ಬ್ರೇಕಿಂಗ್ ನ್ಯೂಸ್
12-02-22 11:45 am HK Desk news ಕರಾವಳಿ
ಉಡುಪಿ, ಫೆ.12 : ಹಿಜಬ್ ವಿವಾದದ ಬೆನ್ನಲ್ಲೇ ಉಡುಪಿ ಶಾಸಕ ರಘುಪತಿ ಭಟ್ ಗೆ ಕಿಡಿಗೇಡಿಗಳು ನಿರಂತರ ಇಂಟರ್ನೆಟ್ ಕರೆಗಳಿಂದ ಕರೆ ಮಾಡುತ್ತಿದ್ದು ಜೀವ ಬೆದರಿಕೆ ಒಡ್ಡಿದ್ದಾರೆ.
ವಿದೇಶಗಳಿಂದ ನಿರಂತರ ಫೋನ್ ಕರೆಗಳು ಬರುತ್ತಿವೆ. ಇಂಟರ್ನೆಟ್ ಕರೆ ಮಾಡಿ ಕಿಡಿಗೇಡಿಗಳು ಬೆದರಿಸುತ್ತಿದ್ದಾರೆ. ನಿನ್ನನ್ನು ನೋಡಿಕೊಳ್ಳುತ್ತೇವೆ,
ಮುಸಲ್ಮಾನರ ವಿರುದ್ಧ ನೀನು ಮೆರೆದಾಡ ಬೇಡ. ನಿನ್ನನ್ನು ಹೇಗೆ ನಿಯಂತ್ರಿಸಬೇಕು ಗೊತ್ತಿದೆ ಎಂದು ಕರೆ ಮಾಡಿ ಬೆದರಿಸಿದ್ದಾಗಿ ರಘುಪತಿ ಭಟ್ ತಿಳಿಸಿದ್ದಾರೆ.
ಸ್ಥಳೀಯ ಕೆಲ ನಂಬರ್ ಗಳಿಂದಲೂ ಫೋನ್ ಕರೆ ಬಂದಿದೆ. ಕೊಲೆ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದಾರೆ. ಈ ಬಗ್ಗೆ ಗೃಹ ಸಚಿವರಿಗೆ ಮೌಖಿಕವಾಗಿ ದೂರು ನೀಡಿದ್ದೇನೆ. ಆದರೆ ಇಂತಹ ಹಲವು ಬೆದರಿಕೆಗಳನ್ನು ನಾವು ತುಂಬಾ ನೋಡಿದ್ದೇವೆ. ಉಡುಪಿ ಜಿಲ್ಲೆಯ ಮುಸಲ್ಮಾನರ ಒಂದೂ ಪ್ರತಿರೋಧ ಬಂದಿಲ್ಲ. ಉಡುಪಿ, ಬೆಂಗಳೂರಿನ ಮುಸಲ್ಮಾನರು ನನ್ನ ಬೆಂಬಲಕ್ಕಿದ್ದಾರೆ. ಉಡುಪಿಯ ಮುಸ್ಲಿಮ್ ಒಕ್ಕೂಟ, ಖಾಜಿಗಳು ನನಗೆ ಬೆಂಬಲ ನೀಡಿದ್ದಾರೆ. ಉಡುಪಿ ಶಾಸಕರ ನಿಲುವು ಸರಿ ಇದೆ ಎಂದು ಸಪೋರ್ಟ್ ಮಾಡಿದ್ದಾರೆ. ಆದರೆ ಹೊರಗೆ ಕುಳಿತಿರುವ ಕಿಡಿಗೇಡಿಗಳು ಈ ಕೆಲಸ ಮಾಡುತ್ತಿದ್ದಾರೆ.
