ಬ್ರೇಕಿಂಗ್ ನ್ಯೂಸ್
08-02-22 01:43 pm HK Desk news ಕರಾವಳಿ
ಕುಂದಾಪುರ, ಫೆ.8 : ಕುಂದಾಪುರದ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಹಿಜಾಬ್ ಹಾಕಿದವರನ್ನು ತಡೆದು ನಿಲ್ಲಿಸಿದ ಘಟನೆ ಬಗ್ಗೆ ವಿದ್ಯಾರ್ಥಿನಿಯರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿಯವರ ಒತ್ತಡದಿಂದಾಗಿ ಕಾಲೇಜು ಆಡಳಿತ ಹಿಜಾಬ್ ವಿಚಾರದಲ್ಲಿ ತಡೆ ಒಡ್ಡಿತ್ತು ಎಂದು ಶಾಸಕರನ್ನು ಪ್ರತಿವಾದಿಯಾಗಿಸಿ ಕೋರ್ಟಿನಲ್ಲಿ ಪ್ರಕರಣ ದಾಖಲಿಸಲಾಗಿದೆ.
ಕಾಲೇಜಿನ ಮೂರನೇ ವರ್ಷದ ಬಿಬಿಎ ವಿದ್ಯಾರ್ಥಿನಿ ಸೂಹಾ ಮೌಲಾನ, ಮೊದಲ ವರ್ಷದ ಬಿಬಿಎ ವಿದ್ಯಾರ್ಥಿನಿ ಆಯೆಷಾ ಅಲೀಫಾ ಕೌಸರ್ ಹೈಕೋರ್ಟ್ ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದಾರೆ. ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ, ಮಂಗಳೂರು ವಿಶ್ವವಿದ್ಯಾನಿಲಯದ ರಿಜಿಸ್ಟ್ರಾರ್, ಭಂಡಾರ್ಕಾರ್ಸ್ ಕಾಲೇಜಿನ ಪ್ರಿನ್ಸಿಪಾಲ್ ಅವರನ್ನು ದೂರಿನಲ್ಲಿ ಪ್ರತಿವಾದಿಯಾಗಿ ಮಾಡಲಾಗಿದೆ.
ಯಾವುದೇ ನಿರ್ಬಂಧ ಇಲ್ಲದೆ ನಮಗೆ ಕಾಲೇಜು ಪ್ರವೇಶಕ್ಕೆ ಅನುಮತಿ ನೀಡಬೇಕು ಮತ್ತು ಈ ಬಗ್ಗೆ ಮಂಗಳೂರು ವಿಶ್ವವಿದ್ಯಾನಿಲಯದ ರಿಜಿಸ್ಟ್ರಾರ್ ಅವರಿಗೆ ಸೂಕ್ತ ನಿರ್ದೇಶನ ನೀಡಬೇಕು ಎಂದು ಅರ್ಜಿಯಲ್ಲಿ ಕೇಳಿಕೊಂಡಿದ್ದಾರೆ. ಇದಲ್ಲದೆ, ಶಾಸಕ ಹಾಲಾಡಿ ಯಾವ ಕಾನೂನಿನಡಿ ಕಾಲೇಜಿನ ಆಡಳಿತದ ವಿಚಾರದಲ್ಲಿ ಮೂಗು ತೂರಿಸಿದ್ದಾರೆ. ತಮ್ಮ ರಾಜಕೀಯ ಉದ್ದೇಶವನ್ನು ಇಟ್ಟುಕೊಂಡು ಕಾಲೇಜು ಪ್ರವೇಶ ಮಾಡಿದ್ದು ಹೇಗೆ ಎಂದು ಪ್ರಶ್ನೆ ಮಾಡಿದ್ದಾರೆ.
ಇಷ್ಟೆಲ್ಲಾ ಬೆಳವಣಿಗೆ ಆಗಲು ಮತ್ತು ಹಿಜಾಬ್ ವಿಚಾರ ಹೊತ್ತಿಕೊಳ್ಳಲು ಕಾರಣವಾದ ಅಂಶಗಳ ಬಗ್ಗೆ ಪರಿಗಣಿಸಿ ಸರ್ಕಾರದ ಆದೇಶಕ್ಕೆ ತಡೆ ನೀಡಬೇಕೆಂದು ಅರ್ಜಿಯಲ್ಲಿ ಕೇಳಿಕೊಂಡಿದ್ದಾರೆ. ಮಧ್ಯಂತರ ತಡೆ ನೀಡುವ ಮೂಲಕ ಹಿಜಾಬ್ ಧರಿಸಿ ಬರುವ ವಿದ್ಯಾರ್ಥಿನಿಯರಿಗೆ ಯಾವುದೇ ತಾರತಮ್ಯ ಇಲ್ಲದೆ ಒಳಗೆ ಬಿಡುವಂತೆ ಆದೇಶ ನೀಡಬೇಕೆಂದು ವಿನಂತಿಸಿದ್ದಾರೆ.
