ಬ್ರೇಕಿಂಗ್ ನ್ಯೂಸ್
13-02-22 10:31 pm Mangalore Correspondent ಕರಾವಳಿ
ಮಂಗಳೂರು, ಫೆ.13 : ಕರಾವಳಿಯ ಅತ್ಯಂತ ಪ್ರಸಿದ್ದ ಹಾಗೂ ಪುರಾತನ ದೇವಸ್ಥಾನಗಳಲ್ಲೊಂದಾದ ಬಂಟ್ವಾಳ ತಾಲೂಕಿನ ಶ್ರೀ ಕಾರಿಂಜೇಶ್ವರ ದೇವಸ್ಥಾನದ ಆಸುಪಾಸಿನಲ್ಲಿ ಮೂರು ಕಡೆ ನಡೆಯುತ್ತಿದ್ದ ಕಲ್ಲು ಗಣಿಗಾರಿಕೆಯನ್ನು ಸ್ಥಳೀಯರ ದೂರಿನ ಹಿನ್ನೆಲೆಯಲ್ಲಿ ಸಂಪೂರ್ಣ ಸ್ಥಗಿತಗೊಳಿಸಲಾಗಿದೆ ಎಂದು ಇಂಧನ, ಕನ್ನಡ ಹಾಗೂ ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನೀಲ್ ಕುಮಾರ್ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಸಚಿವರು, ಕಾವಳ ಮೂಡೂರು ಗ್ರಾಮದ ಸರ್ವೆ ನಂ. 164/2ಪಿ1 ರಲ್ಲಿ 0.50 ಎಕ್ರೆ ಮತ್ತು 172/2ಪಿ1 ರಲ್ಲಿ 0.50 ಎಕ್ರೆ ಒಟ್ಟು 1.00 ಎಕ್ರೆ ಪ್ರದೇಶದಲ್ಲಿ 2007 ರಿಂದ ಗಣಿಗಾರಿಕೆ ನಡೆಯುತ್ತಿದ್ದು, ತನ್ನ ಪರವಾನಿಗೆಯ ವ್ಯಾಪ್ತಿ ಮೀರಿ ಸುಮಾರು 3.28 ಎಕ್ರೆ ಪ್ರದೇಶದಲ್ಲಿ ಅಕ್ರಮವಾಗಿ ಗಣಿಗಾರಿಕೆ ಮಾಡಿರುವ ಹಿನ್ನೆಲೆಯಲ್ಲಿ ರೂ. 8,12,87,198 ದಂಡ ಪಾವತಿಸುವಂತೆ ಗಣಿ ಮತ್ತು ಭೂವಿಜ್ಞಾನ ಇಲಾಖೆ ಸೂಚಿಸಿದ್ದು ದಂಡ ಪಾವತಿಸದ ಕಾರಣ ಸದ್ರಿ ಗಣಿಗಾರಿಕೆಯನ್ನು 2021ರ ಡಿಸೆಂಬರ್ ತಿಂಗಳಲ್ಲಿ ಸ್ಥಗಿತಗೊಳಿಸಲಾಗಿದೆ ಹಾಗೂ ಅನಧಿಕೃತ ಗಣಿಗಾರಿಕೆ ನಡೆಸಿರುವ ಮಾಲೀಕರ ವಿರುದ್ಧ ಬಂಟ್ವಾಳ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಾಗಿದೆ.
