ಬ್ರೇಕಿಂಗ್ ನ್ಯೂಸ್
09-02-22 09:36 pm HK Desk news ಕರಾವಳಿ
ಉಡುಪಿ, ಫೆ.9 : ರಾಜ್ಯದಲ್ಲಿ ಹಿಜಾಬ್ ವಿವಾದವನ್ನು ಹುಟ್ಟುಹಾಕಿದ್ದು ಎಸ್.ಡಿ.ಪಿ.ಐ ಪಕ್ಷ. ಮುಸ್ಲಿಂ ಮತಗಳನ್ನು ಸೆಳೆಯುವುದಕ್ಕಾಗಿ ಇಂತಹ ವಿವಾದವನ್ನು ಸೃಷ್ಟಿಸಿದೆ ಎಂದು ಉಡುಪಿ ಬಿಜೆಪಿ ಶಾಸಕ ರಘುಪತಿ ಭಟ್ ಆರೋಪಿಸಿದ್ದಾರೆ.
ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಮತ್ತು ಎಸ್.ಡಿ.ಪಿ.ಐ ಮಧ್ಯೆ ಮುಸ್ಲಿಂ ಮತಗಳಿಗಾಗಿ ಸ್ಪರ್ಧೆ ಏರ್ಪಟ್ಟಿದೆ. ಹೀಗಾಗಿ ಹಿಜಾಬ್ ವಿವಾದದ ಹಿಂದಿರುವ ಷಡ್ಯಂತ್ರವನ್ನು ಬಯಳಿಗೆಳೆಯಬೇಕಿದೆ ಎಂದು ಹೇಳಿದ್ದಾರೆ. ಕಾಪು ಪುರಸಭೆಯಲ್ಲಿ ಎಸ್.ಡಿ.ಪಿ.ಐ ಮೂರು ಸ್ಥಾನವನ್ನು ಗೆದ್ದಿತ್ತು. ಮುಸ್ಲಿಂ ಪ್ರಾಬಲ್ಯ ಇರುವಲ್ಲಿ ಮತ್ತಷ್ಟು ಸ್ಥಾನ ಗೆಲ್ಲಲು ಕಸರತ್ತು ನಡೆಸಿದೆ.

ಉಡುಪಿ ನಗರದ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಇದುವರೆಗೂ ಇಲ್ಲದಿದ್ದ ಹಿಜಾಬ್ ವಿವಾದವನ್ನು ಈಗ ಎಸ್ಡಿಪಿಐ ಸೃಷ್ಟಿಸಿದೆ. ಇದರಿಂದ ಮತ ಕಳೆದುಕೊಳ್ಳುವ ಭೀತಿಯಿಂದ ಕಾಂಗ್ರೆಸ್ ಅದರ ಜೊತೆಗೆ ಕೈಜೋಡಿಸಿದೆ. ಆರಂಭದಲ್ಲಿ ಕಾಂಗ್ರೆಸ್ ನಾಯಕರು ಹಿಜಾಬ್ ವಿರುದ್ದ ನಿಂತಿದ್ದರು. ಮುಸ್ಲಿಂ ಮತಗಳನ್ನು ಕಳೆದುಕೊಳ್ಳುವ ಭಯದಿಂದ ಅವರಿಗೆ ಬೆಂಬಲಿಸುತ್ತಿದ್ದಾರೆ ಎಂದರು. ಬಿಜೆಪಿ ಚುನಾವಣೆ ಹಿನ್ನೆಲೆಯಲ್ಲಿ ಈ ವಿವಾದವನ್ನು ಹಬ್ಬಿಸುತ್ತಿದೆ ಎಂಬ ಆರೋಪವನ್ನು ನಿರಾಕರಿಸಿದ ರಘುಪತಿ ಭಟ್, ಶಿಕ್ಷಣ ಕೇಂದ್ರವಾಗಿದ್ದ ಉಡುಪಿಯ ಸರಕಾರಿ ಕಾಲೇಜು ಈಗ ಧಾರ್ಮಿಕ ವಿಚಾರದಲ್ಲಿ ವಿವಾದಕ್ಕೆ ತುತ್ತಾಗಿರುವುದು ವಿಷಾದನೀಯ. ಈ ವಿವಾದ ಯಾವಾಗ ಮುಗಿಯುತ್ತದೆ ಎಂದು ಕಾಯುತ್ತಿದ್ದೇವೆ.

ಎರಡು ಗುಂಪಿನ ವಿದ್ಯಾರ್ಥಿಗಳು ನ್ಯಾಯಾಲಯದ ತೀರ್ಪು ಬರುವವರೆಗೆ ಶಾಂತಿಯಿಂದ ಇರಬೇಕು ಎಂದು ಮನವಿ ಮಾಡಿದರು. ಯಾವುದೇ ತೀರ್ಪು ಬಂದರೂ, ನ್ಯಾಯಾಲಯದ ತೀರ್ಪನ್ನು ಗೌರವಿಸುತ್ತೇವೆ. ಹಿಜಾಬ್ ವಿರುದ್ದ ತೀರ್ಪು ಬಂದರೆ ಹೈಕೋರ್ಟ್ ಗೆ ಹೋಗಲು ಅವರಿಗೆ ಅವಕಾಶ ಇರುವಂತೆ ಹಿಜಾಬ್ ಪರವಾಗಿ ಬಂದರೆ ಸರಕಾರವು ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲು ಅವಕಾಶ ಇದೆ. ನ್ಯಾಯಾಲಯ ವಿಚಾರಣೆಯನ್ನು ಮುಂದೂಡಿದ್ದು ಒಂದೆರಡು ದಿನಗಳಲ್ಲಿ ಸರಕಾರದ ಪರವಾಗಿ ತೀರ್ಪು ಬರುವ ನಿರೀಕ್ಷೆಯಿದೆ. ನ್ಯಾಯಾಲಯಕ್ಕಿಂತ ಸರಕಾರ ದೊಡ್ಡದ್ದಲ್ಲ. ಯಾವುದೇ ರೀತಿ ತೀರ್ಪು ಬಂದರೂ ಸರಕಾರ ಅದನ್ನು ಪಾಲಿಸಲಿದೆ.
ಉಡುಪಿ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಉಳಿದ ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸದೇ ಇರಲು ಒಪ್ಪಿದ್ದರೂ ಈ ಆರು ಮಂದಿ ವಿದ್ಯಾರ್ಥನಿಯರು ಹಿಜಾಬ್ ಧರಿಸಲು ಪಟ್ಟು ಹಿಡಿದಿರುವುದರಿಂದ ಈ ವಿವಾದ ಸೃಷ್ಟಿಯಾಗಿದೆ. ಇದೀಗ ಈ ವಿವಾದ ರಾಜ್ಯದಾದ್ಯಂತ ವ್ಯಾಪಿಸಿದೆ. ಇದಕ್ಕೆಲ್ಲ ಇಲ್ಲಿನ ವಿದ್ಯಾರ್ಥಿನಿಯರೇ ಕಾರಣ ಎಂದವರು ಆರೋಪಿಸಿದರು.
Hijab row is a SDPI vote Bank game slams MLA Raghupathi Bhat in Udupi. Amid an escalating row on allowing students to wear hijabs in educational institutions, the Karnataka government on Tuesday announced that all high schools and colleges in the state will remain shut for three days between February 9 and February 11.
11-06-26 08:31 pm
HK News Staffer
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
11-06-26 06:37 pm
HK News Staffer
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
11-06-26 08:44 pm
HK News Staffer
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm