ಬ್ರೇಕಿಂಗ್ ನ್ಯೂಸ್
22-02-22 08:53 pm Mangalore Correspondent ಕರಾವಳಿ
ಮಂಗಳೂರು, ಫೆ.22 : ಶಿವಮೊಗ್ಗದಲ್ಲಿ ಹತ್ಯೆಯಾದ ಬಜರಂಗದಳ ಕಾರ್ಯಕರ್ತ ಹರ್ಷ ಕುಟುಂಬಕ್ಕೆ ಮಂಗಳೂರು ನಗರ ದಕ್ಷಿಣ ಕ್ಷೇತ್ರದ ಬಿಜೆಪಿ ಶಾಸಕ ವೇದವ್ಯಾಸ ಕಾಮತ್ ವೈಯಕ್ತಿಕವಾಗಿ 2 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ. ಇದೇ ವೇಳೆ, ಮಂಗಳೂರು ಉತ್ತರ ಶಾಸಕ ಭರತ್ ಶೆಟ್ಟಿ ತನ್ನ ಒಂದು ತಿಂಗಳ ವೇತನವನ್ನು ಹರ್ಷ ಕುಟುಂಬಕ್ಕೆ ನೀಡುವುದಾಗಿ ಟ್ವೀಟ್ ಮಾಡಿದ್ದಾರೆ.
ಶಾಸಕ ವೇದವ್ಯಾಸ್ ಕಾಮತ್ ಈ ಕುರಿತು ಟ್ವೀಟ್ ಮಾಡಿದ್ದು ಶಿವಮೊಗ್ಗದಲ್ಲಿ ಹತ್ಯೆಗೀಡಾದ ಯುವ ಹಿಂದು ಕಾರ್ಯಕರ್ತ ಹರ್ಷನ ಕುಟುಂಬಕ್ಕೆ ನನ್ನ ವೈಯಕ್ತಿಕ ನೆಲೆಯಿಂದ 2 ಲಕ್ಷ ರೂಪಾಯಿಗಳನ್ನು ನೀಡುತ್ತಿದ್ದೇನೆ. ಸಿದ್ಧಾಂತಕ್ಕಾಗಿ ಬಲಿದಾನಗೈದ ಹರ್ಷನ ಕುಟುಂಬದ ಜವಾಬ್ದಾರಿ ಹಿಂದು ಸಮಾಜದ ಮೇಲಿದೆ. ಹಾಗಾಗಿ ನಮ್ಮಿಂದಾಗುವಷ್ಟು ಸಹಾಯ ಮಾಡೋಣ. ಅವರ ಕುಟುಂಬಕ್ಕೆ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ" ಎಂದು ಹೇಳಿದ್ದಾರೆ.
ಹರ್ಷ ಹತ್ಯೆಯ ಹಿಂದೆ ರಾಷ್ಟ್ರ ವಿರೋಧಿ ಸಂಘಟನೆಗಳ ಕೈವಾಡವಿದೆ. ಹಾಗಾಗಿ ಈ ಹತ್ಯೆಯ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳಕ್ಕೆ ನೀಡಿ, ದುರ್ಘಟನೆಯ ಬಗ್ಗೆ ನಿಷ್ಪಕ್ಷಪಾತವಾಗಿ ತನಿಖೆ ನಡೆಸಲು ಗೃಹ ಸಚಿವರನ್ನು ಆಗ್ರಹಿಸುವುದಾಗಿ ಶಾಸಕ ಕಾಮತ್ ತಿಳಿಸಿದ್ದಾರೆ.
ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಟ್ವೀಟ್ ಮಾಡಿ, ಕೊಲೆಯಾದ ಹರ್ಷನ ಕುಟುಂಬದ ಪರವಾಗಿ ಹಿಂದು ಸಮಾಜ ನಿಲ್ಲಬೇಕು ಎಂದು ಮನವಿ ಮಾಡಿದ್ದರು. ಇದನ್ನು ರೀಟ್ವೀಟ್ ಮಾಡಿದ್ದ ಶಾಸಕ ಭರತ್ ಶೆಟ್ಟಿ ತನ್ನ ಒಂದು ತಿಂಗಳ ಶಾಸಕತ್ವದ ಸಂಬಳವನ್ನು ನೀಡುವುದಾಗಿ ಹೇಳಿದ್ದರು. ಶಾಸಕ ಸ್ಥಾನದ ಸಂಬಳ ಎಪ್ರಿಲ್ ತಿಂಗಳಿನಿಂದ ಅನ್ವಯ ಆಗುವಂತೆ 40 ಸಾವಿರ ಸಿಗಲಿದೆ.
Mangalore Both MLAs Vedavyas Kamath and Bharath Shetty donate their salary to Harsha family who was brutally murdered in Shivamogga.
11-06-26 08:31 pm
HK News Staffer
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
11-06-26 06:37 pm
HK News Staffer
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
11-06-26 08:44 pm
HK News Staffer
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm