ಬ್ರೇಕಿಂಗ್ ನ್ಯೂಸ್
18-02-22 08:17 pm Mangalore Correspondent ಕರಾವಳಿ
ಮಂಗಳೂರು, ಫೆ.18 : ಕಳ್ಳತನ ಪ್ರಕರಣದಲ್ಲಿ ಬಂಧಿಸಲ್ಪಟ್ಟಿದ್ದ ಯುವಕನೊಬ್ಬ ನಗರದ ಬಂದರು ಠಾಣೆಯ ಪೊಲೀಸರ ವಶದಲ್ಲಿದ್ದಾಗ ಮೃತಪಟ್ಟಿದ್ದು, ವೆನ್ಲಾಕ್ ಆಸ್ಪತ್ರೆಯ ಬಳಿ ಜನರು ಜಮಾಯಿಸಿದ್ದಾರೆ.
ಉರ್ವಾ ಸ್ಟೋರ್ ನಿವಾಸಿ ರಾಜೇಶ್ ಕರ್ಕೇರ(32) ಮೃತ ಯುವಕ. ಇಂದು ಮಧ್ಯಾಹ್ನ ಬಂದರು ಠಾಣೆಯ ಸೆಲ್ ನಲ್ಲಿದ್ದಾಗ ತೀವ್ರ ಎದೆನೋವು ಉಂಟಾಗಿದ್ದು, ಕೂಡಲೇ ಪೊಲೀಸರು ವೆನ್ಲಾಕ್ ಆಸ್ಪತ್ರೆಗೆ ಕರೆತಂದಿದ್ದಾರೆ. ಆದರೆ ಅದಾಗಲೇ ಯುವಕ ಮೃತಪಟ್ಟಿದ್ದ. ಹೃದಯಾಘಾತದಿಂದ ಮೃತಪಟ್ಟಿದ್ದಾನೆ ಎನ್ನಲಾಗುತ್ತಿದೆ. ಆದರೆ, ಪೊಲೀಸರ ವಿಚಾರಣೆಗೆ ಹೆದರಿ ಯುವಕನಿಗೆ ಹೃದಯಾಘಾತ ಆಗಿದೆಯೇ, ಬೇರಾವುದೇ ಕಾರಣ ಇರಬಹುದೇ ಎಂಬ ಬಗ್ಗೆ ಪೋಸ್ಟ್ ಮಾರ್ಟಂ ವರದಿಯಲ್ಲಿ ತಿಳಿದುಬರಬೇಕು.
ನಗರದ ಜ್ಯೋತಿ ಸರ್ಕಲ್ ಬಳಿ ಸ್ಮಾರ್ಟ್ ಸಿಟಿ ಕಾಮಗಾರಿಗೆಂದು ಇರಿಸಿದ್ದ ಕಬ್ಬಿಣದ ಸಲಕರಣೆಗಳನ್ನು ಕದ್ದೊಯ್ಯುವ ಪ್ರಯತ್ನದಲ್ಲಿದ್ದ ಎಂಬ ಆರೋಪದಲ್ಲಿ ಬೀಟ್ ಪೊಲೀಸರು ರಾಜೇಶ್ ಕರ್ಕೇರ ಮತ್ತು ಇನ್ನೊಬ್ಬ ವ್ಯಕ್ತಿಯನ್ನು ಇಂದು ನಸುಕಿನಲ್ಲಿ ಬಂಧಿಸಿದ್ದರು. ಆನಂತರ, ಇಬ್ಬರನ್ನೂ ಬಂದರು ಠಾಣೆಯ ಪೊಲೀಸರ ವಶಕ್ಕೆ ಒಪ್ಪಿಸಿದ್ದರು. ಇಂದು ಮಧ್ಯಾಹ್ನ ಠಾಣೆಯಲ್ಲಿ ಪೊಲೀಸರ ವಶದಲ್ಲಿದ್ದಾಗಲೇ ರಾಜೇಶನಿಗೆ ಎದೆನೋವು ಕಾಣಿಸಿಕೊಂಡಿದೆ ಎನ್ನಲಾಗುತ್ತಿದ್ದು, ಬಳಿಕ ಆಸ್ಪತ್ರೆಗೆ ಕರೆತಂದಿದ್ದರು. ಆಸ್ಪತ್ರೆಗೆ ತಲುಪಿದಾಗಲೇ ಯುವಕ ಮೃತಪಟ್ಟಿದ್ದ.