ಶೈಕ್ಷಣಿಕ ವರ್ಷದ ಆರಂಭದಲ್ಲಿ ಈ ಬಗ್ಗೆ ಯಾವುದೇ ನಿರ್ಬಂಧ ಇರಲಿಲ್ಲ. ಫೆ.3 ರಂದು ಸಡನ್ನಾಗಿ ಬಂದು ಹಿಜಾಬ್ ಧರಿಸಿದವರಿಗೆ ಪ್ರವೇಶ ಇಲ್ಲವೆಂದು ಹೇಳಿದ್ದಾರೆ. ಈ ಬಗ್ಗೆ ಸರಕಾರದ ಆದೇಶ ಇದೆಯೆಂದು ಹೇಳಿದ್ದರು. ಆದರೆ ನಮ್ಮ ಪೋಷಕರು ಪ್ರಾಂಶುಪಾಲರನ್ನು ಭೇಟಿಯಾಗಿ ಪ್ರಶ್ನೆ ಮಾಡಿದ ಸಂದರ್ಭದಲ್ಲಿ ಶಾಸಕರ ಒತ್ತಡದಿಂದ ನಾವು ಆ ರೀತಿಯ ನಿರ್ಧಾರಕ್ಕೆ ಬರಬೇಕಾಯಿತು ಎಂದು ಹೇಳಿದ್ದರು ಎಂಬುದಾಗಿ ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.
The controversy over the issue of wearing of Hijabs by some girl students, and the male students registering their opposition by wearing saffron shawls, has been spreading to new territories with each passing day. In the middle of this, two girl students of Bhandarkar’s Arts and Science College here have approached the high court (HC), naming local MLA Halady Srinivas Shetty as the defendant. These students have alleged that the college has restricted their entry with Hijabs into the college premises at the instance of the MLA.
15-07-25 01:32 pm
Bangalore Correspondent
ನಟಿ ಸರೋಜಾ ದೇವಿ- ಎಸ್ಸೆಂ ಕೃಷ್ಣ ಪ್ರೇಮ ಪ್ರಸಂಗ ; ಮ...
15-07-25 12:27 pm
ಕೇವಲ 2 ಸಾವಿರ ಲಂಚ ಕೇಳಿ ಸಿಕ್ಕಿಬಿದ್ದ ಪಂಚಾಯತ್ ಪಿಡ...
15-07-25 10:35 am
ಧರ್ಮಸ್ಥಳದಲ್ಲಿ 20 ವರ್ಷಗಳಲ್ಲಾದ ಯುವತಿಯರ ನಾಪತ್ತೆ-...
14-07-25 10:44 pm
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
15-07-25 10:40 pm
Mangalore Correspondent
Udupi Rain, Fishermen Missing: ಉಡುಪಿ ; ಭಾರೀ ಗ...
15-07-25 10:13 pm
Kmc Manipal Hospital, Mangalore, Health Card:...
15-07-25 07:19 pm
Karkala Parashurama Theme Park: ಕಾರ್ಕಳ ಪರಶುರಾ...
15-07-25 02:28 pm
Mangalore Accident, Alto Car: ದೆಹಲಿಯಿಂದ ಬಂದ ಗ...
15-07-25 10:32 am
15-07-25 10:57 pm
HK News Desk
Lawrence Bishnoi, Bangalore, Crime: ಡಾನ್ ಲಾರೆ...
15-07-25 06:52 pm
Mangalore, Moodbidri college, Rape, Blackmail...
15-07-25 06:07 pm
ಹಿಂದು ಯುವತಿಯರನ್ನು ಮತಾಂತರ ಮಾಡುತ್ತಿದ್ದಾನೆಂದು ಸು...
15-07-25 05:21 pm
Mangalore Police, Arrest, NITTE College Stude...
15-07-25 01:13 pm