ನನಗೆ ದೇವರಿದ್ದಾರೆ, ಅವರೇ ನನ್ನ ಭದ್ರತೆ. ಉಡುಪಿ ಕ್ಷೇತ್ರದ ಜನರೇ ನನಗೆ ಸೆಕ್ಯುರಿಟಿ ಗಾರ್ಡ್. ನನಗೆ ಬೇರೆ ಭದ್ರತೆ ಬೇಕಾಗಿಲ್ಲ. ಯಾವುದೇ ಒಬ್ಬ ವ್ಯಕ್ತಿ ಹೆಸರಲ್ಲಿ ಅಥವಾ ಒಂದು ಸಂಘಟನೆಯಿಂದ ಬೆದರಿಕೆ ಬಂದಿಲ್ಲ. ಹೈದರಾಬಾದ್ ನಿಂದ ಫೋನ್ ಕರೆ ಮಾಡಿ ಒಬ್ಬ ಹುಚ್ಚ ಮಾತನಾಡಿದ್ದಾನೆ. ಅವನಿಗೆ ಇಪ್ಪತ್ತು ನಿಮಿಷಗಳ ಕಾಲ ಉತ್ತರ ಕೊಟ್ಟಿದ್ದೇನೆ. ಇಲ್ಲಿನ ಮುಸ್ಲಿಮರಿಗೆ ಸಮಸ್ಯೆಯಾಗಿಲ್ಲ. ಇಲ್ಲಿನ ಆರು ಮಕ್ಕಳ ತಲೆ ಹಾಳು ಮಾಡಿದ್ದಾರೆ ಎಂದು ಶಾಸಕ ರಘುಪತಿ ಭಟ್ ಹೇಳಿದ್ದಾರೆ. ಬೆದರಿಕೆ ಕರೆಗಳ ಹಿನ್ನೆಲೆಯಲ್ಲಿ ಶಾಸಕ ರಘುಪತಿ ಭಟ್ ಗೆ ಪೊಲೀಸ್ ಇಲಾಖೆಯಿಂದ ಗನ್ ಮ್ಯಾನ್ ಭದ್ರತೆ ನೀಡಲಾಗಿದೆ.
Hijab row, MLA Udupi K Raghupati Bhat gets international threat calls via internet. Recently the MLA said, "around 1500 to 2000 trainers have arrived from Hyderabad and Kerala to frame the strategies to fight for Hijab. There is information that some trainers had even come to Udupi from Hyderabad."
15-07-25 01:32 pm
Bangalore Correspondent
ನಟಿ ಸರೋಜಾ ದೇವಿ- ಎಸ್ಸೆಂ ಕೃಷ್ಣ ಪ್ರೇಮ ಪ್ರಸಂಗ ; ಮ...
15-07-25 12:27 pm
ಕೇವಲ 2 ಸಾವಿರ ಲಂಚ ಕೇಳಿ ಸಿಕ್ಕಿಬಿದ್ದ ಪಂಚಾಯತ್ ಪಿಡ...
15-07-25 10:35 am
ಧರ್ಮಸ್ಥಳದಲ್ಲಿ 20 ವರ್ಷಗಳಲ್ಲಾದ ಯುವತಿಯರ ನಾಪತ್ತೆ-...
14-07-25 10:44 pm
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
15-07-25 10:40 pm
Mangalore Correspondent
Udupi Rain, Fishermen Missing: ಉಡುಪಿ ; ಭಾರೀ ಗ...
15-07-25 10:13 pm
Kmc Manipal Hospital, Mangalore, Health Card:...
15-07-25 07:19 pm
Karkala Parashurama Theme Park: ಕಾರ್ಕಳ ಪರಶುರಾ...
15-07-25 02:28 pm
Mangalore Accident, Alto Car: ದೆಹಲಿಯಿಂದ ಬಂದ ಗ...
15-07-25 10:32 am
15-07-25 10:57 pm
HK News Desk
Lawrence Bishnoi, Bangalore, Crime: ಡಾನ್ ಲಾರೆ...
15-07-25 06:52 pm
Mangalore, Moodbidri college, Rape, Blackmail...
15-07-25 06:07 pm
ಹಿಂದು ಯುವತಿಯರನ್ನು ಮತಾಂತರ ಮಾಡುತ್ತಿದ್ದಾನೆಂದು ಸು...
15-07-25 05:21 pm
Mangalore Police, Arrest, NITTE College Stude...
15-07-25 01:13 pm