ರಾಜೇಶ್ ಕರ್ಕೇರ ಮನೆಗೆ ಸರಿಯಾಗಿ ಹೋಗುತ್ತಿರಲಿಲ್ಲ. ಬೀದಿಯಲ್ಲಿ ಅಲೆಯುತ್ತಿದ್ದುದಲ್ಲದೆ, ಕುಡಿತದ ಚಟ ಅಂಟಿಸಿಕೊಂಡಿದ್ದ. ಮನೆಮಂದಿ ತೀರಾ ಬಡವರಾಗಿದ್ದು, ಮಗನಿಗೆ ಆಗಿರುವ ಆಘಾತದ ಬಗ್ಗೆ ಸರಿಯಾದ ಮಾಹಿತಿ ಹೊಂದಿಲ್ಲ. ಪೊಲೀಸರ ವಿಚಾರಣೆಯಿಂದ ಆಘಾತಗೊಂಡು ಸಾವು ಸಂಭವಿಸಿದೆಯೇ ಎಂಬ ಬಗ್ಗೆ ಪೋಸ್ಟ್ ಮಾರ್ಟಂ ವರದಿಯಲ್ಲೇ ಮಾಹಿತಿ ಬರಬೇಕಷ್ಟೆ.
Mangalore accused dies in Police station of Heart attack in Bunder Police station. The deceased has been identified as 32 year old Rajesh Karkera from Urwa Store. He was arrested on the charges of stealing steel near Jyothi circle. It is said he got chest pain and then died in the hospital.
01-10-25 10:06 pm
HK News Desk
Dharmasthala Case: ಧರ್ಮಸ್ಥಳ ಪ್ರಕರಣ ; ಆದಷ್ಟು ಬ...
30-09-25 07:31 pm
Hassan Blast: ಹಾಸನದಲ್ಲಿ ಅನುಮಾನಾಸ್ಪದ ಸ್ಫೋಟ ; ನ...
30-09-25 04:00 pm
Mahesh Shetty: ಮಹೇಶ್ ಶೆಟ್ಟಿ ತಿಮರೋಡಿ ಗಡೀಪಾರು ಆ...
30-09-25 03:58 pm
ಬಿಎಂಟಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದ ಪ್ರಬ...
30-09-25 01:08 pm
01-10-25 09:44 pm
HK News Desk
Cough Syrup Side Effects Suspected, Kidney Fa...
01-10-25 05:32 pm
ಮುಂಬೈ ಉಗ್ರ ದಾಳಿ ; 17 ವರ್ಷಗಳ ಬಳಿಕ ಪಿ. ಚಿದಂಬರಂ...
01-10-25 04:10 pm
ಫಸ್ಟ್ ನೈಟ್ ಅರ್ಜೆಂಟ್ ಮಾಡಂಗಿಲ್ಲ..! ಮದುಮಗಳ ರಾಗಕ್...
30-09-25 04:08 pm
ಪಾಕಿಸ್ತಾನದ ಕ್ವೆಟ್ಟಾದಲ್ಲಿ ಭಾರೀ ಸ್ಫೋಟ ; ಕಾರಿನಲ್...
30-09-25 04:03 pm
02-10-25 11:43 am
Mangalore Correspondent
Mangalore, Pilinalike 2025: ಪಿಲಿನಲಿಕೆ ಉತ್ಸವಕ್...
01-10-25 11:00 pm
Jayanth, Chinnayya, Dharmasthala Case: ಚಿನ್ನಯ...
01-10-25 04:45 pm
ಮುಳಿಹಿತ್ಲು ಫ್ರೆಂಡ್ಸ್ ಸರ್ಕಲ್ ತಂಡದ ಮುಡಿಗೇರಿದ ಕು...
01-10-25 03:35 pm
ಮಂಗಳೂರು ಪೂರ್ತಿ ಝಗಮಗ ; ಕೋಟಿ ಕೋಟಿ ಮಿನಿಚರ್ ಅಳವಡಿ...
30-09-25 10:57 pm
01-10-25 02:39 pm
Mangalore Correspondent
Ullal Gold Robbery, Mangalore, CCB police: ಜು...
29-09-25 01:24 pm
ಸಹಾಯ ಕೇಳಿ ಬಂದ ಯುವತಿಯನ್ನು ಮದುವೆಯಾಗುತ್ತೇನೆಂದು ನ...
28-09-25 11:08 pm
ವಾಟ್ಸಪ್ ಮೆಸೇಜ್ ನಂಬಿ ಷೇರು ಮಾರುಕಟ್ಟೆ ಹೂಡಿಕೆ ; ನ...
28-09-25 05:04 pm
ಉಡುಪಿ ಬಸ್ ಚಾಲಕ ಸೈಫುದ್ದೀನ್ ಸ್ನೇಹಿತರಿಂದಲೇ ಕೊಲೆ...
28-09-25 04:57 pm