ಕಾಲೇಜಿಗೆ ತೆರಳಿದ್ದಾರೆ.


ವಿವಾದ ಹಿನ್ನೆಲೆಯಲ್ಲಿ ಕುಂದಾಪುರದ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಆಡಳಿತ ಮಂಡಳಿ ಸದಸ್ಯರು ಪೋಷಕರ ಸಭೆ ನಡೆಸಿದ್ದಾರೆ. ಸಭೆ ಮುಗಿಸಿ ಬಂದ ಪೋಷಕರು, ಮುಸ್ಲಿಂ ವಿದ್ಯಾರ್ಥಿನಿಯರು, ಪ್ರಾಂಶುಪಾಲರಿಗೆ ನಾವು ಮನವಿ ಪತ್ರವನ್ನು ಕೊಟ್ಟಿದ್ದೇವೆ. ತಲೆಗೆ ಸ್ಕಾರ್ಫ್ ತೊಡಲು ಅವಕಾಶ ಕೋರಿದ್ದೇವೆ. ನಾವು ಕುಂದಾಪುರದಲ್ಲಿ ಎಷ್ಟು ವರ್ಷ ಅನ್ಯೋನ್ಯತೆಯಿಂದ ಇದ್ದೆವು. ಈಗ ರಾಜಕೀಯ ಬೆರೆತು ವಿವಾದ ಆಗಿದೆ. ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿ ನಮಗೆ ಮುಖ್ಯ. ಇದರಲ್ಲಿ ರಾಜಕೀಯ ಮಾಡಬಾರದು ಎಂದು ಹೇಳಿದರು.
Kundapur hijab row turns ugly college declares holiday, Hindu and Muslim students protest on street. The row over wearing hijab at Government PU College in Kundapura continued for the third day with Principal Raghavendra B G attempting to seal the gate to prevent Muslim girl students from attending classes wearing headscarf on Friday.
11-06-26 08:31 pm
HK News Staffer
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
11-06-26 06:37 pm
HK News Staffer
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
11-06-26 08:44 pm
HK News Staffer
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm