ಶಿವಮೊಗ್ಗ ಮತ್ತೆ ಉಡುಪಿಯಲ್ಲಿ ಹಿಜಾಬ್ ಫೈಟ್ ; ಪ್ರಾಕ್ಟಿಕಲ್ ಪರೀಕ್ಷೆಗೆ ಅನುಮತಿ ಕೊಡದೇ ಗೇಟ್ ಪಾಸ್ ! 

28-02-22 06:36 pm       Udupi Correspondent   ಕರಾವಳಿ

ಶಿವಮೊಗ್ಗ ಮತ್ತು ಉಡುಪಿಯಲ್ಲಿ ಹಿಜಾಬ್ ವಿವಾದ ಮತ್ತೆ ತಲೆದೋರಿದ್ದು, ಹಿಜಾಬ್ ಧರಿಸಿ ಬಂದಿದ್ದ ವಿದ್ಯಾರ್ಥಿಗಳಿಗೆ ಪ್ರಾಕ್ಟಿಕಲ್ ಪರೀಕ್ಷೆಗೆ ಹಾಜರಾಗಲು ಅನುಮತಿ ನೀಡದೆ ವಾಪಸ್ಸು ಕಳುಹಿಸಲಾಗಿದೆ.

ಉಡುಪಿ, ಫೆ 28: ಶಿವಮೊಗ್ಗ ಮತ್ತು ಉಡುಪಿಯಲ್ಲಿ ಹಿಜಾಬ್ ವಿವಾದ ಮತ್ತೆ ತಲೆದೋರಿದ್ದು, ಹಿಜಾಬ್ ಧರಿಸಿ ಬಂದಿದ್ದ ವಿದ್ಯಾರ್ಥಿಗಳಿಗೆ ಪ್ರಾಕ್ಟಿಕಲ್ ಪರೀಕ್ಷೆಗೆ ಹಾಜರಾಗಲು ಅನುಮತಿ ನೀಡದೆ ವಾಪಸ್ಸು ಕಳುಹಿಸಲಾಗಿದೆ.

ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ನಂತರ, ಶಿವಮೊಗ್ಗ ನಗರದಲ್ಲಿ ಬಂದ್ ಆಗಿದ್ದ ಶಾಲಾ-ಕಾಲೇಜುಗಳು ಆರಂಭವಾಗುತ್ತಿದ್ದಂತೆಯೇ ಹಿಜಾಬ್ ವಿವಾದ ಮತ್ತೆ ಭುಗಿಲೆದ್ದಿದೆ. ಹಿಂದೂ ಕಾರ್ಯಕರ್ತನ ಹತ್ಯೆ ನಂತರ ನಡೆದ ವ್ಯಾಪಕ ಹಿಂಸಾಚಾರದಿಂದಾಗಿ ಕರ್ಫ್ಯೂ ವಿಧಿಸಿ, ಶಾಲಾ – ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ಪರಿಸ್ಥಿತಿ ಹತೋಟಿಗೆ ಬಂದ ಹಿನ್ನೆಲೆಯಲ್ಲಿ ಇಂದಿನಿಂದ ಶಾಲಾ-ಕಾಲೇಜುಗಳು ಆರಂಭವಾಗಿವೆ.

ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿನಿಯರು ನಗರದ ಡಿವಿಎಸ್ ಕಾಲೇಜಿನ ಮುಂದೆ ಪ್ರತಿಭಟನೆ ನಡೆಸುತ್ತಿದ್ದಾರೆ. ವಿದ್ಯಾರ್ಥಿನಿಯರಿಗೆ ಕಾಲೇಜಿಗೆ ಪ್ರವೇಶ ನೀಡಲು ಆಡಳಿತ ಮಂಡಳಿ ನಿರಾಕರಿಸಿದೆ. ಹಿಜಾಬ್ ಧರಿಸಿಯೇ ತರಗತಿ ಹಾಜರಾಗುವುದಾಗಿ ವಿದ್ಯಾರ್ಥಿನಿಯರು ಪಟ್ಟು ಹಿಡಿದಿದ್ದಾರೆ. ಇದರಿಂದಾಗಿ ಗೊಂದಲ ವಾತಾವರಣ ನಿರ್ಮಾಣವಾಗಿದ್ದು ಭದ್ರತೆ ಕೈಗೊಳ್ಳಲಾಗಿದೆ.

Hijab girls not allowed to appear for practical exam in both Udupi and Shivamogga.