ಕಾವಳ ಪಡೂರು ಗ್ರಾಮದ ಸ.ನಂ 121/2ಪಿ1 ರಲ್ಲಿ ಒಂದು ಎಕ್ರೆ ವಿಸ್ತೀರ್ಣದಲ್ಲಿ 2016 ರಿಂದ ಆರಂಭಗೊಂಡಿದ್ದ ಗಣಿಗಾರಿಕೆ 20 ವರ್ಷಗಳ ಅವಧಿಗೆ ಪರವಾನಿಗೆ ಇದ್ದರೂ ಕೂಡ ಗುತ್ತಿಗೆದಾರರು ಗೋಮಾಳ ಜಾಗವನ್ನು ಅತಿಕ್ರಮಿಸಿ ಗಣಿಗಾರಿಕೆ ನಡೆಸುತ್ತಿರುವುದು ಸಾಬೀತಾದ ಹಿನ್ನೆಲೆಯಲ್ಲಿ ಸದ್ರಿ ಗಣಿಗಾರಿಕೆಯನ್ನು ಸ್ಥಗಿತಗೊಳಿಸಲಾಗಿದೆ. ಹಾಗೂ ಸ.ನಂ 122/3ಪಿ1 ರಲ್ಲಿ 1 ಎಕ್ರೆ ಜಮೀನಿನಲ್ಲಿ 2015 ರಿಂದ ಆರಂಭಗೊಂಡಿದ್ದ ಗಣಿಗಾರಿಕೆಯನ್ನು ಅದರ ಗುತ್ತಿಗೆದಾರರು ಮೃತಪಟ್ಟಿದ್ದು ಅದೇ ಗಣಿಗಾರಿಕೆ ಪ್ರದೇಶದಲ್ಲಿ ಅನಧಿಕೃತವಾಗಿ ಬೇರೆ ವ್ಯಕ್ತಿ ಗಣಿಗಾರಿಕೆ ಮಾಡುತ್ತಿರುವುದು ಕಂಡುಬಂದ ಹಿನ್ನೆಲೆಯಲ್ಲಿ ಈ ಗಣಿಗಾರಿಕೆಯನ್ನೂ ಸ್ಥಗಿತಗೊಳಿಸಲಾಗಿದೆ.
ದೇವಸ್ಥಾನದ ಆಸುಪಾಸು ಕಾರ್ಯಚರಿಸುತ್ತಿದ್ದ ಮೂರು ಕಲ್ಲು ಗಣಿಗಾರಿಕೆಯನ್ನು ಸ್ಥಗಿತಗೊಳಿಸಲಾಗಿದ್ದು ಸಾವಿರಾರು ವರ್ಷಗಳ ಇತಿಹಾಸವಿರುವ ಪವಿತ್ರ ಧಾರ್ಮಿಕ ಕ್ಷೇತ್ರವಾದ ಶ್ರೀ ಕಾರಿಂಜೇಶ್ವರ ದೇವಸ್ಥಾನಕ್ಕೆ ಯಾವುದೇ ಧಕ್ಕೆ ಬಾರದ ಹಾಗೂ ಕ್ಷೇತ್ರ ವ್ಯಾಪ್ತಿಯಲ್ಲಿ ಇನ್ನು ಮುಂದೆ ಯಾವುದೇ ರೀತಿಯ ಗಣಿಗಾರಿಕೆ ಚಟುವಟಿಕೆ ನಡೆಸದಂತೆ ಸೂಕ್ತ ಕ್ರಮ ಕೈಗೊಳ್ಳುವ ಬಗ್ಗೆ ಸಂಬಂಧಪಟ್ಟ ಇಲಾಖಾ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಆದೇಶ ನೀಡಲಾಗಿದೆ.
ದೇವಸ್ಥಾನದ ಪರಿಸರವನ್ನು ಅತೀ ಸೂಕ್ಷ್ಮ ವಲಯ ಎಂದು ಘೋಷಣೆ ಮಾಡುವ ಬಗ್ಗೆ ಈಗಾಗಲೇ ಸರಕಾರದ ಮಟ್ಟದಲ್ಲಿ ಚರ್ಚೆ ನಡೆಯುತ್ತಿದ್ದು ಮುಂದಿನ ದಿನಗಳಲ್ಲಿ ಭಕ್ತಾದಿಗಳ ಬೇಡಿಕೆಗಳನ್ನು ಹಂತ ಹಂತವಾಗಿ ಈಡೇರಿಸುವ ಬಗ್ಗೆ ಸರಕಾರದ ಹಂತದಲ್ಲಿ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರಾದ ಸುನಿಲ್ ಕುಮಾರ್ ತಿಳಿಸಿದ್ದಾರೆ.
Illegal quarrying at Karinja temple in Puttur, Sunil Kumar orders to stop it immediately.
18-12-25 11:05 pm
HK News Desk
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm